Goa; ಶೀಘ್ರ ದಾಬೋಲಿಮ್ ನಿಂದ ಕಲಬುರಗಿ,ನಾಗ್ಪುರಕ್ಕೆ ವಿಮಾನಯಾನ
Team Udayavani, Aug 12, 2023, 8:01 PM IST
ಪಣಜಿ: ಗೋವಾದ ದಾಬೋಲಿಮ್ ವಿಮಾನ ನಿಲ್ದಾಣವು ಶೀಘ್ರದಲ್ಲೇ ಕರ್ನಾಟಕದ ಕಲಬುರಗಿ ಮತ್ತು ಮಹಾರಾಷ್ಟ್ರದ ನಾಗ್ಪುರಕ್ಕೆ ವಿಮಾನಯಾನವನ್ನು ಪ್ರಾರಂಭಿಸಲಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಎಸ್. ವಿ. ಟಿ.ಧನಂಜಯ್ ರಾವ್ ಮಾಹಿತಿ ನೀಡಿದ್ದಾರೆ. ಚಳಿಗಾಲದಲ್ಲಿ ಈ ಸೇವೆ ಪ್ರಾರಂಭವಾಗುವ ನಿರೀಕ್ಷೆಯಿದೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಚಾರ್ಟರ್ ಮತ್ತು ಅಂತಾರಾಷ್ಟ್ರೀಯ ವಿಮಾನಗಳನ್ನು ಇನ್ನಷ್ಟು ಸುಧಾರಿಸಲು ಏರ್‍ಪೋಟ್ರ್ಸ್ ಅಥಾರಿಟಿ ಆಫ್ ಇಂಡಿಯಾ (ಎಎಐ) ಸಿದ್ಧತೆ ನಡೆಸುತ್ತಿದೆ ಎಂದು ಅವರು ಹೇಳಿದರು. ಚಾರ್ಟರ್ ಆಪರೇಟರ್ ಗಳು ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ 175 ಸ್ಲಾಟ್‍ಗಳನ್ನು ಕಾಯ್ದಿರಿಸಿದ್ದಾರೆ, ಇದರಿಂದಾಗಿ ಮುಂಬರುವ ಪ್ರವಾಸೀ ಋತುವಿನಲ್ಲಿ ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ ಎಂದು ಎಸ್.ವಿ.ಟಿ ಧನಂಜಯ ಮಾಹಿತಿ ನೀಡಿದರು. 2024 ರ ಮೇ ಅಥವಾ ಜೂನ್ ವೇಳೆಗೆ ದಾಬೋಲಿಮ್ ವಿಮಾನ ನಿಲ್ದಾಣದ ವಿಸ್ತರಣೆ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು ಆದ್ದರಿಂದ, ಮುಂಬರುವ ಋತುವಿನಲ್ಲಿ ದೇಶೀಯ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಾಬೋಲಿಂ ವಿಮಾನ ನಿಲ್ದಾಣ ಬಂದ್ ಆಗುವುದಿಲ್ಲ
ಈ ಮಧ್ಯೆ, ದಾಬೋಲಿಮ್ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಎಂದು ಕೆಲವರು ವದಂತಿ ಹಬ್ಬಿಸಿದ್ದರು. ಆದರೆ, ಅಂತಹದ್ದೇನೂ ಆಗುವುದಿಲ್ಲ ಎಂದು ಸಾರಿಗೆ ಸಚಿವ ಮಾವಿನ್ ಗುದಿನ್ಹೊ ಖಚಿತಪಡಿಸಿದ್ದಾರೆ. ಇದು ಅತ್ಯಂತ ಪ್ರತಿಷ್ಠಿತ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ ಮತ್ತು ಎಎಐ ಪ್ರಕಾರ, ಪ್ರಯಾಣಿಕರ ಸಂಖ್ಯೆ ಎಂದಿಗೂ ಕಡಿಮೆಯಾಗುವುದಿಲ್ಲ. ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಗುದಿನ್ಹೋ ಭಾಗವಹಿಸಿದ್ದರು. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಪ್ರಯಾಣಿಕರ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಸುಧಾರಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ನಿಯೋಗವು ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂಬ ಮಾಹಿತಿಯನ್ನೂ ಅವರು ಈ ಸಂದರ್ಭದಲ್ಲಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.