Congress ಭಿನ್ನಾಭಿಪ್ರಾಯ ಶಮನಕ್ಕಿಳಿದ ಸಿಎಂ ಸಿದ್ದರಾಮಯ್ಯ
ಸಮನ್ವಯ ಅಖಾಡಕ್ಕೆ ಇಳಿದ ಸಿಎಂ
Team Udayavani, Aug 8, 2023, 7:05 AM IST
ಬೆಂಗಳೂರು: ಸಚಿವರು ಮತ್ತು ಶಾಸಕರ ನಡುವಿನ ಅಂತರ ಹಾಗೂ ಭಿನ್ನಾಭಿಪ್ರಾಯ ಶಮನಕ್ಕೆ ಸ್ವತಃ ಅಖಾಡಕ್ಕೆ ಇಳಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಜತೆ ಸಂವಾದ ಪ್ರಾರಂಭಿಸಿದ್ದು, ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಪಕ್ಷದ ಒಗ್ಗಟ್ಟು ಸಡಿಲವಾಗದಂತೆ ತಂತ್ರಗಾರಿಕೆ ನಡೆಸಿದ್ದಾರೆ.
ಒಂದೆಡೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಶಾಸಕರ ಸಿಡುಕು, ಇನ್ನೊಂದೆಡೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ದು ಮಾಡಿದ ಪತ್ರ ಸಮರದ ಜತೆಗೆ ಸರಕಾರದ ವರ್ಚಸ್ಸು ಕಾಪಾಡುವಂತೆ ದಿಲ್ಲಿಯಲ್ಲಿ ವರಿಷ್ಠರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಸಮನ್ವಯ ಸಾಧನೆಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಜತೆ ಸೇರಿ ಅಭಿಪ್ರಾಯ ಸಂಗ್ರಹ ಪ್ರಾರಂಭಿಸಿದ್ದಾರೆ. ಈ ಪ್ರಯತ್ನದ ಮೊದಲ ಭಾಗವಾಗಿ ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ, ಧಾರವಾಡ ಜಿಲ್ಲೆಯ ಶಾಸಕ ರೊಂದಿಗೆ ಚರ್ಚೆ ನಡೆಸಲಾಗಿದೆ. ಈ ವಾರ ಪೂರ್ತಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
ಶಾಸಕಾಂಗ ಪಕ್ಷದ ಸಭೆಗೆ ಮುನ್ನ ನಡೆದ ಪತ್ರ ಸಮರ ಹಿನ್ನೆಲೆಯಲ್ಲಿ ಈ ಸಭೆ ವಿಶೇಷವಾಗಿ ಗಮನ ಸೆಳೆದಿತ್ತು. ಆದರೆ ಅಸಮಾಧಾನಿತ ಶಾಸಕರು ಇಂದಿನ ಸಭೆಯಲ್ಲಿ ಉಪಸ್ಥಿತ ರಿರಲಿಲ್ಲವಾದ್ದರಿಂದ ಮೊದಲ ದಿನದ ಚರ್ಚೆ ಸುಸೂತ್ರವಾಗಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಎದುರು ಕುಳ್ಳಿರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಿಗೆ ಮಾತನಾಡುವಂತೆ ಸೂಚಿಸಿದ್ದರಿಂದ ಆರೋಪ- ಪ್ರತ್ಯಾರೋಪಕ್ಕೆ ಅವಕಾಶವಿರಲಿಲ್ಲ.
ಸಚಿವರು ಹಾಗೂ ಶಾಸಕರ ಹೊಂದಾಣಿಕೆ ಬಗ್ಗೆ ಸಭೆಯಲ್ಲಿ ಪಾಠ ಮಾಡಿದ ಸಿದ್ದರಾಮಯ್ಯ, ಲೋಕಸಭಾ ಚುನಾ ವಣೆ ಹೊಸ್ತಿಲಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕು. ವಿಪಕ್ಷಗಳ ಬಾಯಿಗೆ ಆಹಾರವಾಗಬಾರದು. ಹೊಂದಾ ಣಿಕೆಯ ಜತೆಗೆ ಲೋಕಸಭಾ ಚುನಾ ವಣೆಗೆ ಇಂದಿನಿಂದಲೇ ಕೆಲಸ ಮಾಡ ಬೇಕು ಎಂದು ಸಲಹೆ ನೀಡಿದರು.
ಅನುದಾನಕ್ಕೆ ಕಾಯಬೇಕು
ಎಲ್ಲ ಜಿಲ್ಲೆಯ ಶಾಸಕರು ಸಭೆಯಲ್ಲಿ ಕ್ಷೇತ್ರಾಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮಾಡಿದ ಮನವಿಗೆ ಸಿಎಂ ಸಿದ್ದರಾಮಯ್ಯ “ಕಾಯುವಿಕೆ’ಯ ಪಾಠ ಮಾಡಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಗೆ ಬದ್ಧವಾಗಿದೆ. 5 ಗ್ಯಾರಂಟಿಗಳ ಅನುಷ್ಠಾನ ಸಮರ್ಪಕವಾಗಿ ನಡೆಯುತ್ತಿದೆಯೋ ಇಲ್ಲವೋ ಎಂಬುದನ್ನು ವರಿಷ್ಠರು ಹಾಗೂ ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ. ಹೀಗಾಗಿ ಈ ಐದು ಯೋಜನೆಗಳಿಗೆ ಆದ್ಯತೆ ನೀಡಲೇಬೇಕಿದೆ. ಇದರ ಅರ್ಥ ನಿಮ್ಮ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂದಲ್ಲ. ಆದರೆ ಸದ್ಯಕ್ಕೆ ವಿಶೇಷ ಅನುದಾನ ನೀಡಲು ಸಾಧ್ಯವಿಲ್ಲ. ಮುಂದಿನ ಬಜೆಟ್‌ವರೆಗೆ ಅಂದರೆ ಇನ್ನು 8 ತಿಂಗಳು ಕಾಯಬೇಕಾಗುತ್ತದೆ. ಗ್ಯಾರಂಟಿಯ ಜತೆಗೆ ಅಭಿವೃದ್ಧಿ ಕಾರ್ಯಗಳು ಹಿಂದೆ ಬೀಳುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂಬ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.
ಕ್ಷೇತ್ರವಾರು ತನಿಖೆ ನಡೆಸಿ
ಹಿಂದಿನ ಸರಕಾರದ ಅವಧಿಯಲ್ಲಿ ನಡೆದ ಹಗರಣದ ಬಗ್ಗೆ ಕ್ಷೇತ್ರವಾರು ತನಿಖೆ ನಡೆಸುವಂತೆ ಕೆಲವು ಶಾಸಕರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು. ಚುನಾವಣೆಗೆ ಮುನ್ನ ನಾವು ಬಿಜೆಪಿ ಶಾಸಕರ ಅಕ್ರಮದ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಕಾರ್ಯಕರ್ತರ ಮುಂದೆ ಭರವಸೆ ನೀಡಿದ್ದೇವೆ. ಈಗ ಆ ಪ್ರಕಾರ ನಡೆದುಕೊಳ್ಳಬೇಕಿದೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ತನಿಖೆ ನಡೆಸಿ ಎಂದು ಒತ್ತಾಯಿಸಿದ್ದಾರೆ.
ಬಾಗಿನಕ್ಕೆ ಆಹ್ವಾನ
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವಂತೆ ಬಾಗಲ ಕೋಟೆ ಜಿಲ್ಲೆಯ ಶಾಸಕರು ಹಾಗೂ ಉಸ್ತುವಾರಿ ಸಚಿವರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ಗೆ ಮನವಿ ಮಾಡಿದರು. ಆ. 20ರ ಬಳಿಕ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವುದು ಬಹುತೇಕ ಅಂತಿಮಗೊಂಡಿದೆ.
ಶಾಸಕರ ಆಗ್ರಹ ಏನು?
-ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ಬೇಕು
-ವರ್ಗಾವಣೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಅಭಿಪ್ರಾಯಕ್ಕೆ ಬೆಲೆ ನೀಡಲಿ
-ಹಿಂದಿನ ಸರಕಾರದ ಅವಧಿಯ ಹಗರಣಗಳ ತನಿಖೆಯಾಗಲಿ
-ಸಚಿವರು ಜಿಲ್ಲೆಗೆ ಬಂದು ಸಭೆ ನಡೆಸಲಿ
-ಅಧಿಕಾರಿಗಳು ಶಾಸಕರ ಮಾತಿಗೆ ಗೌರವ ನೀಡಲಿ
ಸಿಎಂ ಭರವಸೆ ಏನು?
-8 ತಿಂಗಳುಗಳ ಬಳಿಕ ವಿಶೇಷ ಅನುದಾನಕ್ಕೆ ಕ್ರಮ
-ಸಚಿವರು ಜಿಲ್ಲೆಯಲ್ಲಿ ಸಭೆ ನಡೆಸಲಿದ್ದಾರೆ
-ವರ್ಗಾವಣೆ ವಿಚಾರದಲ್ಲಿ ಶಾಸಕರ ಮಾತಿಗೆ ಬೆಲೆ
-ಗ್ಯಾರಂಟಿ ಯೋಜನೆಯನ್ನು ಜನರಿಗೆ ತಲುಪಿಸಿ
-ಅರ್ಹ ಫಲಾನುಭವಿಗಳು ಯೋಜನೆ ವ್ಯಾಪ್ತಿಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಿ
-ಲೋಕಸಭಾ ಚುನಾವಣೆಗೆ ತಯಾರಿ ನಡೆಸಿ
ಒಂದು ವಾರ ಶಾಸಕರ ಜತೆಗೆ ಈ ಸಭೆ ಮುಂದುವರಿಯುತ್ತದೆ. ಶಾಸಕರ ಅಹವಾಲುಗಳನ್ನು ಆಲಿಸಿದ್ದೇವೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕೊಟ್ಟ ಭರವಸೆ ಪ್ರಕಾರ ಜಿಲ್ಲಾವಾರು ಶಾಸಕರ ಅಭಿಪ್ರಾಯ ಕೇಳುತ್ತಿದ್ದೇವೆ. ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಕಾರಣ ನಡೆಸುವುದಿಲ್ಲ. ಬಿಜೆಪಿ ಶಾಸಕರ ಜತೆಯೂ ಸಭೆ ನಡೆಸುತ್ತೇವೆ.
-ಡಿ.ಕೆ. ಶಿವಕುಮಾರ್, ಡಿಸಿಎಂ
ಇಂದಿನ ಸಭೆಯಲ್ಲಿ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಶಾಸಕರು ತಮ್ಮ ಅಹವಾಲುಗಳನ್ನು ಹೇಳಿಕೊಂಡಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.
-ಕೆ.ಎನ್. ರಾಜಣ್ಣ,
ಸಹಕಾರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.