Bit: ಬಿಟ್‌ ಹಗರಣದಲ್ಲಿ “ದಿಲ್ಲಿ ಲಿಂಕ್‌”!- ಊಹೆಗೂ ನಿಲುಕದ ವ್ಯಕ್ತಿಗಳ, ಪ್ರಭಾವಿಗಳ ಹೆಸರು?

- ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಎಸ್‌ಐಟಿ

Team Udayavani, Aug 13, 2023, 6:48 AM IST

bit coin

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಬಹುಕೋಟಿ ಮೊತ್ತದ ಬಿಟ್‌ ಕಾಯಿನ್‌ ಹಗರಣದಲ್ಲಿ “ದಿಲ್ಲಿ ಲಿಂಕ್‌’ ಬಗ್ಗೆಯೂ ರಾಜ್ಯ ಪೊಲೀಸರು ಈಗ ಶಂಕೆ ವ್ಯಕ್ತಪಡಿಸಲಾರಂಭಿಸಿದ್ದು, ಈ ಪ್ರಕರಣ ಮತ್ತೂಮ್ಮೆ ರಾಜಕೀಯ ಹಂಗಾಮಕ್ಕೆ ನಾಂದಿ ಹಾಡುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬೆಳಕಿಗೆ ಬಂದಿದ್ದ ಬಿಟ್‌ ಕಾಯಿನ್‌ ಹಗರಣ ಭಾರೀ ಸದ್ದು ಮಾಡಿತ್ತು. ತಾನು ಅಧಿಕಾರಕ್ಕೆ ಬಂದರೆ ಈ ಬಗ್ಗೆ ಮರು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್‌, ಚುನಾವಣಾ ಪೂರ್ವ ವಾಗ್ಧಾನದ ಪ್ರಕಾರ ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದೆ. ಎಸ್‌ಐಟಿಯ ಪ್ರಾಥಮಿಕ ತನಿಖೆಯ ಪ್ರಕಾರವೇ ಈ ಹಗರಣದ ಹೆಜ್ಜೆ ಗುರುತುಗಳು ದಿಲ್ಲಿಯವರೆಗೂ ಇದೆ ಎನ್ನಲಾಗುತ್ತಿದೆ. ಜತೆಗೆ ಸ್ಥಳೀಯ ಪ್ರಭಾವಿಗಳ ಸಂಪರ್ಕವನ್ನೂ ಶಂಕಿಸಲಾಗಿದೆ. ಹೀಗಾಗಿ ಈ ವಿಚಾರದಲ್ಲಿ ಪ್ರತಿ ನಿಲುವು ತೆಗೆದುಕೊಳ್ಳುವಾಗಲೂ ತನಿಖಾ ಸಂಸ್ಥೆ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

ಪ್ರಭಾವಿಗಳ ಹೆಸರು:

ಈ ಪ್ರಕರಣದಲ್ಲಿ ಊಹೆಗೂ ನಿಲುಕದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಹೆಸರು ತಳುಕು ಹಾಕಿಕೊಂಡಿದ್ದು, ಕರ್ನಾಟಕ ಪೊಲೀಸರಿಗೆ ಸಿಕ್ಕಿ ಬಿದ್ದ ಸಂದರ್ಭದಲ್ಲಿ ಶ್ರೀಕಿ ನೀಡಿದ ಪ್ರಮಾಣೀಕೃತ ಹೇಳಿಕೆ ಈ ಹಗರಣದ ಕಾಲು ಭಾಗಕ್ಕೂ ಸಮವಲ್ಲ. ಹೀಗಾಗಿ ಪ್ರಕರಣದ ಸ್ವರೂಪ ಹಾಗೂ ವ್ಯಾಪ್ತಿ ವಿಸ್ತಾರವಾಗಿದ್ದು, ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಗಳು ಈಗಲೂ ರಾಜ್ಯದ ನಡೆಯ ಮೇಲೆ ಹದ್ದಿನ ಕಣ್ಣಿಟ್ಟಿವೆ ಎಂದು ಗೃಹ ಇಲಾಖೆ ಮೂಲಗಳು ಅಭಿಪ್ರಾಯಪಟ್ಟಿವೆ. ಹೀಗಾಗಿ ಹಳೆಯ ವಿಚಾರಗಳನ್ನು ಮಾತ್ರ ಸೋರಿಕೆ ಮಾಡುತ್ತಿರುವ ಎಸ್‌ಐಟಿ ಹೊಸ ವಿಚಾರಗಳ ಗುಟ್ಟು ರಟ್ಟಾಗದಂತೆ ನೋಡಿಕೊಳ್ಳುತ್ತಿದೆ. ಒಂದು ಮೂಲದ ಪ್ರಕಾರ, ತನಿಖೆಯ ಪ್ರತಿ ಅಂಶಗಳೂ “ಮುಖ್ಯ’ ವ್ಯಕ್ತಿಗಳ ಅವಗಾಹನೆಯಲ್ಲಿದೆ. ಹೀಗಾಗಿ ದಿಲ್ಲಿ ಲಿಂಕ್‌ ಬಗ್ಗೆ ಜಾಗರೂಕ ಹೆಜ್ಜೆ ಇಡಲಾಗುತ್ತಿದೆ.

ಬಿಟ್‌ ಕಾಯಿನ್‌ ಹಗರಣದ ತನಿಖೆ ಹೇಗೆ ಅಂತ್ಯ ಕಾಣುತ್ತದೆ ಎಂದು ಈಗಲೇ ಹೇಳುವುದಕ್ಕೆ ಸಾಧ್ಯವಿಲ್ಲವಾದರೂ ಡೇಟಾ ಭದ್ರತೆ ಹಾಗೂ ಸೈಬರ್‌  ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಒಂದಿಷ್ಟು ಮಹತ್ವದ ಹೆಜ್ಜೆಗಳನ್ನು ಇಡುವುದಕ್ಕೆ ಈ ಪ್ರಕರಣ ಪ್ರೇರಣೆ ನೀಡಿದೆ. ರಾಜ್ಯ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಐಟಿ ಕಾಯ್ದೆಯ ಹಿಂದೆಯೂ ಡೇಟಾ ಪ್ರೊಟೆಕ್ಷನ್‌ ಮಹತ್ವದ ಪಾತ್ರ ವಹಿಸಿದ್ದು, ಗೃಹ ಇಲಾಖೆಯ ಉನ್ನತ ಮೂಲಗಳ ಪ್ರಕಾರ ಶ್ರೀಕಿಯಂಥ ಸೈಬರ್‌ ವಂಚಕರೇ ಡೇಟಾ ಸಂರಕ್ಷಣೆಗಾಗಿ ಕಾಯ್ದೆ ಹಾಗೂ ನೀತಿ ರೂಪುಗೊಳ್ಳುವುದಕ್ಕೆ ಪ್ರೇರಣೆಯಾಗುತ್ತಿರುವುದು ವಿಪರ್ಯಾಸ.

ಆಕ್ಷೇಪ:

ಬಿಟ್‌ ಕಾಯಿನ್‌ ಪ್ರಕರಣದ ಬಳಿಕ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದಲ್ಲಿನ ಸೈಬರ್‌ ಸುರಕ್ಷತೆ ಬಗ್ಗೆ ಆಕ್ಷೇಪ ವ್ಯಕ್ತವಾಗಿವೆ. ಹೀಗಾಗಿ ದತ್ತಾಂಶ ಭದ್ರತಾ ಕಾಯ್ದೆಗಳ ಬಗ್ಗೆ ಪದೇ ಪದೆ ಚರ್ಚೆ ಹಾಗೂ ತಿದ್ದುಪಡಿಗಳು ನಡೆಯುತ್ತಿವೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ಜತೆಗೆ ಡಿಜಿಟಲ್‌ ಆರ್ಥಿಕತೆ ಪ್ರಗತಿ ಕಾಣುತ್ತಿದೆ. ಆದಾಗಿಯೂ ಸೈಬರ್‌ ವಂಚನೆ ಹಾಗೂ ಡೇಟಾ ಸುರಕ್ಷತೆ ಸಮರ್ಪಕವಾಗಿಲ್ಲ ಎಂದು ಕಾರ್ಪೊರೇಟ್‌ ವಲಯಗಳಲ್ಲಿ ಆಕ್ಷೇಪ ವ್ಯಕ್ತವಾಗುತ್ತಿರುವುದರಿಂದ ಈಗ ಸೈಬರ್‌ ನೀತಿ ಹಾಗೂ ಐಟಿ ಆ್ಯಕ್ಟ್ ಜಾರಿಗೆ ಪ್ರಯತ್ನ ಆರಂಭವಾಗಿದೆ.

ಗೃಹ ಇಲಾಖೆ ಮೂಲಗಳ ಪ್ರಕಾರ, ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸೈಬರ್‌ ನೀತಿಯ ಸ್ವರೂಪ ಭವಿಷ್ಯದಲ್ಲಿ  ತಾಂತ್ರಿಕ ಜಾಗೃತಿಯ ಸ್ವರೂಪದಲ್ಲಿ ಮಾತ್ರ ನಿಲ್ಲುವುದಿಲ್ಲ. ಐಟಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ, ಎಥಿಕಲ್‌ ಹ್ಯಾಕಿಂಗ್‌, ಕೃತಕ ಬುದ್ಧಿಮತ್ತೆಯ ಸದ್ಬಳಕೆ ಮತ್ತು ನಿಯಂತ್ರಣ ಸೇರಿದಂತೆ ಹಲವು ಮಜಲುಗಳನ್ನು ಹೊಂದಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಸರ್ಕಾರಿ ಸ್ವಾಮ್ಯದ ದತ್ತಾಂಶ ರಕ್ಷಣೆ, ಹೊಸದಾಗಿ ಪ್ರಾರಂಭವಾಗುವ ತಂತ್ರಾಂಶ ರಕ್ಷಣೆ, ಆನ್‌ಲೈನ್‌ ಬ್ಯಾಂಕಿಂಗ್‌, ತಾಂತ್ರಿಕ ಸಾಕ್ಷರತೆ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಹಾಗೂ ತರಬೇತಿ ನೀಡಲು ಕಾಯ್ದೆಯಲ್ಲಿ ನಿರ್ಧರಿಸಲಾಗಿದೆ. ದತ್ತಾಂಶ ಖಾಸಗೀಕರಣದ ಬಗ್ಗೆ ರಹಸ್ಯ ಸಮೀಕ್ಷೆಗಳು ಕೂಡ ಭವಿಷ್ಯದಲ್ಲಿ ನಡೆಯಲಿದೆ.

ರಾಘವೇಂದ್ರ ಭಟ್‌

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.