ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವಧಿ ಪುನಃ ವಿಸ್ತರಣೆ
Team Udayavani, Aug 3, 2023, 9:14 PM IST
ನವದೆಹಲಿ: ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತೆ ಒಂದು ವರ್ಷ ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಅವರ ಸೇವಾವಧಿಯನ್ನು ಮತ್ತೆ 1 ವರ್ಷ ವಿಸ್ತರಿಸಲು ಕೇಂದ್ರ ಸರ್ಕಾರವು ಗುರುವಾರ ನಿಯಮಗಳನ್ನು ಸಡಿಲಿಸಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಕಾರ್ಯದರ್ಶಿ ಆಗಿದ್ದ ಗೌಬಾರನ್ನು 2019ರಲ್ಲಿ ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿ ಎರಡು ವರ್ಷಗಳ ಅವಧಿಗೆ ನೇಮಿಸಲಾಗಿತ್ತು.
2021ರಲ್ಲಿ ಹಾಗೂ ಕಳೆದ ವರ್ಷ ಆಗಸ್ಟ್ನಲ್ಲಿ ಅವರಿಗೆ ಒಂದು ವರ್ಷದ ವಿಸ್ತರಣೆ ನೀಡಲಾಯಿತು. ಅವರ ಕಾರ್ಯಾವಧಿ ಇದೇ ಆ.30ರಂದು ಪೂರ್ಣಗೊಳ್ಳುವುದರಲ್ಲಿತ್ತು. ಸದ್ಯ ಬಿ.ಡಿ. ಪಾಂಡೆ ಅವರು ಅತ್ಯಂತ ದೀರ್ಘಾವಧಿಯ ಕೇಂದ್ರ ಸಂಪುಟ ಕಾರ್ಯದರ್ಶಿ ಎನಿಸಿದ್ದಾರೆ. ಇವರು 1972ರ ನ.2ರಿಂದ 1977ರ ಮಾ.31ರವರೆಗೆ ಈ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮುಂದೆ ಗೌಬಾ ಅವರು ಈ ಹಿರಿಮೆಗೆ ಪಾತ್ರರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.