National Animal: ಹುಲಿ ಬದಲಿಗೆ ರಾ. ಪ್ರಾಣಿಯಾಗಿ ಗೋವಿಗೆ ಸ್ಥಾನ…? ಸರ್ಕಾರ ಹೇಳಿದ್ದೇನು?
Team Udayavani, Aug 7, 2023, 6:33 PM IST
ಹೊಸದಿಲ್ಲಿ: ಭಾರತದ ರಾಷ್ಟ್ರೀಯ ಪ್ರಾಣಿ ಬದಲಾವಣೆ ಮಾಡುವ ಬಗ್ಗೆ ಸರ್ಕಾರ ಯೋಚಿಸುತ್ತಿದೆಯೇ? ಈ ಬಗ್ಗೆ ಸಂಸತ್ ನಲ್ಲಿಯೇ ಪ್ರಶ್ನೆಯೇ ಕೇಳಲಾಗಿದೆ.
ಬಿಜೆಪಿ ಸಂಸದರೊಬ್ಬರು ಸಂಸತ್ ನಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸುವ ಬಗ್ಗೆ ಯೋಚನೆಯಿದೆಯೇ ಎಂದು ಕೇಳಿದ್ದಾರೆ.
ಅಜ್ಮೀರ್ ಸಂಸದ ಭಾಗೀರಥ್ ಚೌಧರಿ ಅವರು ಸೋಮವಾರ ಸಂಸತ್ತಿನ ಕೆಳಮನೆಯಲ್ಲಿ ಲಿಖಿತ ಪ್ರಶ್ನೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವರಿಗೆ ಈ ಪ್ರಶ್ನೆಯನ್ನು ಕೇಳಿದರು, ಇದಕ್ಕೆ ಯಾವುದೇ ನೇರ ಪ್ರತಿಕ್ರಿಯೆಯನ್ನು ನೀಡಲಾಗಿಲ್ಲ.
ಸಂಸತ್ತಿನಲ್ಲಿ ಶಾಸನವನ್ನು ತರುವ ಮೂಲಕ “ಭಾರತೀಯ ಮತ್ತು ಸನಾತನ ಸಂಸ್ಕೃತಿಯ ರಕ್ಷಣೆ ಮತ್ತು ಪುನರುಜ್ಜೀವನವನ್ನು ಪರಿಗಣಿಸಿ, ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ‘ಗೋ ಮಾತೆ’ವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿದೆಯೇ” ಎಂಬುದನ್ನೂ ಒಳಗೊಂಡಂತೆ ಅವರು ಹಲವಾರು ಪ್ರಶ್ನೆಗಳನ್ನು ಕೇಳಿದರು.
ಇದನ್ನೂ ಓದಿ:IPL: ಲಾರಾಗೆ ಗೇಟ್ ಪಾಸ್: ನೂತನ ಕೋಚ್ ನೇಮಿಸಿದ ಸನ್ ರೈಸರ್ಸ್ ಹೈದರಾಬಾದ್
ಇದಕ್ಕೆ ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ರೆಡ್ಡಿ ಉತ್ತರಿಸಿ, ಪಶುಸಂಗೋಪನಾ ಇಲಾಖೆಯು ತಿಳಿಸುವಂತೆ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಶಾಸಕಾಂಗ ಅಧಿಕಾರಗಳ ವಿತರಣೆಯ ಅಡಿಯಲ್ಲಿ, (ಸಂವಿಧಾನದ 246 (3) ವಿಧಿ) ಪ್ರಾಣಿಗಳ ಸಂರಕ್ಷಣೆಯು ರಾಜ್ಯ ಶಾಸಕಾಂಗವು ಶಾಸನ ಮಾಡಲು ವಿಶೇಷ ಅಧಿಕಾರವನ್ನು ಹೊಂದಿರುವ ವಿಷಯವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಾಡಿದ ಪ್ರಯತ್ನಗಳಿಗೆ ಪೂರಕವಾಗಿ ಮತ್ತು ಪ್ರೇರಕವಾಗಿ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ಸ್ಥಳೀಯ ತಳಿಯ ಜಾನುವಾರು ಸೇರಿದಂತೆ ಸ್ಥಳೀಯ ತಳಿಗಳ ಅಭಿವೃದ್ಧಿ ಮತ್ತು ರಕ್ಷಣೆಗಾಗಿ ರಾಷ್ಟ್ರೀಯ ಗೋಕುಲ ಮಿಷನ್ ಅನ್ನು ಅನುಷ್ಠಾನಗೊಳಿಸುತ್ತಿದೆ. ಇಲಾಖೆಯು ಹಸು ಮತ್ತು ಅದರ ಸಂತತಿ ಸೇರಿದಂತೆ ಪ್ರಾಣಿಗಳನ್ನು ರಕ್ಷಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸಹ ಸ್ಥಾಪಿಸಿದೆ” ಎಂದು ಅವರು ಹೇಳಿದರು.
ಹುಲಿಯು ಭಾರತದ ರಾಷ್ಟ್ರೀಯ ಪ್ರಾಣಿ ಮತ್ತು ನವಿಲು ರಾಷ್ಟ್ರೀಯ ಪಕ್ಷಿ ಆಗಿದೆ ಎಂದು ಅವರು ಉತ್ತರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.