world cup cricket: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ- ಭಾರತಕ್ಕೆ ಬರಲಿದೆ ಪಾಕ್ ತಂಡ!
Team Udayavani, Aug 7, 2023, 7:45 AM IST
ಇಸ್ಲಾಮಾಬಾದ್: ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಭಾಗಿಯಾಗುವ ಕುರಿತಂತೆ ಇದ್ದ ಎಲ್ಲ ಅನುಮಾನಗಳು ಇತ್ಯರ್ಥವಾಗಿದ್ದು, ಪಾಕ್ ವಿದೇಶಾಂಗ ಇಲಾಖೆಯು ಪಾಕ್ ಕ್ರಿಕೆಟ್ ತಂಡಕ್ಕೆ ಭಾರತ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ.
ಪಾಕಿಸ್ತಾನವು ಮೊದಲಿನಿಂದಲೂ, ಕ್ರೀಡೆಯನ್ನು ರಾಜಕೀಯದಿಂದ ದೂರವೇ ಇಟ್ಟಿದೆ. ಹೀಗಾಗಿ, ನಾವು ಭಾರತಕ್ಕೆ ಕ್ರಿಕೆಟ್ ತಂಡ ಕಳುಹಿಸಲು ನಿರ್ಧರಿಸಿದ್ದೇವೆ. ಭಾರತದಲ್ಲೇ ನಡೆಯುವ 2023ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕ್ ತಂಡ ಭಾಗಿಯಾಗಲಿದೆ. ಅಲ್ಲದೆ, ಭಾರತದ ಜತೆಗಿನ ದ್ವಿಪಕ್ಷೀಯ ಸಂಬಂಧದ ವಿವಾದದಿಂದಾಗಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಪಂದ್ಯಾವಳಿ ಮೇಲೆ ಪರಿಣಾಮ ಬೀರಬಾರದು ಎಂಬುದು ನಮ್ಮ ಉದ್ದೇಶ ಎಂದು ವಿದೇಶಾಂಗ ಇಲಾಖೆ ಪ್ರಕಟಣೆ ಹೊರಡಿಸಿದೆ.
ಇಷ್ಟೇ ಅಲ್ಲ, ಪಾಕಿಸ್ತಾನ ಕ್ರಿಕೆಟ್ ತಂಡದ ಭದ್ರತೆ ಬಗ್ಗೆಯೂ ನಾವು ಆತಂಕ ಹೊಂದಿದ್ದು, ಈ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಬಗ್ಗೆ ಹಂಚಿಕೊಂಡಿದ್ದೇವೆ. ನಮ್ಮ ತಂಡಕ್ಕೆ ಪೂರ್ಣ ಭದ್ರತೆ ಸಿಗಲಿದೆ ಎಂಬ ಭರವಸೆಯೂ ಇದೆ ಎಂದು ಹೇಳಿದೆ.
ಸದ್ಯದಲ್ಲೇ ಏಷ್ಯಾ ಕಪ್ ಪಂದ್ಯಾವಳಿ ನಡೆಯಲಿದ್ದು, ಶ್ರೀಲಂಕಾ ಮತ್ತು ಪಾಕಿಸ್ತಾನ ಆಯೋಜನೆ ಮಾಡಲಿವೆ. ಪಾಕಿಸ್ತಾನ ಮಾತ್ರ ಏಷ್ಯಾ ಕಪ್ ಆಯೋಜನೆ ಮಾಡಬೇಕಿತ್ತು. ಆದರೆ, ಭಾರತ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲು ಒಪ್ಪದ ಕಾರಣದಿಂದಾಗಿ, ಅನಿವಾರ್ಯವಾಗಿ ಭಾರತದ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸಲಾಗಿದೆ. ಈ ವಿವಾದದಿಂದಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣ ಬೆಳೆಸುವುದು ಅನುಮಾನ ಎಂಬ ಮಾತುಗಳಿದ್ದವು. ಅಲ್ಲದೆ, ಕೆಲವೊಂದು ಕ್ರೀಡಾಂಗಣಗಳ ಬಗ್ಗೆಯೂ ಪಾಕಿಸ್ತಾನ ಕ್ಯಾತೆ ತೆಗೆದಿತ್ತು. ಈಗ ಎಲ್ಲ ವಿವಾದಗಳು ಅಂತ್ಯಗೊಂಡು, ಪಾಕಿಸ್ತಾನ ಭಾರತ ಪ್ರವಾಸ ಕೈಗೊಳ್ಳುವುದು ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.