ಮೀಸಲು ಅನುದಾನ ಬಳಕೆಗೆ BJP ಆಕ್ರೋಶ
Team Udayavani, Aug 5, 2023, 12:35 AM IST
ಬೆಂಗಳೂರು: ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
“ದಲಿತರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಕದ್ದ ಸರಕಾರಕ್ಕೆ ಧಿಕ್ಕಾರ, ದಲಿತ ವಿರೋಧಿ ಮಂತ್ರಿ ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯಗೆ ಧಿಕ್ಕಾರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ’ ಮುಂತಾದ ಘೋಷಣೆಗಳು ಪ್ರತಿಭಟನೆಯಲ್ಲಿ ಮೊಳಗಿದವು. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಕೆ. ಬೆಳ್ಳುಬ್ಬಿ ಸಹಿತ ಅನೇಕ ನಾಯಕರು ಪಾಲ್ಗೊಂಡಿದ್ದರು.
ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ
ರಾಜ್ಯ ಸರಕಾರ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಹಿಂಪಡೆಯದಿದ್ದರೆ ಎಸ್ಸಿ , ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಜನರಿಗೆ ಆಶ್ವಾಸನೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಈಗ ದಲಿತರ ಜೀವನದ ಜತೆ ಆಟ ಆಡುತ್ತಿದೆ ಎಂದು ಆರೋಪಿಸಿದರು.
ನೀವು 34 ಸಾವಿರ ಕೋಟಿ ರೂ. ಕೊಡುವು ದಾಗಿ ಹೇಳಿದ್ದೀರಿ. ಆದರೆ ಸುಮಾರು 23 ಸಾವಿರ ಕೋಟಿ ಮಾತ್ರ ಎಸ್‌ಸಿಪಿ, ಟಿಎಸ್‌ಪಿಗೆ ನೀಡುತ್ತಿದ್ದೀರಿ. ಶಕ್ತಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿಯ 700 ಕೋಟಿ ರೂ. ಮೀಸಲಿಟ್ಟಿದ್ದೀರಿ. ಶಕ್ತಿ ಯೋಜನೆಯಡಿ ಎಸ್ಸಿ, ಎಸ್ಟಿ ಯಾರು ಎಂದು ಹೇಗೆ ಗುರುತಿಸುತ್ತೀರಿ? ಗೃಹ ಲಕ್ಷ್ಮಿ ಯೋಜನೆಯಡಿ ಗೃಹಿಣಿಯರಿಗೆ 5,500 ಕೋಟಿ ರೂ. ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ನೀಡಿದ್ದೀರಿ. ಅವರಲ್ಲಿ ಎಸ್ಸಿ, ಎಸ್ಟಿ ಯಾರು ಅಂತ ಹೇಗಿ ಹುಡುಕುತ್ತೀರಿ ಎಂದು ಪ್ರಶ್ನಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ದಲಿತ ಸಮುದಾಯದವರು. ಆ ಸಮುದಾಯದ ಆಶೀರ್ವಾದದಿಂದ ಮಂತ್ರಿ ಆದವರು. ಅವರಿಗೂ ದಲಿತರಿಗೆ ಆಗುವ ಅನ್ಯಾಯವನ್ನು ತಡೆಯಲು ಆಗುತ್ತಿಲ್ಲವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.