Loksabha ಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ: ಮಂಕಾಳು ವೈದ್ಯ
Team Udayavani, Aug 15, 2023, 5:05 PM IST
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಗೆಲ್ಲುವೆವು. ಜನರ ಕೆಲಸ ಮಾಡುತ್ತಿರುವ ನಮಗೆ ವಿಶೇಷವಾಗಿ ತಯಾರಿ ಬೇಕೆಂದಿಲ್ಲ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು.
ಕಾರವಾರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಹಾಗಾಗಿ ಕಾಂಗ್ರೆಸ್ ಸುಲಭವಾಗಿ ಕೆನರಾ ಕ್ಷೇತ್ರದಲ್ಲಿ ಗೆಲ್ಲಲಿದೆ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದಿಂದ ಜನರ ಕಷ್ಟಗಳಿಗೆ ನಮ್ಮ ಸರ್ಕಾರ ನೆರವಾಗಿದೆ. ಹಾಗಾಗಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳನ್ನು ಸರ್ಕಾರ ತಲುಪಿದೆ. ಇಷ್ಟು ಸಾಕು ಎಂದರು.
ಸರ್ಕಾರಗಳು ಜನರಿಗೆ ನೆರವಾಗಬೇಕು. ಅದನ್ನು ನಾವು ಮಾಡುತ್ತಿದ್ದೇವೆ ಎಂದು ಸಚಿವ ಮಂಕಾಳು ನುಡಿದರು.
ಯತ್ನಾಳ್ ಮನಸು ಸರಿ ಮಾಡಿಕೊಳ್ಳಲಿ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹಿರಿಯರು. ಅವರು ಬಿಜೆಪಿ ಸರ್ಕಾರ ಇದ್ದಾಗ ಮುಖ್ಯಮಂತ್ರಿಯಾಗಲು ಎರಡು ಸಾವಿರ ಕೋಟಿಯನ್ನು ಬಿಜೆಪಿ ಹೈಕಮಾಂಡ್ ಗೆ ಕೊಡಬೇಕು ಎಂದು ಹೇಳಿದ್ದರು. ನಮ್ಮ ಸರ್ಕಾರ ಗಟ್ಟಿ ಇದೆ. ಐದು ವರ್ಷ ಅಧಿಕಾರದಲ್ಲಿ ಇರುತ್ತೇವೆ. ಇದೇ ಸತ್ಯ. ಲೋಕಸಭಾ ಚುನಾವಣೆ ನಂತರ ಬಿಜೆಪಿ ಸ್ಥಿತಿ ಏನಾಗಲಿದೆ ಕಾದು ನೋಡಿ. ಅವರಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗಿಲ್ಲ ಎಂದರು.
ಬಿಜೆಪಿ ಚುನಾವಣಾ ಸಮಯದಲ್ಲಿ ಮಾಡಿದ ಪಾಪದ ಕೆಲಸಕ್ಕೆ ನಾವು ಹಣ ಜೋಡಿಸಿ ಗುತ್ತಿಗೆದಾರರನ್ನು ರಕ್ಷಿಸಬೇಕಿದೆ. ಸಾವಿರಾರು ಕೋಟಿ ಹಣ ಇಲ್ಲದೆ, ಅನುದಾನ ಕೊಡದೆ ಕೆಲಸಕ್ಕೆ ಅಡಿಗಲ್ಲು ಹಾಕಿ, ಜನರಿಗೆ, ಗುತ್ತಿಗೆದಾರರಿಗೆ ಮೋಸಮಾಡಿ ಬಿಜೆಪಿ ಸೋತಿದೆ. ಆ ಪಾಪದ ಕೆಲಸ ನಾವು ಸರಿ ಮಾಡುತ್ತಿದ್ದೇವೆ ಎಂದು ಸಚಿವ ವೈದ್ಯ ಹೇಳಿದರು.
ಶಾಸಕ ಸತೀಶ್ ಸೈಲ್, ಡಿಸಿ ಗಂಗೂಬಾಯಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.