Wild Elephant: ಕಡಬದಿಂದ ಸೆರೆ ಹಿಡಿಯಲಾಗಿದ್ದ ಕಾಡಾನೆ ಸಾವು
ಕಳೆದ ಫೆಬ್ರವರಿಯಲ್ಲಿ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ !
Team Udayavani, Aug 12, 2023, 2:17 PM IST
ಸುಬ್ರಹ್ಮಣ್ಯ: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾರಣಕ್ಕೆ ಕಡಬ ತಾಲೂಕಿನ ಕೊಂಬಾರು ಸಮೀಪ ಸೆರೆ ಹಿಡಿಯಲಾಗಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ವರದಿಯಾಗಿದೆ.
ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆದರೆ ಢ.11ರ ಶುಕ್ರವಾರ ಈ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಅದರ ಮರಣೋತ್ತರ ಪರೀಕ್ಷೆ ನಡೆಸುವ ಕಾರ್ಯ ಮಾಡಲಾಯಿತು.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ 20ರಂದು ಬೆಳ್ಳಂ ಬೆಳಗ್ಗೆ ಕಾಡಾನೆ ದಾಳಿಗೆ ರಂಜಿತಾ (24) ಹಾಗೂ ರಮೇಶ್ ರೈ (58) ಎಂಬವರು ಮೃತಪಟ್ಟಿದ್ದರು.
ಘಟನೆಯಿಂದ ಆಕ್ರೋಶಗೊಂಡಿದ್ದ ಸಾರ್ವಜನಿಕರು ಕಾಡಾನೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಘಟನಾ ಸ್ಥಳಕ್ಕೆ ಅಂದಿನ ಜಿಲ್ಲಾಧಿಕಾರಿ ರವಿಕುಮಾರ್ ಹಾಗೂ ಡಿಸಿಎಫ್ ದಿನೇಶ್ ಕುಮಾರ್ ಅವರು ಭೇಟಿ ನೀಡಿ ಕಾಡಾನೆ ಸೆರೆ ಹಿಡಿಯುವ ಭರವಸೆ ನೀಡಿದ್ದರು.
ಮರುದಿನವೇ ಕಾಡಾನೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಲಾಗಿತ್ತು. ದುಬಾರೆ ಮತ್ತು ತಿತಿಮತಿಯಿಂದ ಐದು ಸಾಕಾನೆಗಳನ್ನು ತರಿಸಿ ಕಾರ್ಯಾಚರಣೆ ಆರಂಭಿಸಿ, ಮೂರನೇ ದಿನ ಕಡಬ ತಾಲೂಕಿನ ಕೊಂಬಾರು ಸಮೀಪದ ಮಂಡೆಕರ ಎಂಬಲ್ಲಿ ನರ ಹಂತಕ ಕಾಡಾನೆಯನ್ನು ಸೆರೆಹಿಡಿಯಲಾಗಿತ್ತು. ಬಳಿಕ ಅದನ್ನು ಕೊಡಗಿನ ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿತ್ತು. ಇದೀಗ ಅಲ್ಲಿನ ಈ ಆನೆ ನಿಧನ ಹೊಂದಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.