Spandana: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ
Team Udayavani, Aug 7, 2023, 10:39 AM IST
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ವಿದೇಶಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಥೈಲ್ಯಾಂಡ್ ನಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ಪ್ರವಾಸದಲ್ಲಿದ್ದ ವೇಳೆ ಅವರಿಗೆ ಲೋ ಬಿಪಿ ಆಗಿ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎನ್ನಲಾಗಿದೆ.
ಸ್ಪಂದನಾ ವಿಜಯ್ ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಜನಿಸಿದರು. ಮಾಜಿ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರು ನಟ ವಿಜಯ್ ರಾಘವೇಂದ್ರ ಅವರನ್ನು 2007ರಲ್ಲಿ ವಿವಾಹವಾದರು. ಸ್ಪಂದನಾ ಅವರು 2016 ರಲ್ಲಿ ವಿ. ರವಿಚಂದ್ರನ್ ಜೊತೆಗೆ “ಅಪೂರ್ವ” ಚಿತ್ರದಲ್ಲಿ ನಟಿಸಿದ್ದಾರೆ.
ನಾಳೆ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.