Campco : ಅಡಿಕೆ ಕಳ್ಳಸಾಗಣೆಗೆ ತಡೆ: ಡಿಆರ್‌ಐಗೆ ಕ್ಯಾಂಪ್ಕೊ ಶ್ಲಾಘನೆ
Team Udayavani, Aug 12, 2023, 1:16 AM IST
ಮಂಗಳೂರು: ಡ್ರೈಫ್ರುಟ್ಸ್ ಹೆಸರಿನಡಿಯಲ್ಲಿ ಮತ್ತು ಬೇರೆ ಬೇರೆ ರೂಪಗಳಲ್ಲಿ ವಿದೇಶಗಳಿಂದ ಕಳ್ಳಸಾಗಣೆಯ ಮೂಲಕ ವಿದೇಶಿ ಅಡಿಕೆ ನಮ್ಮ ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದು ದೇಶೀ ಅಡಿಕೆಯ ಸ್ಥಿರ ಧಾರಣೆಗೆ ಬೆದರಿಕೆಯನ್ನು ಉಂಟುಮಾಡುತ್ತಿದೆ. ಇತ್ತೀಚೆಗೆ ಮುಂಬಯಿಯ ಜೆಎನ್‌ಪಿಟಿ ಬಂದರಿನಲ್ಲಿ ಸುಟ್ಟ ಸುಣ್ಣದ ಉಂಡೆಯ ಹೆಸರಿನಲ್ಲಿ ಕಳ್ಳಸಾಗಣೆ ಮಾಡಿದ ಅಡಿಕೆಯನ್ನು ಡಿಆರ್‌ಐ ಅಧಿ ಕಾರಿಗಳು ವಶಪಡಿಸುವ ಮೂಲಕ ಅಡಿಕೆ ಬೆಳೆಗಾರರ ಶ್ಲಾಘನೆಗೆ ಪಾತ್ರರಾಗಿದ್ದಾರೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ವಿದೇಶದಿಂದ ಬೇರೆ ಬೇರೆ ಅಹಾರ ಪದಾರ್ಥಗಳ ಹೆಸರಿನಲ್ಲಿ ಆಮದು ಮಾಡುವ ಅಡಿಕೆಯನ್ನು ತಡೆದು ವಶಪಡಿಸಿಕೊಳ್ಳಲು ಕೇಂದ್ರದ ನಿರ್ದೇಶನವನ್ನು ಕಟ್ಟನಿಟ್ಟಾಗಿ ಜಾರಿಗೆ ತಂದಿರುವ ಕಾರಣ, ಅಡಿಕೆಯ ಕಳ್ಳಸಾಗಾಣಿಕೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಅಡಿಕೆಯ ಧಾರಣೆಯಲ್ಲಿ ಸ್ಥಿರತೆ ಕಾಣಲು ಸಾಧ್ಯವಾಗಿದೆ. ರೈತಪರ ಕಾಳಜಿ ಮತ್ತು ಕ್ಯಾಂಪ್ಕೊದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸರಕಾರ ಹಾಗೂ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿ ಕಾರಿಗಳ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಕ್ಯಾಂಪ್ಕೊ ಶ್ಲಾ ಸುತ್ತದೆ ಎಂದು ತಿಳಿಸಿದ್ದಾರೆ.
ಈ ರೀತಿಯ ಕಳ್ಳಸಾಗಾಟದ ಬಗ್ಗೆ ಕ್ಯಾಂಪ್ಕೊ ಅನೇಕ ಬಾರಿ ಸತತವಾಗಿ ಮನವಿ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿ ನೇರ ಮಾತುಕತೆಯ ಮೂಲಕ, ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಸೂಕ್ತ ಕಾನೂನಾತ್ಮಕ ಕ್ರಮ ಜರಗಿಸುವಂತೆ ಮಾಡಿದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.