Police Raid: ರೆಸಾರ್ಟ್ ವೊಂದಕ್ಕೆ ಪೊಲೀಸರ ದಾಳಿ
Team Udayavani, Aug 13, 2023, 9:47 AM IST
ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ.
ರೆಸಾರ್ಟ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 1 ಲಕ್ಷ ರೂ.ಗಳ ಒಂದು ಡಬಲ್ ಬ್ಯಾರಲ್ ಬಂದೂಕು, ಅಂದಾಜು ಮೌಲ್ಯ 25 ಸಾವಿರ ರೂ.ಗಳ 310 ಜೀವಂತ ಗುಂಡುಗಳು, ಒಂದು ಕತ್ತಿ ಮತ್ತು ಒಂದು ಚಾಕು, ಮೂರು ಕಾಡು ಕೋಣದ ಕೊಂಬಿನ ಟ್ರೊಫಿ, ಆರು ಜಿಂಕೆ ಕೊಂಬಿನ ಟ್ರೊಫಿ, ಒಂದು ಸಿಸಿ ಟಿವಿ ಡಿವಿಆರ್, ಅಂದಾಜು ಮೌಲ್ಯ 7,650 ರೂ.ಗಳ ಒಟ್ಟು 51 ಬಿಯರ್ ಟಿನ್ ಗಳು, ಅಂದಾಜು ಮೌಲ್ಯ 1 ಲಕ್ಷ ರೂ. ಗಳ ಮದ್ಯ ತುಂಬಿದ ಬಾಟಲ್ ಗಳು, ಅಂದಾಜು ಮೌಲ್ಯ 750 ರೂ.ಗಳ ಒಟ್ಟು 6 ಬ್ರೀಝರ್ ಬಾಟಲ್ ಮತ್ತು 3 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ದಾಳಿಯಲ್ಲಿ ಐಪಿಎಸ್ ಪೋಲಿಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ ಮತ್ತು ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಗಜಾನನ ವಾಮನ ಸುತಾರ ಮತ್ತು ತೀರ್ಥಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅಶ್ವತ್ ಗೌಡ ಅವರುಗಳ ನೇತೃತ್ವದ ತೀರ್ಥಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಾಗರ್ ಅತ್ತರವಾಲ, ಮಾಳೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನವೀನ್ ಕುಮಾರ್ ಮಠಪತಿ, ಆಗುಂಬೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಂಗನಾಥ ಅಂತರಗಟ್ಟಿ, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಪ್ರವೀಣ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.