Loksabha: “ಹಾಲಿ ಬಿಜೆಪಿ ಸಂಸದರಿಗೆ ಮತ್ತೆ ಟಿಕೆಟ್ ಇಲ್ಲ..”: ಈಶ್ವರಪ್ಪ ಪರೋಕ್ಷ ಮಾತು

Team Udayavani, Aug 13, 2023, 12:17 PM IST

“ಹಾಲಿ ಬಿಜೆಪಿ ಸಂಸದರಿಗೆ ಮತ್ತೆ ಟಿಕೆಟ್ ಇಲ್ಲ..”: ಕೆಎಸ್ ಈಶ್ವರಪ್ಪ ಪರೋಕ್ಷ ಮಾತು

ಹಾವೇರಿ: ರಾಜ್ಯದ ಹಲವು ಬಿಜೆಪಿ ಸಂಸದರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದಿಲ್ಲ ಎಂಬ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹಾವೇರಿಯಲ್ಲಿ ಮಾಜಿ‌ ಸಚಿವ ಕೆಎಸ್ ಈಶ್ವರಪ್ಪ ಅವರು ಇದಕ್ಕೆ ಪುಷ್ಠಿ ನೀಡುವಂತೆ ಹೇಳಿಕೆ ನೀಡಿದ್ದಾರೆ.

“ಹಾವೇರಿಯ ಲೋಕಸಭಾ ಚುನಾವಣೆ ಇರಬಹುದು, ಯಾವುದೇ ಚುನಾವಣೆಗೆ ಟಿಕೆಟ್ ಮುಂದುವರಿಸುವ ಅವಶ್ಯಕತೆ ಇಲ್ಲ” ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಹತ್ತುಕ್ಕೂ ಹೆಚ್ಚು ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಮಿಸ್ಸಾಗಲಿದೆ ಎನ್ನುವ ಚರ್ಚೆ ಬೆನ್ನಲ್ಲೇ ಟಿಕೆಟ್ ಮುಂದುವರಿಸುವ ಅವಶ್ಯಕತೆ ಇಲ್ಲ ಎಂದು ಈಶ್ವರಪ್ಪ ಹೇಳಿರುವುದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಹಿರಿಯರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಇದೇ ಟ್ರೆಂಡ್ ಲೋಕಸಭೆಗೂ ಮುಂದುವರಿಯುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಹಾವೇರಿಯ ಸಿಂದಗಿಮಠಕ್ಕೆ ಕುಟುಂಬ ಸಮೇತ ಮಠಕ್ಕೆ ಆಗಮಿಸಿದ ಕೆಎಸ್ ಈಶ್ವರಪ್ಪ ಅವರು ರುದ್ರ ಹೋಮ, ಶತರುದ್ರಾಭಿಷೇಕದಲ್ಲಿ ಭಾಗಿಯಾದರು. “ಕಳೆದ 25 ವರ್ಷಗಳಿಂದ ಸಿಂದಗಿ ಮಠದ ಸಂಪರ್ಕದಲ್ಲಿದ್ದೇನೆ. ಅನೇಕ ಸಲ ಸಿಂದಗಿಮಠಕ್ಕೆ ಭೇಟಿ ನೀಡಿದ್ದೇನೆ. ಲೋಕ ಕಲ್ಯಾಣಕ್ಕಾಗಿ ರುದ್ದಹೋಮ ಶತರುದ್ರಾಭಿಷೇಕ ಮಾಡಿಸುತ್ತಿದ್ದೇನೆ” ಎಂದರು.

ಇದನ್ನೂ ಓದಿ:Roti Ghar..: ಅನ್ನ ದೇವರ ಮುಂದೆ ಇನ್ನು ದೇವರು ಉಂಟೆ? ಒಂದು ರುಪಾಯಿಗೆ ಫುಲ್‌ ಮೀಲ್ಸ್‌!

ಲೋಕ‌ ಸಮರಕ್ಕೆ ಯಾರು ಆಗಬೇಕು ಎನ್ನುವುದನ್ನು ರಾಜ್ಯ, ರಾಷ್ಟ್ರ ಸಮಿತಿಯವರು ತೀರ್ಮಾನ ಮಾಡುತ್ತಾರೆ. ಅವರ ತೀರ್ಮಾನಕ್ಕೆ ನಾನು ಬದ್ದ. ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ರಾಜಕಾರಣ ಬೇಡ ಎನ್ನುವ ಸೂಚನೆ ಬಂದಿತ್ತು. ಸೂಚನೆ ಬಂದ ಐದು ನಿಮಿಷದಲ್ಲಿ ನಾನು ಪತ್ರ ಬರೆದಿದ್ಧೆ. ಇದನ್ನು ಮೆಚ್ಚಿ ಪ್ರಧಾನ ಮಂತ್ರಿಗಳು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಅದನ್ನು ಬಿಟ್ಟರೆ ಮಗನಿಗೆ ಲೋಕಸಭಾ ಟಿಕೆಟ್ ನೀಡುವ ಮಾತುಕತೆ ಆಗಿರಲಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ನನಗೆ ಯಾವುದೇ ಪ್ರಾಮಿಸ್ ಬಂದಿಲ್ಲ, ನಾನು ಕೇಳಿಲ್ಲ ಎಂದರು.

ಶಿವಕುಮಾರ್ ಉದಾಸಿಯವರು ಚುನಾವಣೆಗೆ ನಿಲ್ಲುವುದಿಲ್ಲ‌ಎಂದು ನನ್ನ ಬಳಿ ಹೇಳಿದ್ದಾರೆ. ಈ ಭಾಗದ ಮಾಜಿ ಶಾಸಕರು, ಮಠಾಧೀಶರು ಹಾವೇರಿ ಕ್ಷೇತ್ರದಿಂದ ಚುನಾವಣೆಗೆ ಒಳ್ಳೆಯದು ಎಂದು ಹೇಳಿದ್ದಾರೆ. ಜನರು, ಕಾರ್ಯಕರ್ತರು ಅಪೇಕ್ಷೆ ಪಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.