Survey Begins… ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ಆರಂಭ
Team Udayavani, Aug 4, 2023, 8:54 AM IST
ವಾರಣಾಸಿ: ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ತನ್ನ ಸಮೀಕ್ಷೆಯನ್ನು ಶುಕ್ರವಾರ ಪುನರಾರಂಭಿಸಿದೆ.
ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಸಮೀಕ್ಷೆ ಆರಂಭಿಸಲಾಗಿದ್ದು, ಮಸೀದಿಗೆ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಶುಕ್ರವಾರ ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡವು ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿದ್ದು, ಬಿಗಿ ಭದ್ರತೆಯ ನಡುವೆ ಸುಮಾರು 7 ಗಂಟೆಗೆ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಪ್ರಾರಂಭವಾಯಿತು.
ಎಎಸ್‌ಐ ಸಮೀಕ್ಷೆ ಆರಂಭವಾದಾಗ ಜಿಲ್ಲಾಡಳಿತದಿಂದ ನೇಮಕಗೊಂಡವರು ಮಾತ್ರ ಆವರಣದಲ್ಲಿ ಹಾಜರಿದ್ದರು. ಇದೇ ವೇಳೆ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಯನ್ನು ಬಹಿಷ್ಕರಿಸಿದರು.
ASI begins survey of Gyanvapi mosque complex amid tight security
Read @ANI Story | https://t.co/RKQbFuvSaq#ASI #Survey #Gyanvapi pic.twitter.com/2wh9vkb0Ym
— ANI Digital (@ani_digital) August 4, 2023
ಹಿಂದಿನ ಸಮೀಕ್ಷೆಯ ಸಮಯದಲ್ಲಿ ಶಿವ ಮತ್ತು ಪಾರ್ವತಿಯ ಶಿಲ್ಪಗಳು, ವರಾಹ (ವಿಷ್ಣುವಿನ ಹಂದಿ ಅವತಾರ), ಗಂಟೆಗಳು, ತ್ರಿಶೂಲಗಳು ಮತ್ತು ಇತರ ಹಲವು ಪುರಾವೆಗಳು ಸೇರಿದಂತೆ ಹಲವಾರು ಕಲಾಕೃತಿಗಳು ಆವರಣದಲ್ಲಿ ಕಂಡುಬಂದಿವೆ ಎಂದು ಸೋಹನ್‌ಲಾಲ್ ಆರ್ಯ ಹೇಳಿದ್ದಾರೆ.
ಇನ್ನು ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೊರೆಹೋಗಿದ್ದು, (ಇಂದೇ) ಶುಕ್ರವಾರವೇ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.
#WATCH | Varanasi, Uttar Pradesh: ASI (Archaeological Survey of India) to conduct a survey of the Gyanvapi mosque complex today; visuals from outside the Gyanvapi premises pic.twitter.com/AiPVDHrzks
— ANI UP/Uttarakhand (@ANINewsUP) August 4, 2023
ಇನ್ನೊಂದೆಡೆ ಗುರುವಾರ ಕೋರ್ಟ್ ಆದೇಶ ಹೊರಬರುತ್ತಿದ್ದಂತೆ ಬಿಜೆಪಿ ನಾಯಕರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಆ ಸ್ಥಳದಲ್ಲಿ ದೇವಾಲಯದ ಬಗ್ಗೆ “ಸತ್ಯ” ಈಗ ಹೊರಬರಲಿದೆ ಎಂದು ಹೇಳಿದ್ದಾರೆ.
ಇದೊಂದು ಉತ್ತಮ ತೀರ್ಪು. ಸತ್ಯ ಯಾವಾಗಲೂ ಹೊರಬರುತ್ತದೆ, ಸಮಯ ತೆಗೆದುಕೊಳ್ಳುತ್ತದೆ ಆದರೆ ಸತ್ಯ ಹೊರಬರುತ್ತದೆ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.
#WATCH | Varanasi, Uttar Pradesh: A team of the Archaeological Survey of India (ASI) arrives at the Gyanvapi mosque complex to conduct a scientific survey of the complex pic.twitter.com/gvkyH4f62L
— ANI UP/Uttarakhand (@ANINewsUP) August 4, 2023
#WATCH | Varanasi, UP: On ASI survey of the Gyanvapi mosque complex, Subhash Nandan Chaturvedi, Advocate representing the Hindu side on the Gyanvapi case says, “All people (including ASI officials) have reached there. The survey has started. We are also going inside.” pic.twitter.com/vZgDXfldMW
— ANI (@ANI) August 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.