CLAT ಪ್ರಾದೇಶಿಕ ಭಾಷೆಯಲ್ಲೂ ಕಾನೂನು ಪ್ರವೇಶ ಪರೀಕ್ಷೆ: ಬೆಂಬಲ
Team Udayavani, Aug 10, 2023, 7:10 AM IST
ಹೊಸದಿಲ್ಲಿ: ದೇಶದಲ್ಲಿರುವ ಎಲ್ಲ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯಗಳ ಪ್ರವೇಶಾತಿಗಾಗಿ ಇರುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್) ಅನ್ನು ಇಂಗ್ಲಿಷ್ ಜತೆಗೆ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಲ್ಲೂ ಮಾಡಬೇಕು ಎಂಬ ವಿಚಾರಕ್ಕೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಬೆಂಬಲ ವ್ಯಕ್ತಪಡಿಸಿದೆ.
ಈ ಸಂಬಂಧ ದಿಲ್ಲಿ ಹೈಕೋರ್ಟ್ಗೆ ಅರ್ಜಿಯೊಂದು ಸಲ್ಲಿಕೆಯಾಗಿದ್ದು, ಇದೇ ವರ್ಷದ ಡಿಸೆಂಬರ್ನಲ್ಲಿ ನಡೆಯಲಿರುವ ಕ್ಲಾಟ್ 2024 ಅನ್ನು ಪ್ರಾದೇಶಿಕ ಭಾಷೆಯಲ್ಲೂ ಬರೆಯಲು ಅವಕಾಶ ನೀಡುವಂತೆ ಕೋರಲಾಗಿದೆ. ಈ ಸಂಬಂಧ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಪ್ರಮಾಣ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದು, ಇದರಿಂದ ಹೆಚ್ಚೆಚ್ಚು ಮಂದಿ ಕಾನೂನು ಕಲಿಯಲು ಬರುತ್ತಾರೆ ಎಂದು ಹೇಳಿದೆ. ಜತೆಗೆ ಆಲ್ ಇಂಡಿಯಾ ಬಾರ್ ಎಕ್ಸಾಮಿನೇಶನ್ ಅನ್ನು 23 ಭಾಷೆಗಳಲ್ಲಿ ನಡೆಸುತ್ತಿದ್ದೇವೆ ಎಂದು ಅದು ಹೇಳಿದೆ. ಕ್ಲಾಟ್ ಪರೀಕ್ಷೆಯನ್ನು ರಾಷ್ಟ್ರೀಯ ಕಾನೂನು ವಿವಿಗಳ ಒಕ್ಕೂಟ ನಡೆಸುತ್ತದೆ. ಇಂಗ್ಲಿಷ್ನಲ್ಲಿ ಮಾತ್ರ ಪರೀಕ್ಷೆ ನಡೆಸುವ ಇದರ ನಿರ್ಧಾರದ ಬಗ್ಗೆ ಅರ್ಜಿದಾರರು ಆಕ್ಷೇಪವೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.