Parliamentary panel ನ್ಯಾಯಮೂರ್ತಿಗಳ ಆಸ್ತಿ ಘೋಷಣೆ ಮಾಡಲು ಕಾನೂನು ಬೇಕು
ಸಂಸತ್ನ ಸ್ಥಾಯಿ ಸಮಿತಿಯ ಶಿಫಾರಸು ಪ್ರತಿ ವರ್ಷ ಈ ಘೋಷಣೆ ಅಗತ್ಯ
Team Udayavani, Aug 8, 2023, 7:45 AM IST
ನವದೆಹಲಿ: ನ್ಯಾಯಮೂರ್ತಿಗಳು ತಾವು ಹೊಂದಿರುವ ಆಸ್ತಿಯನ್ನು ಪ್ರತಿ ವರ್ಷವೂ ಕಡ್ಡಾಯವಾಗಿ ಘೋಷಣೆ ಮಾಡುವ ಬಗ್ಗೆ ಕಾನೂನು ಜಾರಿಗೆ ತರಬೇಕು ಎಂದು ಸಂಸತ್ನ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ.
ಕಾನೂನು ಮತ್ತು ನ್ಯಾಯ ವಿಚಾರಗಳಿಗಾಗಿನ ಸ್ಥಾಯಿ ಸಮಿತಿ ಈ ಅಭಿಪ್ರಾಯಪಟ್ಟಿದೆ. ಪ್ರತಿ ವರ್ಷ ನಿಯಮಿತವಾಗಿ ನ್ಯಾಯಮೂರ್ತಿಗಳು ತಾವು ಹೊಂದಿರುವ ಆಸ್ತಿಯ ವಿವರಗಳನ್ನು ಘೋಷಣೆ ಮಾಡಬೇಕು. ಜತೆಗೆ ಅದು ಸಾರ್ವಜನಿಕರ ಗಮನಕ್ಕೆ ಬರುವಂತಾಗಬೇಕು. ಇಂಥ ಕ್ರಮದಿಂದ ಉನ್ನತ ನ್ಯಾಯಾಂಗದ ಮೇಲೆ ಇರುವ ಜನರ ನಂಬಿಕೆ ಮತ್ತಷ್ಟು ದೃಢವಾಗಲಿದೆ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ನೇತೃತ್ವದ ಸಮಿತಿ ಪ್ರತಿಪಾದಿಸಿದೆ.
1997 ಮೇ 7ರಂದು ಸುಪ್ರೀಂಕೋರ್ಟ್ನ ಅಂದಿನ ಪೂರ್ಣ ಪ್ರಮಾಣದ ನ್ಯಾಯಮೂರ್ತಿಗಳ ಸಭೆಯಲ್ಲಿ ಕೂಡ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ನ ನ್ಯಾಯಮೂರ್ತಿಗಳು ಪಾಲಿಸಬೇಕಾಗದ ಕೆಲವೊಂದು ನೈತಿಕ ಅಂಶಗಳ ಬಗ್ಗೆ ಚರ್ಚೆ ನಡೆಸಿತ್ತು ಎಂದು ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಅದರ ಅನ್ವಯ ನ್ಯಾಯಮೂರ್ತಿಗಳು ತಾವು ಹೊಂದಿರುವ ಆಸ್ತಿಯ ವಿವರ ಘೋಷಣೆ ಮಾಡುವ ಬಗ್ಗೆಯೂ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.