ತಮಿಳುನಾಡು ಸಂಕಷ್ಟ ಸೂತ್ರ ಪಾಲಿಸಬೇಕು: CM
Team Udayavani, Aug 12, 2023, 11:12 PM IST
ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ಅಗತ್ಯವಿರುವಷ್ಟು ನೀರಿಲ್ಲ. ಹೀಗಾಗಿ, ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳೂ ಸಂಕಷ್ಟ ಸೂತ್ರವನ್ನು ಪಾಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ಗೆ ಹೋಗದೆ ಬೇರೆ ವಿಧಿಯಿಲ್ಲ ಎಂದು ತಮಿಳುನಾಡು ಸರಕಾರ ಹೇಳಿಕೆ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಂದ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಕಾವೇರಿ ಕೊಳ್ಳದ ಪ್ರದೇಶದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ, ಎರಡೂ ರಾಜ್ಯಗಳು ಸಂಕಷ್ಟ ಸೂತ್ರವನ್ನು ಪಾಲಿಸಬೇಕಾಗಿದೆ. ಕೇರಳ ಹಾಗೂ ಕೊಡಗು ಭಾಗದಲ್ಲಿ ಮಳೆ ಕಡಿಮೆಯಾಗಿರುವುದರಿಂದ ನಮ್ಮ ಜಲಾಶಯಗಳಲ್ಲಿ ನೀರು ಕಡಿಮೆ ಇದೆ. ಪರಿಸ್ಥಿತಿ ನೋಡಿಕೊಂಡು ನೀರು ಹರಿಸಲಾಗುವುದು ಎಂದು ಅವರು ಶನಿವಾರ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರಿಗೆ ತಿಳಿಸಿದರು.
ನಮಗೇ ಮಳೆ ಕಡಿಮೆಯಾಗಿದೆ. ಜಲಾಶಯಕ್ಕೆ ನೀರಿನ ಒಳ ಹರಿವು ಕಡಿಮೆಯಾಗಿದೆ. ತಮಿಳುನಾಡು ತಗಾದೆ ತೆಗೆದಿದೆ. ನಮ್ಮಲ್ಲಿ ಬೆಳೆ ಪರಿಸ್ಥಿತಿ ನೋಡಿಕೊಳ್ಳಬೇಕು. ಸಂಕಷ್ಟ ಪರಿಸ್ಥಿತಿಯನ್ನು ಇಬ್ಬರೂ ಹಂಚಿಕೊಳ್ಳಬೇಕು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.