ಕ್ಷುಲ್ಲಕ ವಿಚಾರಕ್ಕೆ ಯುವಕನ ಕೊಂದು ಠಾಣೆಗೆ ಬಂದು ಶರಣಾದ
Team Udayavani, Aug 10, 2023, 10:50 AM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪರಿಚಯಸ್ಥನೇ ಯುವಕನ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು, ಬಳಿಕ ಠಾಣೆಗೆ ಶರಣಾಗಿರುವ ಘಟನೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಮ್ಮಘಟ್ಟ ನಿವಾಸಿ ಚೇತನ್(21) ಮೃತ ಯುವಕ. ಆರೋಪಿ ಅಮಾನುಲ್ಲಾ (27) ಎಂಬಾತ ಠಾಣೆಗೆ ಬಂದು ಶರಣಾಗಿದ್ದಾನೆ.
ಅಮಾನುಲ್ಲಾ ಮತ್ತು ಚೇತನ್ ಪರಿಚಯಸ್ಥರಾಗಿದ್ದು, ಕೊಮ್ಮಘಟ್ಟದಲ್ಲಿ ಅಕ್ಕ-ಪಕ್ಕದ ನಿವಾಸಿಗಳಾಗಿದ್ದಾರೆ. ಈ ಹಿಂದೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಮಂಗಳವಾರ ತಡರಾತ್ರಿ 11.30ರ ಸುಮಾರಿಗೆ ಕೊಮ್ಮಘಟ್ಟ ಮೈದಾನದಲ್ಲಿ ಮದ್ಯದ ಅಮಲಿನಲ್ಲಿ ಇಬ್ಬರ ನಡುವೆ ಸಣ್ಣ ವಿಚಾರಕ್ಕೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋದಾಗ ಆರೋಪಿ, ಚೇತನ್ ಮೇಲೆ ಹಲ್ಲೆ ನಡೆಸಿ, ಅಲ್ಲೇ ಇದ್ದ ಕಲ್ಲಿನಿಂದ ತಲೆ ಮೇಲೆ ಎತ್ತಿ ಹಾಕಿ ಪರಾರಿಯಾಗಿದ್ದ. ರಾತ್ರಿಯಿಡೀ ತಲೆಮರೆಸಿಕೊಂಡಿದ್ದ ಆರೋಪಿ, ಬುಧವಾರ ಬೆಳಗ್ಗೆ ಠಾಣೆಗೆ ಬಂದು, ಕೊಲೆ ವಿಚಾರ ತಿಳಿಸಿ ಶರಣಾಗಿದ್ದಾನೆ. ಜತೆಗೆ ಮೃತದೇಹ ತೋರಿಸುತ್ತೇ ನೆಂದು ಹೇಳಿದ್ದಾನೆ. ಪೊಲೀಸರು, ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ.
ಆರೋಪಿ ಅಮಾನುಲ್ಲಾ, ಜ್ಞಾನಭಾರತಿ ಆರ್ಟಿಒ ಕಚೇರಿಯಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿಕೊಂಡಿದ್ದು, ಈತನ ವಿರುದ್ಧ ಈ ಹಿಂದೆ ಕುಂಬಳಗೊಡು ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ, ಕೆಂಗೇರಿ ಉಪವಿಭಾಗದ ಎಸಿಪಿ, ಕೆಂಗೇರಿ ಠಾಣಾಧಿಕಾರಿಗಳು, ವಿಧಿವಿಜ್ಞಾನ ಪ್ರಯೋಗಾಲಯ, ಶ್ವಾನದಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.