Hawaii ಕಾಳ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 67ಕ್ಕೆ ಏರಿಕೆ… ಇನ್ನೂ ಹತೋಟಿಗೆ ಬಾರದ ಬೆಂಕಿ
Team Udayavani, Aug 12, 2023, 8:46 AM IST
ಹವಾಯಿ: ವಿಶ್ವ ಪ್ರಸಿದ್ದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಯುನೈಟೆಡ್ ಸ್ಟೇಟ್ಸ್ ನ ಐತಿಹಾಸಿಕ ದ್ವೀಪ ರಾಜ್ಯವಾದ ಹವಾಯಿಯಲ್ಲಿ ಕಾಳ್ಗಿಚ್ಚು ಮುಂದುವರೆದಿದ್ದು ಮೃತರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ, ಹವಾಯಿ ಗವರ್ನರ್ ಜೋಶ್ ಗ್ರೀನ್ ಅವರು ಇನ್ನೂ ಪತ್ತೆಯಾಗದ ಸುಮಾರು 1,000 ಜನರಿಗಾಗಿ ಹುಡುಕಾಟಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ವರದಿಯ ಪ್ರಕಾರ ಇಲ್ಲಿಯವರೆಗೆ, ಅಧಿಕಾರಿಗಳು ಕಟ್ಟಡಗಳ ಹೊರಗಿರುವ ಜನರ ಹುಡುಕಾಟ ನಡೆಯುತ್ತಿದೆ ಇನ್ನು ಕಟ್ಟಡ ಒಳಭಾಗದಲ್ಲಿ ಇರುವ ದೇಹಗಳ ಹುಡುಕಾಟ ಇನ್ನಷ್ಟೇ ನಡೆಯಬೇಕಿದೆ ಅದಕ್ಕಾಗಿ ಹೆಚ್ಚಿನ ರಕ್ಷಣಾ ತಂಡದ ಅಗತ್ಯ ಕೂಡ ಇದೆ ಎಂದು ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಇತರ ರಕ್ಷಣಾ ತಂಡ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದು ಇನ್ನೂ ಕೂಡ ಹತೋಟಿಗೆ ಬರಲಿಲ್ಲ ಎಂದು ಹೇಳಿದ್ದಾರೆ ಹಾಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ. ಏತನ್ಮಧ್ಯೆ, ಲಾಹೈನಾ ನಿವಾಸಿಗಳಿಗೆ ಹಾನಿಯನ್ನು ನಿರ್ಣಯಿಸಲು ಮೊದಲ ಬಾರಿಗೆ ಮನೆಗೆ ಮರಳಲು ಅವಕಾಶ ನೀಡಲಾಯಿತು.
ಎತ್ತ ನೋಡಿದರೂ ಸುಟ್ಟು ಕರಕಲಾಗಿರುವ ಅವಶೇಷಗಳು, ಕಟ್ಟಡ, ಮರಗಳು, ಪ್ರಾಣಿಗಳು ಸೇರಿದಂತೆ ಎಲ್ಲವೂ ಅಗ್ನಿಗೆ ಆಹುತಿಯಾಗಿದ್ದು ಪ್ರದೇಶ ತುಂಬಾ ಬೂದಿ ಆವರಿಸಿಕೊಂಡಿದೆ. ಇದು ಈ ದ್ವೀಪ ಪ್ರದೇಶದಲ್ಲಿ ನಡೆದ ದೊಡ್ಡ ಘಟನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಗ್ನಿ ಅವಘಡದಿಂದ ನಗರ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು ಜೊತೆಗೆ ನೆಟ್ ವರ್ಕ್ ಕಡಿತಗೊಂಡಿದೆ. ಜೊತೆಗೆ ಕಾಳ್ಗಿಚ್ಚಿಗೆ ಸುಮಾರು 1,700 ಕ್ಕೂ ಹೆಚ್ಚು ಕಟ್ಟಡಗಳು ಸುಟ್ಟು ಬೂದಿಯಾಗಿವೆ.
ಇದನ್ನೂ ಓದಿ: IND vs MAL; ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ಇಂದು ಫೈನಲ್ ಹಣಾಹಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.