J-K ; LeT ಉಗ್ರರ ಆರು ಮಂದಿ ಸಹಚರರ ಬಂಧನ
Team Udayavani, Aug 10, 2023, 4:42 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಲಷ್ಕರ್-ಎ-ತೊಯ್ಬಾ (LeT) ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಘಟಕವನ್ನು ಪತ್ತೆಹಚ್ಚಲಾಗಿದ್ದು,ಎಲ್ಇಟಿ ಉಗ್ರರ ಮೂವರು ಸಹಚರರನ್ನು ಬಂಧಿಸಲಾಗಿದೆ. ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಜಂಟಿ ಗಸ್ತು ತಿರುಗುತ್ತಿದ್ದ ವೇಳೆ ಓರ್ವ ಶಂಕಿತ ನನ್ನು ಬಂಧಿಸಿದರು. ಬಳಿಕ ಎರಡು ಗ್ರೆನೇಡ್‌ಗಳು, ಒಂದು ಚೈನೀಸ್ ಪಿಸ್ತೂಲ್, ಒಂದು ಪಿಸ್ತೂಲ್ ಮ್ಯಾಗಜೀನ್ ಮತ್ತು ನಾಲ್ಕು ಲೈವ್ ರೌಂಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲು ಬಂಧಿಸಿದ ಶಂಕಿತ ಉರಿಯ ಚುರುಂದಾ ಪ್ರದೇಶದ ನಿವಾಸಿ ಶೋಕತ್ ಅಲಿ ಅವನ್ ಎಂಬಾತನಾಗಿದ್ದು, ವಿಚಾರಣೆಯ ಸಮಯದಲ್ಲಿ, ತನ್ನ ಸಹಚರರಾದ ಅಹ್ಮದ್ ದಿನ್ ಮತ್ತು ಮೊಹಮ್ಮದ್ ಸಾದೀಕ್ ಖತಾನಾ ಅವರ ಹೆಸರನ್ನು ಬಹಿರಂಗಪಡಿಸಿದ್ದಾನೆ.
ಖಾನ್ಸಾಹಬ್ ಪ್ರದೇಶದಲ್ಲಿ ಕ್ರೆಮ್‌ಶೋರಾ ನಿವಾಸಿ ಖೈಸರ್ ಅಹ್ಮದ್ ದಾರ್ ಮತ್ತು ಅಕಿಬ್ ರಶೆದ್ ಗನಿ ಎಂಬವರನ್ನು ಬಂಧಿಸಲಾಗಿದೆ. ಇಬ್ಬರೂ ವಾಗರ್ ನಿವಾಸಿಗಳಾಗಿದ್ದು ಅವರ ವಶದಿಂದ ಚೀನಾದ ಹ್ಯಾಂಡ್ ಗ್ರೆನೇಡ್, ಎರಡು ಮ್ಯಾಗಜೀನ್‌ಗಳು ಮತ್ತು 57 ಲೈವ್ ರೌಂಡ್‌ಗಳು ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.