Telegram app ಮೂಲಕ ಶಿಕ್ಷಕಿಗೆ ವಂಚನೆ ಯತ್ನ: ಸಿನಿಮೀಯ ರೀತಿಯಲ್ಲಿ ಆರೋಪಿ ಬಂಧನ


Team Udayavani, Aug 4, 2023, 3:29 PM IST

ಟೆಲಿಗ್ರಾಂ ಆ್ಯಪ್ ಮೂಲಕ ಶಿಕ್ಷಕಿಗೆ ವಂಚನೆ ಯತ್ನ: ಸಿನಿಮೀಯ ರೀತಿಯಲ್ಲಿ ಆರೋಪಿ ಬಂಧನ

ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ನಕಲಿ ಖಾತೆಯಿಂದ ಶಿಕ್ಷಕಿಯೋರ್ವರಿಗೆ ಬೆದರಿಕೆ ಹಾಕಿರುವುದಲ್ಲದೆ ಒಂದು ಲಕ್ಷ ರೂ. ವಸೂಲಿಗೈದು ವಂಚನೆ ಎಸಗಿರುವ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಡಿ ವೇಣೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ ಹೆಬ್ಬಾರ್ (23 ವ) ಆರೋಪಿಯಾಗಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಎಂಬವರಿಗೆ ನಕಲಿ ಟೆಲಿಗ್ರಾಂ ಖಾತೆ ಬಳಸಿ ಮೂರು ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದ. ಹಣ ನೀಡದೆ ಹೋದಲ್ಲಿ ಪತಿಗೆ ಜೀವಹಾನಿ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ.

ಈ ಬಗ್ಗೆ ಜ್ಯೋತಿ ಅವರು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆಗಿಳಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ., ಆನಂದ ಎಂ. ಪೊಲೀಸರ ತಂಡ ಆ.2ರಂದು ಮಧ್ಯರಾತ್ರಿ ತೆಂಕಕಾರಂದೂರು ಗ್ರಾಮದ ಗುಂಡೇರಿ ಎಂಬಲ್ಲಿಂದ ಬಂಧಿಸಿದ್ದಾರೆ.

ಸಿನಿಮೀಯ ರೀತಿ ಪ್ರಕರಣ: ಮೂರು ಲಕ್ಷ ರೂ. ಬೇಡಿಕೆ ಇಟ್ಟಿದ್ದ ಆರೋಪಿಗೆ ಒಂದು ಲಕ್ಷ ರೂ. ನೀಡುವುದಾಗಿ ಆರೋಪಿಯನ್ನು ಟೆಲಿಗ್ರಾಂನಲ್ಲಿ ಒಪ್ಪಿಸಿದಂತೆ ಆರೋಪಿ ಆ.2 ರಂದು ಸಂಜೆ ಅಳದಂಗಡಿ ಕೆದ್ದು ಸಮೀಪ ಹಣ ಎಸೆದು ಹೋಗಲು ಸೂಚಿಸಿದ್ದ. ಬಳಿಕ ಅಲ್ಲಿ ಎಸೆಯಬೇಡಿ ಎಂದು ಸಂದೇಶ ರವಾನಿಸಿ ಬೇರೊಂದು ಸ್ಥಳವನ್ನು ಸೂಚಿಸಿದ್ದ. ಹೀಗೆ ಮೂರ್‍ನಾಲ್ಕು ಬಾರಿ ಸ್ಥಳವನ್ನು ಬದಲಾಯಿಸುತ್ತಾ ಸಂದೇಶದಲ್ಲೆ ವ್ಯವಹರಿಸುತ್ತಿದ್ದ ಆರೋಪಿ ಶಿರ್ಲಾಲು ಸವಣಾಲು ಕ್ರಾಸ್ ಬಳಿ ಹಣವನ್ನು ವಾಹನದಿಂದ ಎಸೆದು ಹೋಗುವಂತೆ ತಿಳಿಸಿದ್ದ. ಅದರಂತೆ ಹಣದ ಬ್ಯಾಗನ್ನು ಎಸೆದು ಹೋಗಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಹಣದ ಪ್ಯಾಕನ್ನು ಪಡೆಯುವಷ್ಟರಲ್ಲಿ ಮೊದಲೇ ಕಾದು ಕುಳಿತಿದ್ದ ಪೊಲೀಸರು ಹಿಡಿಯಲು ಯತ್ನಿಸಿದ್ದಾರೆ.

ಇದನ್ನೂ ಓದಿ:ಎಡವಟ್ಟು…; ಬ್ಯಾಟಿಂಗ್ ಗೆ ಬಂದ ಚಾಹಲ್ ರನ್ನು ಹಿಂದೆ ಕರೆಸಿದ ಕೋಚ್- ಕ್ಯಾಪ್ಟನ್| Video

ಆದರೆ ಅಚಾನಕ್ ಆಗಿ ತಪ್ಪಿಸಿಕೊಂಡಿದ್ದ ಆರೋಪಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ, ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸರು ತಡರಾತ್ರಿ ಆತನ ಅಣ್ಣನ ಮನೆ ಗುಂಡೇರಿ ಸಮೀಪ ದಸ್ತಗಿರಿ ಮಾಡಿ ಆತ ವಸೂಲಿ ಮಾಡಿದ್ದ ಒಂದು ಲಕ್ಷ ರೂ. ನಗದು, ಕೃತ್ಯಕ್ಕೆ ಉಪಯೋಗಿಸಿದ ಬೈಕನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.