![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 15, 2023, 11:51 PM IST
ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಯಾವುದೇ ಕಾಮಗಾರಿಗಳ ಪರಿಶೀಲನೆ ನಡೆಸಿ ಸಮರ್ಪಕ ಎನಿಸಿದರೆ ಮಾತ್ರ ಬಿಲ್ ಪಾವತಿ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಕಾಮಗಾರಿ ಬಗ್ಗೆ ಸಾರ್ವಜನಿಕರು ಫೋಟೋ ಸಹಿತ ದೂರು ನೀಡಲು ಅವಕಾಶ ಕೊಡಲಾಗುತ್ತದೆ. ಅದಕ್ಕಾಗಿ ಇಲಾಖೆ ವತಿಯಿಂದ ಪ್ರತ್ಯೇಕ ವೆಬ್‌ಸೈಟ್ ಆರಂಭ ಮಾಡಲಾಗುತ್ತದೆ ಎಂದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು ಇನ್ನೊಂದು ವಾರದಲ್ಲಿ ಅದು ಶುರುವಾಗಲಿದೆ. ಇಲಾಖೆಯಿಂದ ಗುತ್ತಿಗೆದಾರರು ನಡೆಸುವ ಕಾಮಗಾರಿಗಳು ಕಳಪೆ ಗುಣಮಟ್ಟ
ದಿಂದ ಕೂಡಿವೆ ಎಂದು ಫೋಟೋ ಆಥವಾ ವೀಡಿಯೋ ಸಮೇತ ದೂರು ಸಲ್ಲಿಸಿದರೆ ಅವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಈಗಾಗಲೇ ಇಂತಹ ಮೂರು ದೂರುಗಳು ಬಂದಿದ್ದು ಅದರ ತನಿಖೆ ನಡೆದಿದೆ. ಯಾವುದೇ ಬಿಲ್ ಪಾವತಿ ಮಾಡುವ ಮುನ್ನ ಕಾಮಗಾರಿಗಳನ್ನು ಪರಿಶೀಲಿಸಲಾಗುವುದು ಎಂದರು.
ಸಾವಿರಾರು ಕೋ. ರೂ. ಬಾಕಿ
ಹಿಂದಿನ ಬಿಜೆಪಿ ಸರಕಾರದ ನೀತಿ ಗಳಿಂದ ರಾಜ್ಯದಲ್ಲಿ ಗುತ್ತಿಗೆದಾರರ ಸಾವಿರಾರು ಕೋಟಿ ರೂ. ಬಿಲ್ ಬಾಕಿ ಉಳಿದಿದೆ. ಲೋಕೋಪಯೋಗಿ ಇಲಾಖೆಯೊಂದರಲ್ಲೇ 6,000 ಕೋಟಿ ಬಾಕಿ ಇದೆ. ಇಲಾಖೆಗೆ ಇರುವ ಮೊತ್ತ 1,500 ಕೋಟಿ ರೂ. ಟೆಂಡರ್ ನಿಯಮಗಳ ಪ್ರಕಾರ ಒಂದು ಬಾರಿಗೆ ಮೂರನೇ ಒಂದು ಭಾಗದಷ್ಟು (ಶೇ. 33) ಬಿಲ್ ಕೊಡಬೇಕಾಗಿದೆ. ಇದನ್ನು ನೋಡಿದರೆ ಗುತ್ತಿಗೆದಾರರ ಬಾಕಿ ಪಾವತಿಗೆ ಎರಡರಿಂದ ಮೂರು ವರ್ಷ ಬೇಕಾಗುತ್ತದೆ. ಈ ಬಿಲ್‌ಗಳು ಬಾಕಿ ಉಳಿಯಲು ಕಾಂಗ್ರೆಸ್ ಸರಕಾರ ಕಾರಣ ಅಲ್ಲ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಕಾರಣ ಎಂದರು ಸತೀಶ್.
ಬೊಮ್ಮಾಯಿ ಸರಕಾರ ಮಂಡಿಸಿದ್ದ ಬಜೆಟ್‌ನ ಹಣವನ್ನು ನಮ್ಮ ಸರಕಾರ ಬೇರೆ ಕಡೆ ತಿರುಗಿಸಿಲ್ಲ. ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ವಿವಿಧ ಸಂಪನ್ಮೂಲಗಳಿಂದ 40 ಸಾವಿರ ಕೋಟಿ ರೂ.ಗಳನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಒದಗಿಸಿದ್ದಾರೆ ಎಂದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.