Bommai;ಕೇಂದ್ರ ಸಚಿವ ಅಮಿತ್ ಶಾ ಭೇಟಿಯಾದ ಬಸವರಾಜ ಬೊಮ್ಮಾಯಿ: ವಿಪಕ್ಷ ಸ್ಥಾನ ಆಯ್ಕೆ ಚರ್ಚೆ
Team Udayavani, Aug 8, 2023, 6:27 PM IST
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ (ಆಗಸ್ಟ್ 08) ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಇದನ್ನೂ ಓದಿ:Sanju Samson ಒಳ್ಳೆಯ ವ್ಯಕ್ತಿ, ಆದರೆ…: ವಿಶ್ವಕಪ್ ತಂಡದ ಬಗ್ಗೆ ಅಶ್ವಿನ್ ಮಾತು
ಬೊಮ್ಮಾಯಿ ಅವರು ಸೋಮವಾರ ದಿಲ್ಲಿಗೆ ಆಗಮಿಸಿದ್ದು, ನಿಗದಿತ ಕಾರ್ಯಕ್ರಮದಂತೆ ಕೇಂದ್ರ ಸಚಿವ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯದ ಕುರಿತು ಚರ್ಚೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನದ ಆಯ್ಕೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿದೆನು. @AmitShah pic.twitter.com/3FXROC2Nkp
— Basavaraj S Bommai (@BSBommai) August 8, 2023
ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೊಮ್ಮಾಯಿ ಅವರನ್ನು ಮಾತುಕತೆ ಆಹ್ವಾನಿಸಿದ್ದರು ಎಂದು ಮೂಲಗಳು ಹೇಳಿವೆ.
ಈಗಾಗಲೇ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸುರೇಶ್ ಕುಮಾರ್, ವಿ.ಸುನೀಲ್ ಕುಮಾರ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಅರವಿಂದ್ ಬೆಲ್ಲದ್ ಅವರ ಹೆಸರು ವಿಪಕ್ಷ ನಾಯಕನ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವ ಬಗ್ಗೆ ಹೆಸರು ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.