Remembrance Day ದೇಶ ವಿಭಜನೆ: ಹುತಾತ್ಮರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ
Team Udayavani, Aug 15, 2023, 12:06 AM IST
ಹೊಸದಿಲ್ಲಿ: 1947ರ ದೇಶ ವಿಭಜನೆ ಸಂದರ್ಭದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು. ದೇಶ ವಿಭಜನೆ ವೇಳೆ ಉಂಟಾದ ಕೋಮು ಗಲಭೆಯಲ್ಲಿ ಅನೇಕ ಭಾರತೀಯರು ಮೃತರಾದರು.
ಆ ಸಂದರ್ಭದಲ್ಲಿ ಈಗಿನ ಪಾಕಿಸ್ಥಾನದಲ್ಲಿರುವ ಹಿಂದೂಗಳು ಹಾಗೂ ಸಿಕ್ಖ್ರನ್ನು ಬಲವಂತವಾಗಿ ವಲಸೆ ಹೋಗುವಂತೆ ಮಾಡಲಾಯಿತು.ಸಾವಿರಾರು ಜನರನ್ನು ಹತ್ಯೆ ಮಾಡಲಾಯಿತು. ಅನೇಕ ಮಹಿಳೆಯರ ಮೇಲೆ ಅತ್ಯಾಚಾರ ಎಸಗ ಲಾಯಿತು. “ದೇಶ ವಿಭಜನೆ ವೇಳೆ ಜೀವ ಕಳೆದುಕೊಂಡ ಭಾರತೀಯರನ್ನು ಪೂಜ್ಯ ಭಾವದಿಂದ ಸ್ಮರಿಸುವ ದಿನವೇ “ವಿಭಜನೆಯ ಕರಾಳತೆಯ ಸಂಸ್ಮರಣ ದಿನ’ವಾಗಿದೆ. ಬಲವಂತವಾಗಿ ವಲಸೆ ಬಂದವರ ದುಃಖ ಹಾಗೂ ಕಷ್ಟವನ್ನು ಸ್ಮರಿಸುವ ದಿನ. ಅಂತಹ ಎಲ್ಲರಿಗೂ ನಮಸ್ಕರಿಸುತ್ತೇನೆ’ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಧರ್ಮದ ಆಧಾರದಲ್ಲಿ ದೇಶವನ್ನು ಇಬ್ಭಾಗ ಮಾಡಿದ್ದು ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿದೆ. 1947ರ ಭಯಾನಕ ಆಘಾತದ ಪರಿಣಾಮವನ್ನು ಅನೇಕ ಜನರು ಈಗಲೂ ಅನುಭವಿಸುತ್ತಿ¨ªಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.