koteshwara; ಕೋಟೇಶ್ವರದಲ್ಲಿ ಜಿಲ್ಲೆಯ ಪ್ರಥಮ ವಿದ್ಯುತ್ ಚಿತಾಗಾರ
ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Team Udayavani, Aug 9, 2023, 6:06 PM IST
ಕೋಟೇಶ್ವರ: ಉಡುಪಿ ಜಿಲ್ಲೆಯಲ್ಲೇ ಪ್ರಥಮವಾಗಿ ಕೋಟೇಶ್ವರದ ಹಿಂದೂ ರುದ್ರಭೂಮಿಯಲ್ಲಿನ ವಿದ್ಯುತ್ ಚಿತಾಗಾರ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ.
ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ 71 ಲಕ್ಷ ರೂ. ಬಿಡುಗಡೆ ಗೊಳಿಸಿದ್ದರು. ಅವರ ಪ್ರಯತ್ನದ ಫಲವಾಗಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿ ಹಂತ-ಹಂತವಾಗಿ ರಂಭಗೊಂಡಿದ್ದು, ಬಹುತೇಕ ನಿರ್ಮಾಣದ ಕೊನೆಯ ಹಂತದಲ್ಲಿದೆ. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು 25 ಲ. ರೂ. ಬಿಡುಗಡೆಗೊಳಿಸಿದ್ದಾರೆ.
ಉಡುಪಿ ನಿರ್ಮಿತಿ ಕೇಂದ್ರದಿಂದ ಕಾಮಗಾರಿ ಆರಂಭದ ಹಂತದಲ್ಲಿ ಗುತ್ತಿಗೆದಾರರೋರ್ವರು ಕಾಮಗಾರಿ ಉಸ್ತುವಾರಿ ವಹಿಸಿದ್ದರು. ತದನಂತರ ಉಡುಪಿ ನಿರ್ಮಿತಿ ಕೇಂದ್ರದ ವತಿಯಿಂದ ಇದರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಂದಗತಿ
ಯಲ್ಲಿ ಸಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೋಟೇಶ್ವರ ಗ್ರಾ.ಪಂ. ಪ್ರಯತ್ನ ಕೋಟೇಶ್ವರ ಗ್ರಾ.ಪಂ. ವತಿಯಿಂದ ಕಾಮಗಾರಿಯ ಅನುಷ್ಠಾನಗೊಳಿಸಲು ಅಂದಾಜು ಪಟ್ಟಿ ತಯಾರಿಸಿ, ವಿಧಾನಪರಿಷತ್ ಸದಸ್ಯ ಹಾಗೂ ಸಭಾಪತಿಯಾಗಿದ್ದ, ಪ್ರತಾಪ್ ಚಂದ್ರಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಮಾಜಿ ಗ್ರಾ.ಪಂ. ಅಧ್ಯಕ್ಷರು, ಸದಸ್ಯರ ಸಹಿತ ಹಾಲಿ ಅಧ್ಯಕ್ಷ ಕೃಷ್ಣ ಗೊಲ್ಲ ಹಾಗೂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಡಳಿತ ಮಂಜೂರಾತಿಗೆ ಶ್ರಮಿಸಿದ್ದರು. ಜಿಲ್ಲಾಧಿಕಾರಿಗಳು, ಎಸಿ ಹಾಗೂ ತಹಶೀಲ್ದಾರರು ಈ ಪ್ರಸ್ತಾವನೆಗೆ ಅನುಮತಿ ನೀಡಿದ್ದರು.
1.05 ಎಕ್ರೆ ವಿಸ್ತೀರ್ಣದ ವಿಶಾಲ ಜಾಗ ಕೋಟೇಶ್ವರ ರಾ.ಹೆದ್ದಾರಿಯ ಸನಿಹದಲ್ಲೇ ಒಂದು ಎಕ್ರೆಗೂ ಮಿಕ್ಕಿ ಜಾಗದಲ್ಲಿ ಕಟ್ಟಿಗೆಯಿಂದ ಸುಡುವ ಚಿತಾಗಾರ, ಹಿಂದೂ ಸಮಾಜದ ಕೆಲವು ಶವ ಹೂಳುವ ಪದ್ಧತಿಯ ವಿಧಿವಿಧಾನ ಅನುಸರಿಸುವ ಪ್ರತ್ಯೇಕ ಜಾಗ ಸಹಿತ ವಿದ್ಯುತ್ ಚಿತಾಗಾರ ಕಾಮಗಾರಿ ಆರಂಭಗೊಂಡಿರುವುದು ಜಿಲ್ಲೆಯಲ್ಲೇ ಪ್ರಥಮ ಹಾಗೂ ವಿಶೇಷವಾಗಿದೆ.
ಮೂರು ಪ್ರತ್ಯೇಕ ಶವಸಂಸ್ಕಾರದ ವ್ಯವಸ್ಥೆ ಕೋಟೇಶ್ವರ ಗ್ರಾ.ಪಂ.ನ ಮಾಜಿ ಅಧ್ಯಕ್ಷರು, ಸದಸ್ಯರ ಸಹಿತ ಪಿಡಿಒ ಅವರು ವಿದ್ಯುತ್ ಚಿತಾಗಾರ ನಿರ್ಮಾಣದ ಬಗ್ಗೆ ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದ್ದರು.ಅವರ ಪ್ರಯತ್ನದ ಫಲವಾಗಿ 71 ಲ.ರೂ. ಅನುದಾನ ಬಿಡುಗಡೆಯಾಗಿದೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಸಹ 25 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಒಂದೇ ಸೂರಿನಡಿ ಮೂರು ಪ್ರತ್ಯೇಕ ಶವಸಂಸ್ಕಾರದ ವ್ಯವಸ್ಥೆ ಭರದಿಂದ ಸಿದ್ಧಗೊಳ್ಳುತ್ತಿದೆ.
ಕೃಷ್ಣ ಗೊಲ್ಲ, ಅಧ್ಯಕ್ಷರು, ಕೋಟೇಶ್ವರ ಗ್ರಾ.ಪಂ.
*ಡಾ| ಸುಧಾಕರ ನಂಬಿಯಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.