Vote: “ಮೊದಲ ಮತ ಅಭಿಯಾನ”ಕ್ಕೆ ಚಾಲನೆ
Team Udayavani, Aug 13, 2023, 5:05 AM IST
ಬೆಂಗಳೂರು: ಬರುವ ಲೋಕಸಭಾ ಚುನಾವಣೆಯಲ್ಲಿ ಯುವ ಸಮೂಹವನ್ನು ಸೆಳೆಯಲು ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ “ಮೊದಲ ಮತ ಅಭಿಯಾನ’ (ಪೆಹಲಾ ವೋಟ್)ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.
ಸಹಕಾರ ನಗರದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ “ಮೊದಲ ಮತದಾನ ಅಭಿಯಾನ’ದ ಜವಾಬ್ದಾರಿ ಹೊತ್ತ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಎಐಸಿಸಿ ಸದಸ್ಯ ಎಂ.ಎಸ್.ರಕ್ಷಾ ರಾಮಯ್ಯ ಸಮ್ಮುಖದಲ್ಲಿ ಸಚಿವರು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು.
18ರಿಂದ 23 ವರ್ಷದ ಒಳಗಿನ ಮೊದಲ ಬಾರಿಗೆ ಲೋಕಸಭೆಯಲ್ಲಿ ಮತದಾನ ಮಾಡುತ್ತಿರುವವರನ್ನು ಸೆಳೆಯಲು ಈ ಅಭಿಯಾನ ಆಯೋಜಿಸಲಾಗಿದೆ.
ನಂತರ ಮಾತನಾಡಿದ ರಕ್ಷಾ ರಾಮಯ್ಯ, ಯುವ ಸಮೂಹ ದೇಶದ ಶಕ್ತಿಯಾಗಿದ್ದು, ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಲಿದೆ. ಇದರಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯುಆರ್ ಕೋಡ್ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸರಕು ಸಾಗಾಣೆ ವಾಹನಗಳಲ್ಲಿ ಎಲ್‌ಇಡಿ ವ್ಯವಸ್ಥೆ, ಶಾಲಾ-ಕಾಲೇಜುಗಳು, ಟ್ಯೂಷನ್ ತಾಣಗಳು, ಬಸ್ ನಿಲ್ದಾಣಗಳು, ಮಾಲ್‌ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಿದ್ದ ಯುವ ಮತ ಅಭಿಯಾನಕ್ಕೆ ಅಭೂಪೂರ್ವ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್ ಶೇ.42 ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಈ ಸಫಲತೆಯ ನಂತರ ಇದೀಗ “ಪೆಹಲಾ ವೋಟ್’ ಅಭಿಯಾನ ಆರಂಭಿಸಲಾಗಿದೆ. ಇದರಡಿ ಮತದಾನದ ಮಹತ್ವದ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಹ ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.