ತುಂಗಭದ್ರಾ ಎಡದಂಡೆ ಕಾಲುವೆ ಹರ್ಲಾಪೂರ ಎಸ್ಕೇಪ್ ಕ್ರಸ್ಟ್ ಗೇಟ್ ನಲ್ಲಿ ನೀರಿನ ಸೋರಿಕೆ

ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ ಆರಂಭ

Team Udayavani, Aug 7, 2023, 10:01 AM IST

3-gangavathi

ಗಂಗಾವತಿ: ತುಂಗಭದ್ರ ಎಡದಂಡೆ ಕಾಲುವೆ ಮೈಲ್ 10 ಹರ್ಲಾಪೂರ ಬಳಿ ಎಸ್ಕೇಪ್ ಕ್ರಸ್ಟ್ ಗೇಟ್ ಇತ್ತೀಚೆಗೆ ದುರಸ್ತಿ ಮಾಡಿದ್ದ ಜಾಗದಲ್ಲಿ ಆ.7ರ ಸೋಮವಾರ ಬೆಳಗಿನ ಜಾವದಿಂದ ನೀರಿನ ಸೋರಿಕೆಯಾಗುತ್ತಿದೆ.

ಇತ್ತೀಚಿಗೆ ಇದೇ ಎಸ್ಕೇಪ್ ಕ್ರಸ್ಟ್‌ ಗೇಟ್ ದುರಸ್ತಿಗೊಳಿಸಿ ಹೊಸ ಕ್ರಸ್ಟ್‌ ಗೇಟ್ ಗಳನ್ನು ಕೂರಿಸಲಾಗಿದ್ದು, ಗೇಟ್ ಗಳ ಅಕ್ಕಪಕ್ಕದಲ್ಲಿ ನೀರಿನ ಸೋರಿಕೆಯಾಗುತ್ತಿದ್ದು, ಬಲಬದಿಯ ಗೋಡೆಯಿಂದಲೂ ಸಣ್ಣ ಪ್ರಮಾಣದ ಸೋರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.

ಕಳೆದ ವರ್ಷ ಇಲ್ಲಿನ ಎಸ್ಕೇಪ್ ಕ್ರಸ್ಟ್‌ ಗೇಟ್ ನೀರಿನ ಒತ್ತಡದ ಹಿನ್ನೆಲೆ ಬೆಂಡ್ ಆಗಿತ್ತು. ಅಧಿಕಾರಿಗಳು ಕಾಲುವೆಯಲ್ಲಿ ನೀರು ಕಡಿಮೆ ಮಾಡದೇ ಮರಳಿನ ಚೀಲಗಳನ್ನು ಗೇಟ್ ಹಿಂಭಾಗದಲ್ಲಿ ಜೋಡಿಸಿ ಮುಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗೆ ನೀರು ಹರಿಸಿ ರೈತರಿಗೆ ಅನುಕೂಲ ಮಾಡಿದ್ದರು.

ಈ ಭಾರಿ ಮುಂಗಾರು ಮಳೆ ತಡವಾಗಿದ್ದರಿಂದ ಕಾಲುವೆ ದುರಸ್ತಿ ಕಾರ್ಯಗಳು ತಡವಾಗಿ ಆರಂಭಿಸಿ ಎಸ್ಕೇಪ್ ಕ್ರಸ್ಟ್‌ ಗೇಟ್ ದುರಸ್ತಿಗೆ ಜಾಗತಿಕ ಟೆಂಡರ್ ತಾಂತ್ರಿಕ ತೊಂದರೆಯ ಪರಿಣಾಮ ಕಳೆದ ವಾರ ದಾವಣಗೆರೆ ಮೂಲದ ಕಂಪನಿಗೆ ಎಸ್ಕೇಪ್ ಕ್ರಸ್ಟ್‌ ಗೇಟ್ ದುರಸ್ತಿ ಮಾಡಲು ಟೆಂಡರ್ ವಹಿಸಿ ಒಂದು ವಾರದಲ್ಲಿ ಕಾಮಗಾರಿ ಮುಕ್ತಾಯ ಮಾಡಲಾಗಿತ್ತು.

ಸೋಮವಾರ ಬೆಳಿಗ್ಗೆ ಎಸ್ಕೇಪ್ ಕ್ರಸ್ಟ್‌ ಗೇಟ್ ಬಳಿ ನೀರು ಸೋರಿಕೆಯಾಗುತ್ತಿದ್ದು, ಸ್ಥಳದಲ್ಲಿದ್ದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸದ್ಯ ಕಾಲುವೆಗೆ 4 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದ್ದು, ರಾಯಚೂರು ಜಿಲ್ಲೆಯ ಕುಡಿಯುವ ನೀರಿಗಾಗಿ ಎಲ್ಲಾ ಉಪಕಾಲುವೆಗಳ ಗೇಟ್ ಬಂದ್ ಮಾಡಲಾಗಿದ್ದು,  ಸೋರಿಕೆಯ ಪರಿಣಾಮ ಕಾಲುವೆಯಲ್ಲಿ ನೀರಿನ ಹರಿಯುವಿಕೆ ಕಡಿಮೆ ಮಾಡುವ ಸಾಧ್ಯತೆ ಇದೆ.

ರೈತರಿಗೆ ಆತಂಕ ಬೇಡ:

ಹರ್ಲಾಪುರ್ ಎಸ್ಕೇಪ್ ಟ್ರಸ್ಟ್ ಗೇಟ್  ಬಳಿ ಸಣ್ಣ ಪ್ರಮಾಣದ ನೀರಿನ ಸೋರಿಕೆಯಾಗುತ್ತಿದ್ದು, ಹೊಸದಾಗಿ ಹಾಕಿದ್ದ ಕ್ರಸ್ಟ್ ಗೇಟ್ ರಬ್ಬರ್ ಪುನಃ ಜೋಡಣೆ ಮಾಡಲಾಗುತ್ತಿದ್ದು, ಅದರೊಂದಿಗೆ ಮರಳಿನ ಚೀಲಗಳನ್ನು ಗೇಟ್ ಹಿಂಭಾಗದಲ್ಲಿ ಹಾಕುವಂತೆ ಸೂಚನೆ ನೀಡಲಾಗಿದೆ.

ಸದ್ಯ ಕಾಲುವೆಯಲ್ಲಿ 4000 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಇದೀಗ 90 ಮೈಲ್ ನಷ್ಟು  ನೀರು ತಲುಪಿದ್ದು,  ರಾಯಚೂರಿಗೆ ಶೀಘ್ರವೇ ನೀರು ತಲುಪಲಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ, ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ಸಮರೋಪಾದಿಯಲ್ಲಿ ಸೋರಿಕೆಯನ್ನು ತಡೆಯಲಿದ್ದಾರೆ. ಕಾಲುವೆಯಲ್ಲಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣ ಕಡಿಮೆ ಮಾಡುವ ಅವಶ್ಯಕತೆ ಇಲ್ಲ. ರೈತರು ಆತಂಕ ಪಡದಂತೆ ತುಂಗಭದ್ರಾ ಡ್ಯಾಂ ಜಲಾನಯನ ಯೋಜನೆಯ ಮುಖ್ಯ ಅಭಿಯಂತರ ಬಸವರಾಜ ಉದಯವಾಣಿ ಜೊತೆ ಮಾತನಾಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.