Fraud: ಆನ್ಲೈನ್ನಲ್ಲಿ ಹಣ ದ್ವಿಗುಣ ಆಮಿಷ: ಲಕ್ಷಾಂತರ ರೂ. ವಂಚನೆ
Team Udayavani, Aug 16, 2023, 12:16 AM IST
ಉಡುಪಿ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.
ಅಕ್ಷತಾ ಅವರಿಗೆ ಆ. 9ರಂದು ವಾಟ್ಸ್ಆ್ಯಪ್ನಲ್ಲಿ ಹಣ ದ್ವಿಗುಣಗೊಳಿಸುವ ಬಗ್ಗೆ ಸಂದೇಶ ಬಂದಿದ್ದು, ಅದನ್ನು ನಂಬಿದ ಅವರು ಹಂತಹಂತವಾಗಿ ಒಟ್ಟು 1,01,000 ರೂ.ಗಳನ್ನು ಆರೋಪಿಗಳು ನೀಡಿದ ಖಾತೆಗೆ ವರ್ಗಾಯಿಸಿದ್ದಾರೆ.
ಆದರೆ ಆರೋಪಿಗಳು ಹಣ ಹಿಂದಿರುಗಿಸದೆ ವಂಚಿಸಿದ್ದಾರೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.