ಲೋಕಸಭೆ ಚುನಾವಣೆಯ ಜವಾಬ್ದಾರಿ ನನ್ನದು- ಡಾ.ಜಿ. ಪರಮೇಶ್ವರ್‌

ಸಂಭ್ರಮದ 73ನೇ ವರ್ಷದ ಹುಟ್ಟುಹಬ್ಬ ಆಚರಣೆ

Team Udayavani, Aug 6, 2023, 6:50 PM IST

dr g param

ಕೊರಟಗೆರೆ: ನನಗೆ ಧಮ್ಮು-ತಾಕತ್ತು ಎರಡು ಇದೆ. ಅದಕ್ಕಾಗಿಯೇ 5 ಗ್ಯಾರಂಟಿಯ ಜೊತೆ 76 ಅಂಶದ ಯೋಜನೆ ಅನುಷ್ಟಾನ ಮಾಡ್ತೀವಿ. ಪ್ರತಿವರ್ಷ 36 ಸಾವಿರ ಕೋಟಿ ಅನುಧಾನ ಬಡವರ ಕಲ್ಯಾಣಕ್ಕಾಗಿ ಖರ್ಚು ಮಾಡ್ತೀವಿ. ಬಿಜೆಪಿ ಪಕ್ಷದ ನಾಯಕರಿಗೆ ಬಡವರ ಹಸಿವಿನ ಬಗ್ಗೆ ಕಾಳಜಿ ಇಲ್ಲ. ಮುಂದಿನ 5 ವರ್ಷ ಟೀಕೆ ಮಾಡುವುದೇ ಬಿಜೆಪಿ ಪಕ್ಷದ ನಾಯಕ ಕೆಲಸ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಕೊರಟಗೆರೆ ಪಟ್ಟಣದ ರಾಜೀವ ಭವನದ ಆವರಣದಲ್ಲಿ ಬ್ಲಾಕ್‌ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಮತ್ತು ಡಾ.ಜಿ.ಪರಮೇಶ್ವರ ಅಭಿಮಾನಿ ಬಳಗದ ಡಾ.ಜಿ.ಪರಮೇಶ್ವರ ಅವರ 73 ನೇ ಹುಟ್ಟುಹಬ್ಬದ ಪ್ರಯುಕ್ತ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರ ಮತ್ತು ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ತುಮಕೂರು ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಜವಾಬ್ದಾರಿ ನನ್ನದು. ನಿಮ್ಮನ್ನು ನಂಬಿ ನಾನು ನಮ್ಮ ನಾಯಕ ರಾಹುಲ್‌ಗಾಂಧಿಗೆ ಮಾತು ನೀಡಿದ್ದೇನೆ. ಕಲ್ಪತರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅತಿಹೆಚ್ಚಿನ ಲೀಡ್ ನೀಡಿ ಲೋಕಸಭೆ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕಿದೆ. ನನ್ನ ಸ್ವಕ್ಷೇತ್ರದಲ್ಲಿ ಅತಿಹೆಚ್ಚಿನ ಲೀಡ್ ಬರಬೇಕಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಚುನಾವಣೆಯ ಪ್ರಣಾಳಿಕೆ ಬರೆದವನು ನಾನು. ರಾಜ್ಯದಲ್ಲಿ ಇಲ್ಲಿವರ್ಗು 30ಕೋಟಿ ಜನ ಮಹಿಳೆಯರು ಸರಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡ್ತಿದ್ದಾರೇ. ಉಚಿತ ವಿದ್ಯುತ್ ಯೋಜನೆಗೆ ನಾವು ಚಾಲನೆ ನೀಡಿದ್ದೇವೆ. ೫ಕೆಜಿ ಅಕ್ಕಿ ಮತ್ತು ೫ಕೆಜಿಯ ಹಣ ನಿಮ್ಮ ಖಾತೆಗೆ ಬರ್ತಿದೆ. ಕೇಂದ್ರ ಸರಕಾರ ನಮ್ಮ ಜನರಿಗೆ ಅಕ್ಕಿ ನೀಡಲು ನಿರಾಕರಿಸಿದೆ. ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದೆ. ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾವಗಡ ಶಾಸಕ ವೆಂಕಟೇಶ್, ಎಂಎಲ್‌ಸಿ ವೇಣುಗೋಪಾಲ್, ಕೆಪಿಸಿಸಿ ಕಾರ್ಯದರ್ಶಿ ಮುರುಳಿಧರ ಹಾಲಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್, ಅಶ್ವತ್ಥನಾರಾಯಣ್, ಮಹಿಳಾಧ್ಯಕ್ಷೆ ಜಯಮ್ಮ, ಯುವಧ್ಯಕ್ಷ ಬೈರೇಶ್, ಉಪಾಧ್ಯಕ್ಷ ದೀಪಕ್, ಮುಖಂಡರಾದ ಎಂಎಲ್‌ಜೆ ಮಂಜುನಾಥ, ವಾಲೇಚಂದ್ರಯ್ಯ, ಬಲರಾಮಯ್ಯ, ಓಬಳರಾಜು, ನಂದೀಶ್, ನಾಗರಾಜು, ಜಯರಾಮು, ವೆಂಕಟೇಶಬಾಬು, ವಿನಯ್, ರಘುವೀರ್ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಕಾಡು ಹಂದಿ ಬೇಟೆಗೆ ಇಟ್ಟಿದ್ದ ಸಜೀವ ಬಾಂಬ್ ಪತ್ತೆ: ಬಾಂಬ್ ನಿಷ್ಕ್ರೀಯ ದಳದಿಂದ ಕಾರ್ಯಾಚರಣೆ

ರಕ್ತದಾನ ಮತ್ತು ಆರೋಗ್ಯ ಶಿಬಿರ
ಗೃಹಸಚಿವ ಡಾ.ಜಿ.ಪರಮೇಶ್ವರ 73 ನೇ ಹುಟ್ಟುಹಬ್ಬದ ಪ್ರಯುಕ್ತ ಕೊರಟಗೆರೆ ಯುವಕಾಂಗ್ರೆಸ್ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಬ್ರೇಡ್ ವಿತರಣೆ. ಕೊರಟಗೆರೆ ಪಟ್ಟಣದ ರಾಜೀವ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಕೊರಟಗೆರೆ ಕ್ಷೇತ್ರದ ಜನತೆಗೆ ಸಿಹಿಯೂಟ ಮತ್ತು 10 ಸಾವಿರಕ್ಕೂ ಅಧಿಕ ಲಾಡುಗಳ ವಿತರಣೆ ಮಾಡಲಾಯಿತು. ನೂರಾರು ಜನ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಿಹಿಹಂಚಿ ಸಂಭ್ರಮಿಸಿದರು.

ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ
ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಹೆಚ್ಚು ಸದಸ್ಯತ್ವ ಮಾಡಿದ ಮುಖಂಡರು ಮತ್ತು ಬೂತ್‌ನಲ್ಲಿ ಅತಿಹೆಚ್ಚು ಮತಗಳ ಲೀಡ್ ನೀಡಿದ ಬೂತ್ ಅಧ್ಯಕ್ಷರು ಮತ್ತು ಸದಸ್ಯರಿಗೆ ಸನ್ಮಾನ ಮಾಡುತ್ತೇನೆ. ಕೊರಟಗೆರೆ ಕ್ಷೇತ್ರದಲ್ಲಿ ನನ್ನ ವಿಜಯೋತ್ಸವ ಮತ್ತು ಮತದಾರ ಪ್ರಭುಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಂದಿನ ದಿನಗಳಲ್ಲಿ ಅದ್ದೂರಿಯಿಂದ ನಡೆಯಲಿದೆ.

ಜಿಪಂ-ತಾಪಂ ಚುನಾವಣೆಗೆ ಸಜ್ಜಾಗಿ..
ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಚುನಾವಣೆಯು ಅತಿ ಶಿರ್ಘದಲ್ಲಿ ನಡೆಯಲಿದೆ. ಕೊರಟಗೆರೆ ಕ್ಷೇತ್ರದ 6 ಜಿಪಂ ಮತ್ತು 16 ತಾಪಂ ಕ್ಷೇತ್ರಕ್ಕೆ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಅಭ್ಯರ್ಥಿಗಳು ಚುನಾವಣೆಗೆ ಸಜ್ಜಾಗಬೇಕಿದೆ. ಜನರ ಆರ್ಶಿವಾದ ಮತ್ತು ಅವರ ನಡುವೆ ಇರುವ ಮುಖಂಡರಿಗೆ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಮಣೆ ಹಾಕುತ್ತೇವೆ. ಅಭ್ಯರ್ಥಿಯ ಆಯ್ಕೆಯ ತಿರ್ಮಾನ ನಮ್ಮ ಕಾಂಗ್ರೆಸ್ ಪಕ್ಷದ ವರಿಷ್ಟರಿಗೆ ಬಿಟ್ಟಿದ್ದು.

ಅಭಿಮಾನಿ ದೇವರುಗಳ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಾಋಣಿ. ಕರ್ನಾಟಕ ರಾಜ್ಯ ಮತ್ತು ತುಮಕೂರು ಜಿಲ್ಲೆಯಲ್ಲಿ ನನ್ನ ಹುಟ್ಟುಹಬ್ಬದ ಸಂಭ್ರಮ ಮನೆಮಾಡಿದೆ. ನನ್ನ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಅಭಿಮಾನಿ ಬಳಗಗಳಿಂದ ನನ್ನ ಹೆಸರಿನಲ್ಲಿ ದೇವರಿಗೆ ಅಭಿಷೇಕ, ರಕ್ತದಾನ ಶಿಬಿರ ಮತ್ತು ಆರೋಗ್ಯ ಶಿಬಿರ ನಡೆದಿವೆ. ಯಾವ ಜನ್ಮದ ಪುಣ್ಯವೂ ನನಗೇ ಗೋತ್ತಿಲ್ಲ ನಿಮ್ಮೆಲ್ಲರ ಋಣವನ್ನ ತೀರಿಸ್ತೀನಿ.
– ಡಾ.ಜಿ.ಪರಮೇಶ್ವರ. ಗೃಹಸಚಿವ. ಕರ್ನಾಟಕ.

ಇದನ್ನೂ ಓದಿ: Yogi Adityanath ವಿರುದ್ಧ ಕಾಮೆಂಟ್ ಮಾಡಿದ್ದಕ್ಕಾಗಿ ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.