ಜಮೀನು ವಿವಾದ, ಹಲ್ಲೆ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶರಣು
ಮೂವರ ವಿರುದ್ದ ಪ್ರಕರಣ ದಾಖಲು....ಆರೋಪಿಗಳು ಪರಾರಿ
Team Udayavani, Aug 6, 2023, 7:10 PM IST
ಹುಣಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದರಿಂದ ಅವಮಾನಿತರಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಕುಡಿನೀರುಮುದ್ದನಹಳ್ಳಿ ಗ್ರಾಮದ ಗುರುರಾವ್ ಭಾಂಗೆ(೬೦) ಆತ್ಮಹತ್ಯೆಗೆ ಶರಣಾದವರು. ಪತ್ನಿ, ಮಕ್ಕಳಿದ್ದಾರೆ. ಈ ಸಂಬಂಧ ಪತ್ನಿ ಮಂಜುಳಾ ಬಾಯಿ ಪತಿಯ ಆತ್ಮಹತ್ಯೆಗೆ ಗ್ರಾಮದ ಮಹೇಶ್ ಮತ್ತವರ ಪತ್ನಿ ಸಾಕಮ್ಮ ಹಾಗೂ ಇವರ ಪುತ್ರ ರಂಜನ್‌ರ ಕಿರುಕುಳವೇ ಕಾರಣವೆಂದು ದೂರು ದಾಖಲಿಸಿದ್ದಾರೆ.
ಘಟನೆ ವಿವರ: ತರೀಕಲ್ ಗ್ರಾಮದಲ್ಲಿ ಗುರುರಾವ್ ಬಾಂಗೆಗೆ ೨.೦೫ಎಕರೆ ಜಮೀನಿದ್ದು, ಪಕ್ಕದ ಜಮೀನಿನ ಮಹೇಶ್ ಮತ್ತು ಕುಟುಂಬದವರು ಗುರುರಾವ್ ಬಾಂಗೆ ಜಮೀನಿನಲ್ಲಿ ೧೬ಗುಂಟೆ ನಮ್ಮ ಕುಟುಂಬಕ್ಕೆ ಸೇರಬೇಕೆಂದು ಹಿಂದಿನಿಂದಲೂ ಗುರುರಾವ್ ಭಾಂಗೆ ಕುಟುಂಬಕ್ಕೂ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಕಳೆದ ಎರಡು ವರ್ಷಗಳ ಹಿಂದೆ ಜಮೀನು ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು.
ಪೊಲೀಸರ ಎಚ್ಚರಿಕೆ:
ಶುಕ್ರವಾರ ಸಹ ಮಹೇಶ್ ಮತ್ತು ಗುರುರಾವ್ ಬಾಂಗೆ ನಡುವೆ ಗಲಾಟೆಯಾಗಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರನ್ನು ಕರೆಸಿ ಜಮೀನು ವಿವಾದ ನ್ಯಾಯಾಲಯದಲ್ಲಿದ್ದು, ಆದೇಶ ಹೊರಬೀಳುವವರೆಗೆ ಇಬ್ಬರೂ ಸಹ ಗಲಾಟೆ ಮಾಡಿಕೊಳ್ಳದಂತೆ ಎಚ್ಚರಿಸಿ ಕಳುಹಿಸಿದ್ದರು.
ಅವಮಾನ ತಾಳಲಾರದೆ ಆತ್ಮಹತ್ಯೆ:
ಈ ನಡುವೆ ಶುಕ್ರವಾರ ಸಂಜೆ ಮತ್ತೆ ಗಲಾಟೆ ನಡೆದಿದ್ದು, ಮಹೇಶ್ ಮತ್ತವರ ಪತ್ನಿ ಸಾಕಮ್ಮ ಇವರ ಪುತ್ರ ರಂಜನ್‌ರವರು ಗುರುರಾವ್ ಭಾಂಗೆ ಅವರಿಗೆ ಕುಡಿನೀರು ಮುದ್ದನಹಳ್ಳಿ ಗ್ರಾಮದ ಸರ್ಕಲ್‌ನಲ್ಲಿ ಚಪ್ಪಲಿಯಿಂದ ಮನಬಂದಂತೆ ಥಳಿಸಿ ಅಪಮಾನ ಮಾಡಿದ್ದರಿಂದ ಮನನೊಂದ ಗುರುರಾವ್‌ಭಾಂಗೆ ಶನಿವಾರ ಮುಂಜಾನೆ ತಮ್ಮ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡಿದ್ದವರನ್ನು ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ತಮ್ಮ ಪತಿಯ ಸಾವಿಗೆ ಮಹೇಶ್, ಆತನ ಪತ್ನಿ ಸಾಕಮ್ಮ ಹಾಗೂ ಇವರ ಪುತ್ರ ರಂಜನ್‌ರವರುಗಳೇ ಕಾರಣವೆಂದು ಗುರುರಾವ್‌ಭಾಂಗೆ ಪತ್ನಿ ಮಂಜುಳಾಬಾಯಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.