ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸಿ: ಉಡುಪಿ ಜಿ. ಪಂ. CEO ಪ್ರಸನ್ನ
Team Udayavani, Aug 10, 2023, 12:01 AM IST
ಉಡುಪಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಕುಡಿಯುವ ನೀರಿನ ಮೂಲಗಳು ಯಾವುದೇ ರೀತಿಯಲ್ಲಿ ಕಲುಷಿತವಾಗಿರದೇ ಸಾರ್ವಜನಿಕರ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರದಂತೆ ನೋಡಿಕೊಳ್ಳಬೇಕು. ಕುಡಿಯಲು ಯೋಗ್ಯವಾಗಿರುವ ಕುರಿತಂತೆ ಪರಿಶೀಲಿಸಿ, ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಸೂಚನೆ ನೀಡಿದರು.
ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟುವ ಬಗ್ಗೆ ಬುಧವಾರ ಆಯೋಜಿಸಲಾದ ವೀಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.
ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಲ್ಲಿ ಆ ನೀರನ್ನು ಸೇವಿಸುವ ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಎಲ್ಲ ಕುಡಿಯುವ ನೀರು ಸರಬರಾಜು ಮೂಲಗಳಲ್ಲಿನ ನೀರನ್ನು ಪರೀಕ್ಷೆಗೆ ಒಳಪಡಿಸುವಂತೆ ಮತ್ತು ಆ ಪ್ರದೇಶದಲ್ಲಿ ಯಾವುದೇ ಕಲುಷಿತ ಪದಾರ್ಥ ಅಥವಾ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗದಂತೆ ಎಚ್ಚರ ವಹಿಸಬೇಕು. ಆ ಪ್ರದೇಶವನ್ನು ಕಸ ಕಡ್ಡಿ ಇಲ್ಲದಂತೆ ಹಾಗೂ ಪೊದೆಗಳು ಬೆಳೆಯದಂತೆ ಸೂಕ್ತ ರೀತಿಯಲ್ಲಿ ಸ್ವತ್ಛಗೊಳಿಸ ಬೇಕು ಎಂದರು.
ಟ್ಯಾಂಕ್ ಶುಚಿತ್ವಕ್ಕೆ ಸೂಚನೆ
ಎಲ್ಲ ಗ್ರಾ.ಪಂ.ಗಳಲ್ಲಿ 15ನೇ ಹಣಕಾಸು ಯೋಜನೆಯಡಿ ಲಭ್ಯವಿರುವ ಅನುದಾನದ ಬಳಸಿಕೊಂಡು ಓವರ್ ಹೆಡ್ ಟ್ಯಾಂಕ್‌ಗಳನ್ನು ಸ್ವತ್ಛಗೊಳಿಸಬೇಕು ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕ್ಲೋರಿನೇಶನ್ ಮಾಡಿಸಬೇಕು. ಎಲ್ಲ ಪಂಚಾಯತ್‌ಗಳಲ್ಲಿ ಫಾಗಿಂಗ್ ಯಂತ್ರಗಳನ್ನು ಶೀಘ್ರದಲ್ಲಿ ಖರೀದಿಸಿ, ಕೀಟ ಜನ್ಯ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್‌ಗಳು ಎಲ್ಲ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸ್ವತ್ಛತೆಯ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದರು.
ಜಾಗೃತಿಗೆ ಸೂಚನೆ
ಮಕ್ಕಳಲ್ಲಿ ಸಾಂಕ್ರಾಮಿಕ ರೋಗಗಳು, ಅದರಲ್ಲೂ ಡಯಾರಿಯಾ ಬೇಗನೇ ಹರಡುವುದರಿಂದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ನೀರು ಶುದ್ಧೀಕರಣ ಫಿಲ್ಟರ್‌ಗಳನ್ನು ಲಭ್ಯವಿರುವ ಅನುದಾನದಲ್ಲಿ ಖರೀದಿಸಿ, ಅಳವಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾಂಕ್ರಾಮಿಕ ರೋಗಗಳ ಹರಡುವಿಕೆ ಮತ್ತು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಜಿಂಗಲ್ಸ್ ಸಿದ್ಧಪಡಿಸಿ, ಅದನ್ನು ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಣ ವಾಹನಗಳ ಮೂಲಕ ವ್ಯಾಪಕ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ (ಪ್ರಭಾರ) ಡಾ| ವಾಸುದೇವ ಉಪಾಧ್ಯಾಯ, ಶುದ್ಧ ಕುಡಿಯುವ ನೀರಿನ ಪ್ರಾಮುಖ್ಯತೆ, ಕಲುಷಿತ ನೀರು ಮತ್ತು ಆಹಾರದಿಂದ ಹರಡುವ ಕಾಯಿಲೆಗಳ ಬಗ್ಗೆ ಮತ್ತು ಅವುಗಳನ್ನು ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ವೈಯಕ್ತಿಕ ಶುಚಿತ್ವ ಮತ್ತು ಕೈಗಳ ಶುಚಿತ್ವ ಹಾಗೂ ಕ್ಲೋರಿನೇಷನ್ ವಿಧಾನದ ಬಗ್ಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ನಾಗಭೂಷಣ ಉಡುಪ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್ ಭಟ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮರಾವ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲೆಯ ಆರೋಗ್ಯ ಇಲಾಖೆಯ ಎಲ್ಲ ವೈದ್ಯಾಧಿಕಾರಿಗಳು, ಎಲ್ಲ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ವಿಭಾಗದ ಎಂಜಿನಿಯರ್‌ಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವೀಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.