Lalu prasad yadav:ಲಾಲು ಪ್ರಸಾದ್ ಭೇಟಿಯಾಗಿ ಚರ್ಚೆ ನಡೆಸಿದ ರಾಹುಲ್ ಗಾಂಧಿ
Team Udayavani, Aug 5, 2023, 10:24 AM IST
ಹೊಸದಿಲ್ಲಿ: ಮಾನನಷ್ಟ ಪ್ರಕರಣದಲ್ಲಿ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬಳಿಕ ರಾಹುಲ್ ಗಾಂಧಿ ಅವರು ಮತ್ತೆ ಸಂಸದನಾಗಿ ಸಂಸತ್ ಪ್ರವೇಶಿಸಲು ಅರ್ಹತೆ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ ಪಕ್ಷದ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿಯಾದರು.
ಟ್ವಿಟರ್ ನಲ್ಲಿ ಎಐಸಿಸಿ ಈ ಇಬ್ಬರು ನಾಯಕರ ಚಿತ್ರಗಳನ್ನು ಪೋಸ್ಟ್ ಮಾಡಿದೆ. ಲಾಲು ಪ್ರಸಾದ್ ಅವರ ಪುತ್ರಿ, ಸಂಸದೆ ಮಿಸಾ ಭಾರ್ತಿ ಅವರ ನಿವಾಸದಲ್ಲಿ ಶುಕ್ರವಾರ ಭೇಟಿಯಾಗಿದ್ದಾರೆ.
ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಎಸ್ ವೇಣುಗೋಪಾಲ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಉಪಸ್ಥಿತರಿದ್ದರು.
ಈ ಹಿಂದೆ ಪಾಟ್ನಾದಲ್ಲಿ ನಡೆದಿದ್ದ ವಿಪಕ್ಷಗಳ ಸಭೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರು ಲಘು ದಾಟಿಯಲ್ಲಿ ರಾಹುಲ್ ಗಾಂಧಿ ಅವರಿಗೆ ವಿವಾಹವಾಗಲು ಸೂಚಿಸಿದ್ದರು.
आज @RahulGandhi जी ने RJD अध्यक्ष @laluprasadrjd जी से उनके दिल्ली स्थित निवास पर मुलाकात की। pic.twitter.com/NMXa4jP8hi
— Congress (@INCIndia) August 4, 2023
ವಿಪಕ್ಷಗಳ ನೂತನ ಮೈತ್ರಿಯಾದ ಇಂಡಿಯಾದಲ್ಲಿ ಕಾಂಗ್ರೆಸ್ ಮತ್ತು ಆರ್ ಜೆಡಿ ಭಾಗವಾಗಿದೆ. ಈತನ್ಮಧ್ಯೆ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಪಡೆದ ನಂತರ, ದೆಹಲಿಯ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಜನರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಮತ್ತು “ಸತ್ಯಕ್ಕೆ ಯಾವಾಗಲೂ ಜಯವಿದೆ” ಎಂದು ಹೇಳಿದರು.
ಸತ್ಯ ಯಾವಾಗಲೂ ಗೆಲ್ಲುತ್ತದೆ. ಇವತ್ತಲ್ಲದಿದ್ದರೂ ಮುಂದೊಂದು ದಿನ ಸತ್ಯವೇ ಗೆಲುವು ಕಾಣುತ್ತದೆ. ನಾನು ಜನರಿಗೆ ಧನ್ಯವಾದ ಹೇಳಬಯಸುತ್ತೇನೆ ಎಂದು ರಾಹುಲ್ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.