Transfer: ರಾಹುಲ್ ಶಿಕ್ಷೆಗೆ ತಡೆ ನೀಡದ ನ್ಯಾಯಮೂರ್ತಿ ವರ್ಗಾವಣೆ ಪಟ್ಟಿಯಲ್ಲಿ
-ವರ್ಗಾವಣೆ ಪಟ್ಟಿಯಲ್ಲಿದೆ ವಿವಿಧ ಹೈಕೋರ್ಟ್ಗಳ 9 ನ್ಯಾಯಮೂರ್ತಿಗಳ ಹೆಸರುಗಳು
Team Udayavani, Aug 11, 2023, 10:32 PM IST
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲಿನ ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಉಚ್ಚ ನ್ಯಾಯಾಲಯದ ನ್ಯಾ. ಹೇಮಂತ್ ಎಂ.ಪ್ರತ್ಛಕ್ ಅವರ ಹೆಸರು ಕೂಡ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿರುವ ವರ್ಗಾವಣೆ ಪಟ್ಟಿಯಲ್ಲಿದೆ. ನ್ಯಾ.ಹೇಮಂತ್ ಅವರನ್ನು ಪಾಟ್ನಾ ಹೈಕೋರ್ಟ್ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ. ಅದೇ ರೀತಿ ಗುಜರಾತ್ ಹೈಕೋರ್ಟ್ನ ಇತರೆ ಮೂವರು ನ್ಯಾಯಮೂರ್ತಿಗಳು ವರ್ಗಾವಣೆ ಪಟ್ಟಿಯಲ್ಲಿದ್ದಾರೆ.
ಹಾಲಿ ಅಲಹಾಬಾದ್ ಹೈಕೋರ್ಟ್ ನ್ಯಾ.ವಿವೇಕ್ ಕುಮಾರ್ ಸಿಂಗ್ ಅವರನ್ನು ಮದ್ರಾಸ್ ಹೈಕೋರ್ಟ್ಗೆ, ಗುಜರಾತ್ ಹೈಕೋರ್ಟ್ನ ನ್ಯಾ.ಅಲ್ಪೇಶ್ ವೈ.ಕೊಗ್ಜಿ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ, ಗುಜರಾತ್ ಹೈಕೋರ್ಟ್ನ ನ್ಯಾ.ಗೀತಾ ಗೋಪಿ ಅವರನ್ನು ಮದ್ರಾಸ್ ಹೈಕೋರ್ಟ್ಗೆ, ಗುಜರಾತ್ ಹೈಕೋರ್ಟ್ನ ನ್ಯಾ. ಸಮೀರ್ ಜೆ.ಡೇವ್ ಅವರನ್ನು ರಾಜಸ್ಥಾನ ಹೈಕೋರ್ಟ್ಗೆ ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.
ಅದೇ ರೀತಿ ಹಾಲಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ್ಯಾಯಮೂರ್ತಿಗಳಾದ ನ್ಯಾ. ಅರವಿಂದ್ ಸಿಂಗ್ ಸಾಂಗ್ವಾನ್ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ, ನ್ಯಾ.ಅವ್ನಿಶ್ ಜಿಗಾನ್ ಅವರನ್ನು ಗುಜರಾತ್ ಹೈಕೋರ್ಟ್ಗೆ, ನ್ಯಾ. ರಾಜ್ ಮೋಹನ್ ಸಿಂಗ್ ಅವರನ್ನು ಮಧ್ಯಪ್ರದೇಶದ ಹೈಕೋರ್ಟ್ಗೆ ಹಾಗೂ ನ್ಯಾ.ಅರುಣ್ ಮೊಂಗಾ ಅವರನ್ನು ರಾಜಸ್ಥಾನ ಹೈಕೋರ್ಟ್ಗೆ ವರ್ಗಾವಣೆಗೊಳಿಸಲು ಕೊಲಿಜಿಯಂ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.