ಪ್ರಚೋದನಾಕಾರಿ ಭಾಷಣ: ಶರಣ್ ಪಂಪ್ ವೆಲ್ ಸೇರಿ ಮೂವರ ವಿರುದ್ಧ ಎಫ್ಐಆರ್
Team Udayavani, Aug 4, 2023, 12:29 PM IST
ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ವಿಹಿಪಂ ಮುಖಂಡರಾದ ಶರಣ್ ಪಂಪ್ ವೆಲ್ ಹಾಗೂ ದಿನೇಶ್ ಮೆಂಡನ್ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ, ಹಿಡಿಯಲು ಸಿದ್ಧರಾಗಬೇಕು” ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಅದೇ ರೀತಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಹಿಂಪ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ.
ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ಮಾತನಾಡಿದ ವೀಣಾ ಶೆಟ್ಟಿ, ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಂದೋಬಸ್ತಿನಲ್ಲಿದ್ದ ಸ್ಥಳೀಯ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.