BJP list; ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ಬಘೇಲ್ vs ವಿಜಯ್ ಬಘೇಲ್ ಹಣಾಹಣಿ!
Team Udayavani, Aug 17, 2023, 8:29 PM IST
ಹೊಸದಿಲ್ಲಿ: ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಗುರುವಾರ ಬಿಜೆಪಿ ಪ್ರಕಟಿಸಿದ 29 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ದುರ್ಗ್ ಸಂಸದ ವಿಜಯ್ ಬಘೇಲ್ ಸ್ಥಾನ ಪಡೆದಿದ್ದಾರೆ. ವಿಜಯ್ ಬಘೇಲ್ ಅವರು ಪಟಾನ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ ಛತ್ತೀಸ್‌ಗಢದ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರ ಸ್ವಕ್ಷೇತ್ರ ಪಟಾನ್‌ನಲ್ಲಿ ಬಿಜೆಪಿ ಚಿಕ್ಕಪ್ಪನ ವಿರುದ್ಧ ರಾಜಕೀಯ ಕಾಳಗಕ್ಕೆ ವೇದಿಕೆಯನ್ನುಯನ್ನು ಹುಟ್ಟುಹಾಕಿದೆ.
ಪಟಾನ್ ಪ್ರಸ್ತುತ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪ್ರತಿನಿಧಿಸುತ್ತಿದ್ದು, ಪಟಾನ್ ಕ್ಷೇತ್ರದ ಮತದಾರರು ಐದು ಬಾರಿ ವಿಧಾನಸಭೆಗೆ ಕಳುಹಿಸಿರುವುದರಿಂದ ಕಾಂಗ್ರೆಸ್ ಅವರನ್ನು ಮತ್ತೊಂದು ಕ್ಷೇತ್ರಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿಲ್ಲ.
ಪಟಾನ್‌ನಲ್ಲಿ ವಿಜಯ್ ಬಘೇಲ್ ಅವರ ಚಿಕ್ಕಪ್ಪ ಭೂಪೇಶ್ ಬಘೇಲ್ ಅವರನ್ನು ಎದುರಿಸುವುದು ಇದು ನಾಲ್ಕನೇ ಬಾರಿಯಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಮೂರನೇ ಬಾರಿಗೆ. ವಿಜಯ್ ಅವರು 2008 ರ ವಿಧಾನಸಭಾ ಚುನಾವಣೆಯಲ್ಲಿ ಪಟಾನ್‌ನಿಂದ ಸುಮಾರು 7,500 ಮತಗಳ ಅಂತರದಿಂದ ತಮ್ಮ ಚಿಕ್ಕಪ್ಪನನ್ನು ಸೋಲಿಸಿದ್ದರು. ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್, 2003 ಮತ್ತು 2013 ರಲ್ಲಿ ವಿಜಯಶಾಲಿಯಾಗಿದ್ದರು.ಕಳೆದ ಚುನಾವಣೆಯಲ್ಲಿ ಬಿಜೆಪಿಯ ಮೋತಿಲಾಲ್ ಸಾಹು ವಿರುದ್ಧ 27,000 ಮತಗಳ ಅಂತರದಿಂದ ಗೆಲುವು ಸಾಧಿಸಿ ಸಿಎಂ ಹುದ್ದೆಗೇರಿದ್ದರು.
ಛತ್ತೀಸ್‌ಗಢದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿವೆ. ಒಟ್ಟು 11 ಲೋಕಸಭೆ ಮತ್ತು 5 ರಾಜ್ಯಸಭಾ ಸ್ಥಾನಗಳನ್ನು ಹೊಂದಿದೆ. 51 ಸ್ಥಾನಗಳನ್ನು ಸಾಮಾನ್ಯ ವರ್ಗಕ್ಕೆ, 10 ಸ್ಥಾನಗಳನ್ನು ಪರಿಶಿಷ್ಟ ಜಾತಿಗೆ ಮತ್ತು 29 ಸ್ಥಾನಗಳನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿತ್ತು. ಕೇವಲ 15 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 68 ಸ್ಥಾನಗಳನ್ನು ವಶಪಡಿಸಿಕೊಂಡು ಸರ್ಕಾರವನ್ನು ರಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.