![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 15, 2023, 5:36 PM IST
ಚಿತ್ರರಂಗಕ್ಕೆ ದಿನದಿಂದ ದಿನಕ್ಕೆ ಬರುತ್ತಿರುವ ಹೊಸ ಪ್ರತಿಭೆಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಈ ಸಾಲಿಗೆ ಈಗ ಹೊಸ ಸೇರ್ಪಡೆ “ರಾಯಲ್ ಮೆಕ್’. ಇದು ಸಂಪೂರ್ಣ ಹೊಸಬರ ತಂಡ. ಭದ್ರಾವತಿ ಮೂಲದ ಧನುಶ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ.
“ರಾಯಲ್ ಮೆಕ್’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಾಯಕನಾಗಿ ನಟಿಸಿದ್ದಾರೆ. ಒಂದಷ್ಟು ಸ್ನೇಹಿತರು ಗೆಳೆಯನ ಸಲುವಾಗಿ ಶಬರಿ ಫಿಲಿಂಸ್ ಮುಖಾಂತರ ಬಂಡವಾಳ ಹೂಡಿದ್ದಾರೆ. ನಾಗಭೂಷಣ್.ಜೆ.ಹೆಚ್. ಎಂ ಮತ್ತು ಡಾ.ಜಯದೇವಹಾಸನ್ ಜಂಟಿಯಾಗಿ ಈ ಚಿತ್ರ ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ “ಲೈಫ್ ಅಂದ್ಕೊಂಡಷ್ಟು ರಾಯಲ್ ಅಲ್ಲ’ ಅಂತ ಅಡಿಬರಹ ಇದೆ.
ಇತ್ತೀಚೆದಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಹಿರಿಯ ನಟಿ ರೇಖಾದಾಸ್ ಆಗಮಿಸಿ ತಂಡಕ್ಕೆ ಶುಭಹಾರೈಸಿದರು.
ಒಂದು ಕಡೆ ಗೆಳಯನಿಂದ ಮೋಸ, ಮನೆಯಲ್ಲಿ ನಡೆಯುವ ಘಟನೆಗಳಿಂದ ವಿಚಲಿತನಾಗಿ ಹೊರಬಂದು ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ನಾಯಕ… ಆದರೆ ಮನದೊಳಗೆ ತಾನು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲ ಕಾಡುತ್ತಿರುತ್ತದೆ. ಒಂದು ಹಂತದಲ್ಲಿ ಒಬ್ಬ ವ್ಯಕ್ತಿಯಿಂದ ಪ್ರೇರಣೆ ಸಿಗುತ್ತದೆ.. ಎಂದು ಚಿತ್ರದ ಬಗ್ಗೆ ವಿವರ ನೀಡುತ್ತದೆ ಚಿತ್ರತಂಡ.
ನಿರ್ದೇಶಕನ ಪಾತ್ರದಲ್ಲಿ ರಾಘವೇಂದ್ರ ರಾಜ್ ಕುಮಾರ್ ನಟಿಸಿದ್ದಾರೆ. ಶ್ರಾವ್ಯಾ ರಾವ್ ಹಾಗೂ ಗೌತಮಿ ಜಯರಾಂ ನಾಯಕಿಯರು. ಉಳಿದಂತೆ ರಮೇಶ್ ಭಟ್, ವಿನಯಪ್ರಸಾದ್, ಕುರಿಪ್ರತಾಪ್, ಪವನ್ ಕುಮಾರ್ ಹಾಗೂ ರೇಖಾದಾಸ್ ನಟಿಸಿದ್ದಾರೆ. ಬೆಂಗಳೂರು, ಉಡುಪಿ, ಕುಂದಾಪುರ, ಕಾಪು ಬೀಚ್, ಚಿಕ್ಕಮಗಳೂರು, ಕ್ಯಾತಮಕ್ಕಿ ಬೆಟ್ಟ ಸುಂದರತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಪ್ರಮೋದ್ ಮರವಂತೆ, ದೇವಪ್ಪ ಹಾಸನ್ ಸಾಹಿತ್ಯದ ಹಾಡುಗಳಿಗೆ ರಿಜ್ವಾಗ ಅಹ್ಮದ್ ಸಂಗೀತ ಸಂಯೋಜಿಸಿದ್ದಾರೆ. ಚಂದ್ರಮೌಳಿ ಛಾಯಾಗ್ರಹಣ ಚಿತ್ರಕ್ಕಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.