BDA ಅಧಿಕಾರಿಗಳಿಂದ 250 ಕೋ. ರೂ. ಬೇಡಿಕೆ: ಎಚ್.ಡಿ.ಕುಮಾರಸ್ವಾಮಿ ಆರೋಪ
-ಸರಕಾರದ ವಿರುದ್ಧ ಕುಮಾರಸ್ವಾಮಿ ಮತ್ತೆ ಆರೋಪಗಳ ಸುರಿಮಳೆ
Team Udayavani, Aug 4, 2023, 10:38 PM IST
ಬೆಂಗಳೂರು: ವಿದೇಶ ಪ್ರವಾಸದಿಂದ ಹಿಂದಿರುಗಿದ ಕೂಡಲೇ ರಾಜ್ಯ ಸರಕಾರದ ವಿರುದ್ಧ ಆರೋಪಗಳ ಸುರಿಮಳೆಗರೆದಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, 250 ಕೋಟಿ ರೂ. ಸಂಗ್ರಹಿಸಿ ಕೊಡಲು ಬಿಡಿಎ ಅಧಿಕಾರಿಗಳಿಗೆ ಟಾರ್ಗೆಟ್ ನೀಡಲಾಗಿದೆ ಎಂಬ ಹೊಸ ಬಾಂಬ್ ಸಿಡಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಹಿತ ಕಾಂಗ್ರೆಸ್ ಪ್ರಮುಖರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಯುರೋಪ್ ಪ್ರವಾಸ ಮುಗಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಚ್ಡಿಕೆ ಸುದ್ದಿಗಾರರ ಜತೆಗೆ ಮಾತನಾಡಿ, ಕಾಂಗ್ರೆಸ್ ಈಸ್ಟ್ ಇಂಡಿಯಾ ಕಂಪೆನಿಯ ರೀತಿ ರಾಜ್ಯವನ್ನು ಲೂಟಿ ಮಾಡುತ್ತಿದೆ. ಪೊಲೀಸ್ ವರ್ಗಾವಣೆಯಲ್ಲಿ ವೈಎಸ್‌ಟಿ ದಂಧೆಕೋರರು ಶಾಮೀಲಾಗಿದ್ದಾರೆ . ಬಿಡಿಎ ಅಧಿಕಾರಿಗಳಿಂದಲೂ ಹಣಕ್ಕೆ ಬೇಡಿಕೆ ಇಡಲಾಗಿದೆ. ದಿಲ್ಲಿಗೆ ಈ ಹಣ ಕಳಿಸಬೇಕು, ಕೊನೆಪಕ್ಷ 250 ಕೋ. ರೂ. ಕಲೆಕ್ಷನ್ ಆಗಬೇಕೆಂದು ಅಧಿಕಾರಿಯೊಬ್ಬರಿಗೆ ಮಹಾನುಭಾವರು ತಾಕೀತು ಮಾಡುತ್ತಾರೆ. ದುಡ್ಡು ಯಾರಿಗೆ ಸೇರಬೇಕು ಅವರ ಪಟ್ಟಿ ಕೊಡುತ್ತೇವೆ, ಅವರಿಗೆ ನೇರವಾಗಿ ದುಡ್ಡು ತಲುಪಿಸಿ ಎಂದು ಹೇಳುತ್ತಾರಂತೆ. ನಾನು ಯುರೋಪ್‌ನಲ್ಲಿ ಇದ್ದಾಗಲೇ ಈ ಬಗ್ಗೆ ಮಾಹಿತಿ ಬಂತು ಎಂದು ಹೇಳಿದ್ದಾರೆ.
ಬ್ರಿಗೇಡ್ ರಸ್ತೆ ಸಮೀಪವಿರುವ, ಗರುಡಾ ಮಾಲ್ ಹತ್ತಿರದ ಪೊಲೀಸ್ ಮೆಸ್‌ನಲ್ಲಿ ನಡೆದ ಸಭೆಯಲ್ಲಿ ಯಾರೆಲ್ಲ ಇದ್ದರು? ವೈಎಸ್‌ಟಿ ಟ್ಯಾಕ್ಸ್‌ನವರು ಅಲ್ಲೇ ಇದ್ದರಲ್ಲವೇ? ಪೊಲೀಸ್ ವರ್ಗಾವಣೆ ಸಂಬಂಧ ನಡೆದ ಈ ಸಭೆಯಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಇಲಾಖೆಯ ಉನ್ನತ ಅಧಿಕಾರಿಗಳ ಜತೆಗೆ ಈ ವೈಎಸ್‌ಟಿ ಟ್ಯಾಕ್ಸ್ ಕುಳಗಳನ್ನು ಕೂರಿಸಿಕೊಂಡು ಚರ್ಚೆ ಮಾಡಿದ್ದೇಕೆ? ಪೊಲೀಸ್ ಇಲಾಖೆಯ ಸಭೆಯಲ್ಲಿ ಅವರಿಗೇನು ಕೆಲಸ ಎಂದು ಪ್ರಶ್ನಿಸಿದರು.
ದುಡ್ಡಿದ್ದರೆ ಮನೆ ಒಳಕ್ಕೆ ಬನ್ನಿ
ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ. ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮಿಷನ್‌ಗೆ ಬೇಡಿಕೆ ಮಾಡುತ್ತಿ¨ªಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ ಬನ್ನಿ. ಇಲ್ಲವಾದರೆ ಹೊರಗೆ ಇರಿ ಎಂದು ಸಚಿವರ ಚೇಲಾಗಳು ತಾಕೀತು ಮಾಡಿ¨ªಾರೆ. ಇವರು ಹೋಗಿ ದಿಲ್ಲಿಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆಂದು ರಾಹುಲ್ ಗಾಂಧಿಗೆ ಭರವಸೆ ನೀಡುತ್ತಾರೆ. ಇಂಥವರಿಂದ ಪಾರದರ್ಶಕ ಆಡಳಿತ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ತಿರುಗೇಟು
ನಾನು ಪ್ರವಾಸ ಹೋಗಿದ್ದು ಯುರೋಪ್ ದೇಶಗಳಿಗೆ. ನನ್ನ ಕುಟುಂಬ ಸದಸ್ಯರು, ಸಹೋದರ, ಸಹೋದರಿಯರ ಜತೆ ತೆರಳಿ¨ªೆ. ಆದರೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಹೋಗಿ ಸರಕಾರ ಕೆಡವಲು ಷಡ್ಯಂತ್ರ ಮಾಡುತ್ತಿದ್ದಾರೆಂದು ವದಂತಿ ಹಬ್ಬಿಸಿದರು. ಇದು ನಮ್ಮ ರಾಜ್ಯದ ಬೇಹುಗಾರಿಕೆ ಇಲಾಖೆ ಕೆಲಸ ಮಾಡುತ್ತಿರುವ ರೀತಿ ಎಂದು ವ್ಯಂಗ್ಯವಾಡಿದರು.
ಬಾಕ್ಸ್ ಸುದ್ದಿ
ಸಿಎಂ ಸಿದ್ದರಾಮಯ್ಯ ತಿರುಗೇಟು
ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಆ್ಯಂಡ್ ರನ್ ಕೇಸು. ವೃಥಾ ಆರೋಪಗಳನ್ನು ಮಾಡುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಪೆನ್ ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದರೆ? ಪೆನ್ ಡ್ರೈವ್ ಇದ್ದರಲ್ಲವೇ ಹೊರಗೆ ಬಿಡುವುದು ಎಂದು ವ್ಯಂಗ್ಯವಾಡಿದರು.
ನಮ್ಮ ಅಣ್ಣ ಮಾತನಾಡುತ್ತಾ ಇರಬೇಕು. ತಮ್ಮ ಕೇಳುತ್ತಾ ಇರಬೇಕು. ಪಾಪ, ರೆಸ್ಟ್ ತಗೊಂಡು ಬಂದಿದ್ದಾರೆ. ಮೂರು ವರ್ಷಗಳ ಕಾಲ ಒಂದು ದಿನವೂ ಊಟ ನಿದ್ದೆ ಮಾಡದೇ ಪಕ್ಷ ಕಟ್ಟಿದ್ದೇನೆ. ಜನ ಆಶೀರ್ವಾದ ಮಾಡಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ.
ಡಿ.ಕೆ.ಶಿವಕುಮಾರ್, ಡಿಸಿಎಂ
ಫಲಿತಾಂಶದಿಂದ ಕುಮಾರಸ್ವಾಮಿ ಹತಾಶೆಗೊಂಡಿದ್ದಾರೆ. ಸರಕಾರಕ್ಕೆ ಯಾವುದೇ ಆತಂಕವಿಲ್ಲ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರುವುದನ್ನು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.