Shilpa Shetty: ಧ್ವಜಾರೋಹಣ ವೇಳೆ ಶೂ ಹಾಕಿದ್ದಕ್ಕೆ ಟ್ರೋಲಾದ ನಟಿ ಶಿಲ್ಪಾ ಶೆಟ್ಟಿ

ಟ್ರೋಲರ್ಸ್‌ ಗಳಿಗೆ ಖಡಕ್‌ ರಿಪ್ಲೈ ಕೊಟ್ಟ ನಟಿ

Team Udayavani, Aug 16, 2023, 12:49 PM IST

Shilpa Shetty: ಧ್ವಜಾರೋಹಣ ವೇಳೆ ಶೂ ಹಾಕಿದ್ದಕ್ಕೆ ಟ್ರೋಲಾದ ನಟಿ ಶಿಲ್ಪಾ ಶೆಟ್ಟಿ

ಮುಂಬಯಿ: ಬಿಟೌನ್‌ ನಲ್ಲಿ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುವ ನಟಿ ಶಿಲ್ಪಾ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಯ ದಿನ ಧ್ವಜಾರೋಹಣ ಮಾಡಿದ್ದಾರೆ. ಈ ಮೂಲಕ ದೇಶ ಪ್ರೇಮವನ್ನು ಮರೆದಿದ್ದಾರೆ. ಆದರೆ ಇದೇ ವಿಚಾರವಾಗಿ ಅವರು ಟ್ರೋಲ್‌ ಆಗಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ತನ್ನ ಕುಟುಂಬದೊಂದಿಗೆ 77ನೇ ಸ್ವಾತಂತ್ರ್ಯ ದಿನವನ್ನು ಧ್ವಜಾರೋಹಣನ್ನು ನೆರವೇರಿಸುವ ಮೂಲಕ ಸಂಭ್ರಮಿಸಿದ್ದಾರೆ. ಆದರೆ ಧ್ವಜಾರೋಹಣ ಮಾಡಿದ ವೇಳೆ ಅವರು ಶೂಗಳನ್ನು ಹಾಕಿಕೊಂಡಿದ್ದಾರೆ ಎನ್ನುವ ವಿಚಾರದಲ್ಲಿ ಟ್ರೋಲ್‌ ಆಗಿದ್ದಾರೆ.

ಧ್ವಜಾರೋಹಣವನ್ನು ನೆರವೇರಿಸುವ ವಿಡಿಯೋವನ್ನು ಶಿಲ್ಪಾ ಶೆಟ್ಟಿ ತನ್ನ ಇನ್‌ಸ್ಟಾಗ್ರಾಮ್‌ ನಲ್ಲಿ ಹಾಕಿಕೊಂಡಿದ್ದಾರೆ. ಈ ವೇಳೆ ಹಾಕಿರುವ ಶೂಗಳನ್ನು ನೋಡಿ ಕೆಲವರು ಅವರನ್ನು ಟ್ರೋಲ್‌  ಮಾಡಿದ್ದಾರೆ.

“ನೀವು ರಾಷ್ಟ್ರಧ್ವಜವನ್ನು ಹಾರಿಸುವಾಗ, ನಿಮ್ಮ ಪಾದರಕ್ಷೆಗಳನ್ನು ತೆಗೆದ ನಂತರವೇ ಧ್ವಜದ ಹಗ್ಗವನ್ನು ಸ್ಪರ್ಶಿಸಿ ಎಂದು ನಾನು ನಿಮ್ಮನ್ನು ಆಗ್ರಹಿಸುತ್ತೇನೆ” ಎನ್ನುವ ಕಮೆಂಟನ್ನು ನೆಟ್ಟಗರೊಬ್ಬರು ಮಾಡಿದ್ದಾರೆ. “ರಾಷ್ಟ್ರ ಧ್ವಜವನ್ನು ಹಾರಿಸುವಾಗ ಚಪ್ಪಲಿಗಳನ್ನು ತೆಗೆಯಬೇಕೆನ್ನುವುದು ಕೂಡ ನಿಮಗೆ ಗೊತ್ತಿಲ್ಲ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darren Kent: 36ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಖ್ಯಾತ ಹಾಲಿವುಡ್ ನಟ

ಸಾಮಾನ್ಯವಾಗಿ ಶಿಲ್ಪಾ ಶೆಟ್ಟಿ ಯಾವ ಟ್ರೋಲ್‌ ಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಈ ಬಾರಿ ಅವರು ಖಡಕ್‌ ಆಗಿ ಟ್ರೋಲರ್‌ ಗಳಿಗೆ ಪ್ರತಿಕ್ರಿಯೆ ನೀಡಿರುವುದು ವೈರಲ್‌ ಆಗಿದೆ.

“ಧ್ವಜಾರೋಹಣ ಮಾಡುವಾಗ ಇರುವ ನಿಯಮಗಳ ಬಗ್ಗೆ ನನಗೆ ತಿಳಿದಿದೆ, ನನ್ನ ದೇಶ ಮತ್ತು ಧ್ವಜದ ಗೌರವವು ನನ್ನ ಹೃದಯದಿಂದ ಬಂದಿದೆಯೇ ಹೊರತು ಪ್ರಶ್ನಿಸಲು ಅಲ್ಲ. ನಾನೊಬ್ಬ ಹೆಮ್ಮೆಯ ಭಾರತೀಯಳು. ಇಂದಿನ ಪೋಸ್ಟ್ ನ್ನು ದೇಶದ ಬಗೆಗಿನ ಭಾವನೆಯನ್ನು ಹಂಚಿಕೊಳ್ಳಲು ಮತ್ತು ಆಚರಿಸಲು ಹಾಕಿದ್ದೇನೆ. ಎಲ್ಲಾ ಟ್ರೋಲರ್‌ಗಳಿಗೆ (ನಾನು ಸಾಮಾನ್ಯವಾಗಿ ನಿರ್ಲಕ್ಷಿಸುತ್ತೇನೆ) ಈ ದಿನ ನಿಮ್ಮ ಅಜ್ಞಾನ ಹಾಗೂ ನಕಾರಾತ್ಮಕತೆಯನ್ನು ಹರಡಬೇಡಿ” ಎಂದಿದ್ದಾರೆ.

ಇಷ್ಟು ಮಾತ್ರವಲ್ಲದೆ ಗೂಗಲ್‌ ನಲ್ಲಿ “ನಾವು ಭಾರತದ ಧ್ವಜವನ್ನು ಹಾರಿಸುವಾಗ ಶೂಗಳೊಂದಿಗೆ ಹಾರಿಸಬಹುದೇ?” ಎನ್ನುವ ಪ್ರಶ್ನೆಯನ್ನು ಹಾಕಿ ಅದಕ್ಕೆ ಬಂದ ಪ್ರತಿಕ್ರಿಯೆಯನ್ನು ಸ್ಕ್ರೀನ್‌ ಶಾಟ್‌ ಮಾಡಿ ಸ್ಟೋರಿಯಲ್ಲಿ ಹಾಕಿಕೊಂಡಿದ್ದಾರೆ. “ಭಾರತದ ಧ್ವಜ ಸಂಹಿತೆಯು ಬೂಟುಗಳೊಂದಿಗೆ ರಾಷ್ಟ್ರಧ್ವಜವನ್ನು ಹಾರಿಸುವುದನ್ನು ನಿರ್ಬಂಧಿಸುವುದಿಲ್ಲ” ಎಂದು ಪ್ರಶ್ನೆಗೆ ಬಂದ ಉತ್ತರವಾಗಿತ್ತು. ಇದು ಫ್ಯಾಕ್ಟ್‌ ಎಂದು ನಟಿ ಬರೆದುಕೊಂಡಿದ್ದಾರೆ.

ಇನ್ನು ನಟಿ ಶಿಲ್ಪಾ ಶೆಟ್ಟಿ ರೋಹಿತ್ ಶೆಟ್ಟಿ ಅವರ ವೆಬ್‌ ಸಿರೀಸ್ ‘ಇಂಡಿಯನ್ ಪೋಲಿಸ್ ಫೋರ್ಸ್’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ‌ಇದು ಪ್ರೈಮ್ ವಿಡಿಯೋ ಇಂಡಿಯಾದಲ್ಲಿ ಪ್ರೀಮಿಯರ್ ಆಗಲಿದೆ.

ಟಾಪ್ ನ್ಯೂಸ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.