Bisile Ghat ರಸ್ತೆಯ ತಿರುವಿನಲ್ಲಿ ಹೊಂಡದಲ್ಲಿ ಸಿಲುಕಿದ ಬಸ್ !
ಬದಲಿ ವ್ಯವಸ್ಥೆ ಮಾಡದಕ್ಕೆ ಪ್ರಯಾಣಿಕರ ಆಕ್ರೋಶ !
Team Udayavani, Aug 13, 2023, 5:40 PM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಲ್ಕುಂದ-ಬಿಸಿಲೆ ಘಾಟ್ ರಸ್ತೆಯ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಚಕ್ರ ಹೊಂಡದಲ್ಲಿ ಸಿಲುಕಿಕೊಂಡು ಬಸ್ ಬಾಕಿಯಾದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ.
ಬೆಂಗಳೂರಿನಿಂದ ಅರಕಲಗೂಡು ಶನಿವಾರ ಸಂತೆ – ಕುಕ್ಕೆ ಸುಬ್ರಹ್ಮಣ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುವ ಬಸ್ ಇದಾಗಿತ್ತು. ರವಿವಾರ ಮುಂಜಾನೆ ಹೊತ್ತಿಗೆ ಬಿಸ್ಲೆ ಗಡಿ ದೇವಲದ ಸಮೀಪ ರಸ್ತೆಯ ತಿರುವಿನಲ್ಲಿ ಬಸ್ ರಸ್ತೆಯ ಬದಿ ಆಳವಾದ ಹೊಂಡಕ್ಕೆ ಬಸ್ಸಿನ ಹಿಂಭಾಗವು ಸರಿದು ಸಿಲುಕಿಕೊಂಡಿದೆ.
ಬಸ್ಸನ್ನು ಮೇಲೆತ್ತಲು ಕ್ರೇನ್ ತರಿಸಲು ಭರವಸೆ ನೀಡಿದ್ದರೂ ಮಾಡಿರಲಿಲ್ಲ ಎಂದು ದೂರು ವ್ಯಕ್ತವಾಗಿದೆ. ಮಧ್ಯಾಹ್ನವರೆಗೂ ಬಸ್ಸಿನ ತೆರವು ಕಾರ್ಯ ನಡೆದಿರಲಿಲ್ಲ. ಜತೆಗೆ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆಯನ್ನೂ ಮಾಡಿರಲಿಲ್ಲ. ಘಟನೆಯಿಂದ ಅನೇಕ ಪ್ರಯಾಣಿಕರಿಗೆ ಹಾಗೂ ಚಿಕಿತ್ಸೆಗೆಂದು ಮಂಗಳೂರಿಗೆ ತೆರಳುವಂಥ ಪ್ರಯಾಣಿಕರಿಗೆ, ಸಣ್ಣ ಪುಟ್ಟ ಮಕ್ಕಳು ಸಂಕಷ್ಟ ಅನುಭವಿಸಿದರು.
ಬದಲಿ ವ್ಯವಸ್ಥೆ ಕೈಗೊಳ್ಳದ ಬಗ್ಗೆ ಪ್ರಯಾಣಿಕರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಘಟನೆ ನಡೆದ ಸ್ಥಳವೂ ಅರಣ್ಯದ ಮಧ್ಯದಲ್ಲಿದ್ದು, ಕಾಡುಪ್ರಾಣಿಗಳ ಸಂಚಾರವೂ ಇರುತ್ತದೆ. ಘಟನೆಯಿಂದ ರಸ್ತೆ ಬಂದ್ ಆಗಿದ್ದು, ಎರಡೂ ಕಡೆಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಧ್ಯಾಹ್ನ ಬಳಿಕ ಬಸ್ ತೆರವಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.