![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 6, 2023, 6:22 PM IST
ಮಡಿಕೇರಿ: ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‌ಬೈಲ್ ನಲ್ಲಿ ನಡೆದಿದೆ.
ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ದುರ್ದೈವಿಯಾಗಿದ್ದಾರೆ.
ತಮ್ಮ ತೋಟದಲ್ಲಿ ಮಾವಿನ ಮರ ಏರಿ ಅದರ ಕೊಂಬೆಗೆ ಕಸಿ ಮಾಡುವ ಸಂದರ್ಭ ರಕ್ತದೊತ್ತಡ ಕಡಿಮೆಯಾಗಿ 50 ಅಡಿ ಎತ್ತರದಿಂದ ನೆಲಕ್ಕೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರು ಆ ವೇಳೆಗೆ ಅವರು ಮೃತಪಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೃತ ಲೋಕೇಶ್ ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯಾಗಿದ್ದ ಲೋಕೇಶ್ ಕಳೆದ 15 ವರ್ಷಗಳ ಕಾಲ ಅಪ್ಪಚ್ಚು ರಂಜನ್ ಅವರ ಗನ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಈ ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಕಂಬನಿ
ಲೋಕೇಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಆಗಮಿಸಿದ ಮಾಜಿ ಶಾಸಕರುಗಳಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಕಂಬನಿ ಮಿಡಿದರು.
ಲೋಕೇಶ್ ಕಾರ್ಯದಕ್ಷತೆಯ ಬಗ್ಗೆ ನೆನಪಿಸಿಕೊಂಡು ಕಣ್ಣೀರು ಹಾಕಿದ ಅಪ್ಪಚ್ಚು ರಂಜನ್ ಅವaರನ್ನು ಬೋಪಯ್ಯ ಸಂತೈಸಿದರು. ಪೊಲೀಸ್ ಇಲಾಖೆ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಪ್ರಮುಖರು ಹಾಗೂ ಸಾರ್ವಜನಿಕರು ಮೃತರ ಅಂತಿಮ ದರ್ಶನ ಪಡೆದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.