Udupi ಪ್ರಸಾದ್ ನೇತ್ರಾಲಯಕ್ಕೆ “ಆಯುಷ್ಮಾನ್ ಅತ್ಯುತ್ತಮ ನಿರ್ವಹಣ ಪ್ರಶಸ್ತಿ’
Team Udayavani, Aug 16, 2023, 12:32 AM IST
ಉಡುಪಿ: ರಾಜ್ಯದಲ್ಲಿ ಆಯುಷ್ಮಾನ್ ಭಾರತ್ ಕರ್ನಾಟಕ (ಎಬಿಪಿಎಂಜೆಎವೈ-ಎಆರ್‌ಕೆ) ಯೋಜನೆಯನ್ನು ಅನುಷ್ಠಾನ ಗೊಳಿಸುವಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ಅತ್ಯುತ್ತಮ ಕಾರ್ಯಕ್ಷಮತೆಯ ವಿವರ ಮತ್ತು ಯೋಜನೆಯ ಬಳಕೆಯಲ್ಲಿ ಅತ್ಯುತ್ತಮ ನಿರ್ವಹಣೆ ಸಾಧಿಸಿರುವುದನ್ನು ಪರಿಗಣಿಸಿ ಉಡುಪಿಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯಕ್ಕೆ “ಆಯುಷ್ಮಾನ್ ಅತ್ಯುತ್ತಮ ನಿರ್ವಹಣ ಪ್ರಶಸ್ತಿ’ ಲಭಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಹಸ್ತಾಂತರಿಸಿದರು.
ಪ್ರಸಾದ್ ನೇತ್ರಾಲಯವು ಈ ವರ್ಷ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಉಡುಪಿ ಜಿಲ್ಲೆಯ ಏಕೈಕ ಆಸ್ಪತ್ರೆಯಾಗಿರುವುದಲ್ಲದೆ, ರಾಜ್ಯದ ಏಕೈಕ ಕಣ್ಣಿನ ಆಸ್ಪತ್ರೆಯಾಗಿ ಈ ಗೌರವಕ್ಕೆ ಪಾತ್ರವಾಗಿದೆ. ಪ್ರಸಾದ್ ನೇತ್ರಾಲಯದ ಪರವಾಗಿ ಹಿರಿಯ ನೇತ್ರತಜ್ಞ ಡಾ| ಸಚಿನ್ ಎಸ್. ಶೆಡೋಲೆ ಪ್ರಮಾಣಪತ್ರ ಸ್ವೀಕರಿಸಿದರು.
ಶಾಸಕ ಯಶ್‌ಪಾಲ್ ಎ. ಸುವರ್ಣ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿಲ್ಲಾಆರೋಗ್ಯಾಧಿಕಾರಿ ಎಚ್. ನಾಗಭೂಷಣ ಉಡುಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.