BBMP ಅಗ್ನಿ ಅವಘಡಕ್ಕೆ ಸಂಬಂಧಿಸಿ ಇಬ್ಬರ ಬಂಧನ: ಡಿ.ಕೆ.ಶಿವಕುಮಾರ್
x ಪೋಸ್ಟ್ ಡಿಲೀಟ್ ಮಾಡಿದ ಕಾಂಗ್ರೆಸ್! ... ಯತ್ನಾಳ್ ಆಕ್ರೋಶ
Team Udayavani, Aug 12, 2023, 6:27 PM IST
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದರು.
ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ‘ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ’ ಎಂದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಿಬಿಎಂಪಿ ಸಿಬಂದಿಗಳಿಬ್ಬರು ಪರಾರಿಯಾಗಿದ್ದರು. ಅವರನ್ನು ಬಂಧಿಸಲಾಗಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಅವರು ಓಡಿಹೋಗಿದ್ದರು. ಅಲ್ಲಿ ಸುರಕ್ಷತಾ ಉಪಕರಣಗಳು ಲಭ್ಯವಿದ್ದ ಕಾರಣ ಅವರು ಘಟನೆಯ ನಂತರ ಬೆಂಕಿಯನ್ನು ನಂದಿಸಬಹುದಿತ್ತು”ಎಂದು ತಿಳಿಸಿದರು.
ಮೂರು ವಿಚಾರಣೆಗಳು ಏಕಕಾಲದಲ್ಲಿ ನಡೆಯುತ್ತಿವೆ. ಒಂದು ಬಿಬಿಎಂಪಿಯಿಂದ ಇಲಾಖಾ ವಿಚಾರಣೆ, ಎರಡನೆಯದು ಪೊಲೀಸ್ ತನಿಖೆ ಮತ್ತು ಮೂರನೆಯದು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆಯೇ ಎಂದು ತನಿಖೆ ಮಾಡಲು ಎಲೆಕ್ಟ್ರಿಕಲ್ ಇನ್‌ಸ್ಪೆಕ್ಟರೇಟ್ ಮಾಡಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.
”ನನ್ನ ಪ್ರಕಾರ, ಕ್ವಾಲಿಟಿ ಕಂಟ್ರೋಲ್ ಲ್ಯಾಬ್ ದಾಖಲೆಗಳನ್ನು ಸಂಗ್ರಹಿಸುವ ಸ್ಥಳವಲ್ಲ ಆದರೆ ಅದನ್ನು ಮಾಡಲಾಗಿದೆ.ಅದಕ್ಕೆ ಯಾರನ್ನು ದೂಷಿಸುವುದು? ಈಗಾಗಲೇ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಈ ಪ್ರಯೋಗಾಲಯವನ್ನು ಬೇರೆಡೆಗೆ ಸ್ಥಳಾಂತರಿಸುತ್ತೇವೆ,” ಎಂದರು.
ಅವಘಡದ ವೇಳೆ ಹಾಜರಿದ್ದ ಗ್ರೂಪ್-ಡಿ ನೌಕರನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.
2019 ರಿಂದ 2023 ರವರೆಗೆ ಬಿಜೆಪಿ ಆಡಳಿತದ ಅವಧಿಯಲ್ಲಿ ಬಿಬಿಎಂಪಿಯಲ್ಲಿ ನಡೆದ ಎಲ್ಲಾ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಸರಕಾರ ಆದೇಶಿಸಿದ ಕೆಲವೇ ದಿನಗಳಲ್ಲಿ ಅಗ್ನಿ ಅವಘಡ ನಡೆದಿದೆ.
ಯತ್ನಾಳ್ ಟ್ವೀಟ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ x (ಟ್ವೀಟ್) ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಹೇಗೆ ಆರೋಪ ಮಾಡಿ ಓಡಿ ಹೋಗುವುದು ರೂಢಿಯೊ ಹಾಗೆ ಅವರ ಟ್ವಿಟ್ಟರ್ ಹ್ಯಾಂಡಲ್ ಸಹ!. ಲಂಗು ಲಗಾಮು ಇಲ್ಲದ ಅಯೋಗ್ಯರು ಬಾಯಿಗೆ ಬಂದದ್ದು ಬರೆಯುವುದು ಅದರ ಸತ್ಯತೆಯ ಬಗ್ಗೆ ನಾವು ಬರೆದಾಗ ಟ್ವೀಟ್ ಡಿಲೀಟ್ ಮಾಡಿ ಓಡಿ ಹೋಗುವುದು. ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಮಹಾನುಭಾವ ಒಬ್ಬರಿದ್ದರಲ್ಲವೇ? ಎಲ್ಲಿ ಮಾಯವಾಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.
ಡಿಕೆಶಿ ಉತ್ತರ
ಯಾರೋ ಹುಡುಗರು ಟ್ವೀಟ್ ಪೋಸ್ಟ್ ಮಾಡಿದ್ದಾರೆ. ನೋಡಿದ ಕೂಡಲೇ ನಾವು ಅದನ್ನು ಹಿಂದಕ್ಕೆ ಪಡೆದಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.