Vitla: ನೆರೆಮನೆ ಕಿರಿಕಿರಿ : ಮಹಿಳೆಯ ಮಾನಭಂಗಕ್ಕೆ ಯತ್ನ, ನಾಲ್ವರ ವಿರುದ್ಧ ಪ್ರಕರಣ ದಾಖಲು
Team Udayavani, Aug 8, 2023, 12:11 PM IST
ಸಾಂದರ್ಭಿಕ ಚಿತ್ರ
ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ನೆರೆಹೊರೆಯ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾನಭಂಗ ಯತ್ನ ನಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಬಳಬೆಟ್ಟು ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಜೈನುಲ್ ಅಬೀದ್ ಅವರ ಪತ್ನಿ ಆಯಿಶತ್ ಮುಬೀನಾ ಅವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಅದೇ ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಆರೋಪಿಗಳಾದ ಹನ್ನತ್, ಆಕೆಯ ಸಹೋದರಿ, ಆಕೆಯ ತಾಯಿ, ಹಾಗೂ ಹನ್ನತ್ ಮಾವನ ವಿರುದ್ಧ ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಮುಬೀನಾ ತನ್ನ ತವರು ಮನೆಗೆ ಹೋಗಲು ಹೊರಡುತ್ತಿದ್ದ ಸಮಯ ನೆರೆ ಮನೆಯ ನಿವಾಸಿ ಹನ್ನತ್ ಮಗಳಾದ ಮಹದಿಗೆ ಕೆಟ್ಟ ಶಬ್ದಗಳಿಂದ ಬೈಯುತ್ತಿದ್ದರು. ಈ ಬಗ್ಗೆ ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಹನ್ನತ್ ನ ಮಾವ ಮೈಮೇಲೆ ಕೈ ಹಾಕಿ ಬುರ್ಖಾವನ್ನು ಹರಿದು ಹಾಕಿ, ಮಾನಭಂಗ ಯತ್ನಿಸಿದ್ದು ಆ ಸಮಯ ಮುಬೀನಾ ನೆಲಕ್ಕೆ ಬಿದ್ದಾಗ ಹೊಟ್ಟೆಗೆ ಹನ್ನತ್ ಮತ್ತು ಆಕೆಯ ತಾಯಿ ಕಾಲಿನಿಂದ ತುಳಿದುದರಿಂದ ಗಾಯಗೊಂಡಿರುತ್ತಾರೆ. ಗಾಯಾಳುಗಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.