![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 6, 2023, 9:27 PM IST
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಗಜಪಡೆಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, 14 ಆನೆಗಳನ್ನು ಎರಡು ತಂಡಗಳಲ್ಲಿ ಮೈಸೂರಿಗೆ ಕರೆತರಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.
ಆನೆಗಳ ಆಯ್ಕೆ ಸಂಬಂಧ ಈಗಾಗಲೇ ಅರಣ್ಯ ಇಲಾಖೆ ಮತ್ತು ವೈದ್ಯರ ತಂಡ ಮತ್ತಿಗೋಡು, ದುಬಾರೆ, ಆನೆಕಾಡು, ಭಿಮನಕಟ್ಟೆ, ರಾಂಪುರ, ಬಳ್ಳೆ ಶಿಬಿರಗಳಿಗೆ ತೆರಳಿ ಒಂದು ಸುತ್ತಿನ ಪರೀಕ್ಷೆ ನಡೆಸಿತ್ತು. ಡಿಸಿಎಫ್ ಸೌರಭ್ ಕುಮಾರ್ ನೇತೃತ್ವದ ತಂಡ ಆ.2ರಂದು ಮತ್ತೆ ಮತ್ತಿಗೋಡು, ಭೀಮನಕಟ್ಟೆ, 3ರಂದು ದುಬಾರೆ ಮತ್ತು ಆನೆಕಾಡು ಆನೆ ಶಿಬಿರ ಹಾಗೂ ಆ.5ರಂದು ರಾಂಪುರ ಮತ್ತು ಬಳ್ಳೆ ಶಿಬಿರಗಳಿಗೆ ತೆರಳಿ ಆನೆಗಳನ್ನು ಪರಿಶೀಲಿಸಲಾಗಿದೆ. ವಾರಾಂತ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ದಸರೆಗೆ ಭಾಗವಹಿಸುವ 14 ಆನೆಗಳ ಪಟ್ಟಿ ಮತ್ತು ಗಜಪಯಣ ನಡೆಯುವ ದಿನಾಂಕ ನಿಗದಿಯಾಗಲಿದೆ.
ಪಟ್ಟಿಯಲ್ಲಿ ಎರಡು ಹೊಸ ಆನೆ: ದುಬಾರೆ ಸಾಕಾನೆ ಶಿಬಿರದ ಗಂಡಾನೆಯಾದ ಕಂಜನ್ ಮತ್ತು ರಾಂಪುರ ಶಿಬಿರದ ಹೆಣ್ಣಾನೆ ಹಿರಣ್ಯಾ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದು, ಅಂತಿಮ ಆಯ್ಕೆಯಲ್ಲಿಯೂ ಸ್ಥಾನ ಪಡೆದರೆ ದಸರೆಯಲ್ಲಿ ಪಾಲ್ಗೊಳ್ಳಲಿವೆ. ಮೊದಲ ಹಂತದಲ್ಲಿ ಅಭಿಮನ್ಯು, ಮಹೇಂದ್ರ, ಕರ್ನಾಟಕ ಭೀಮ, ವರಲಕ್ಷ್ಮೀ, ಲಕ್ಷ್ಮೀ, ಅರ್ಜುನ, ಧನಂಜಯ ಹಾಗೂ ಗೋಪಿ ಆನೆಗಳು ಬರುವ ಸಾಧ್ಯತೆಗಳಿವೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.