Vijayanagara ಜಿಲ್ಲೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಸಿಎಂಗೆ ಮನವಿ
ಬೆಂಗಳೂರಿನಲ್ಲಿ ನಡೆದ ವಿಜಯನಗರ ಜಿಲ್ಲೆ ಶಾಸಕರ ಸಭೆಯಲ್ಲಿ ಆಗ್ರಹ
Team Udayavani, Aug 17, 2023, 11:09 PM IST
ಹೊಸಪೇಟೆ: ವಿಜಯನಗರ ಜಿಲ್ಲಾ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಿಜಯನಗರ ಜಿಲ್ಲಾ ಶಾಸಕರ ಸಭೆಯಲ್ಲಿ ಮನವಿ ಸಲ್ಲಿಸಿದ ಸಚಿವರು, ನೂತನ ವಿಜಯನಗರ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಬೇಕಿದೆ. ಜಿಲ್ಲಾ ಕಚೇರಿಗಳು ಅಧಿಕಾರಿ, ಸಿಬ್ಬಂದಿಗಳು ನೇಮಕ ಆಗಬೇಕಿದೆ. 19 ಇಲಾಖೆಗಳಿಗೆ ಕಚೇರಿ ಇಲ್ಲದಂತಹ ಸ್ಥಿತಿ ಇದೆ. 15 ಅಧಿಕಾರಿಗಳು ಬಳ್ಳಾರಿ, ದಾವಣಗೆರೆ, ಕೊಪ್ಪಳ ಜಿಲ್ಲೆಗಳ ಹೊಣೆಗಾರಿಕೆ ಜತೆ ವಿಜಯನಗರದ ಜವಬ್ದಾರಿಯನ್ನು ಸಹ ನಿಭಾಯಿಸಬೇಕಿದೆ. ಹೀಗಾಗಿ ಸ್ವಂತ ಕಚೇರಿ, ಅಧಿಕಾರಿ ಸಿಬ್ಬಂದಿ ನೇಮಕ ಆಗಬೇಕಿದೆ. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ತಾಲ್ಲಾಕುವಾರು ಕೆಡಿಪಿ ಸಭೆಯಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ, ಹಾಸ್ಟೆಲ್ ಗಳಲ್ಲಿ ಸೌಲಭ್ಯ ಕೊರತೆ ಸೇರಿದಂತೆ ಶಿಕ್ಷಣ, ಆರೋಗ್ಯ, ಮೂಲಸೌರ‍್ಯ, ಕುಡಿಯುವ ನೀರು ಪೂರೈಕೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಬೆಳಕಿಗೆ ಬಂದಿವೆ. ಒಂದೊಂದು ತಾಲೂಕಿನಲ್ಲಿ ಭಿನ್ನವಾದ ಜಲ್ವಂತ ಸಮಸ್ಯೆಗಳು ಕಂಡು ಬಂದಿವೆ. ಭವಿಷ್ಯದಲ್ಲಿ ವಿಜಯನಗರವನ್ನು ಮಾದರಿ ಜಿಲ್ಲೆಯಾಗಿ ರೂಪಿಸಲು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ಯೋಗ ಸೃಷ್ಠಿ, ಪ್ರವಾಸೋದ್ಯಮ ಅಭಿವೃದ್ಧಿ ಹೀಗೆ ಎಲ್ಲ ವಲಯಗಳಲ್ಲಿ ಅಭಿವೃದ್ಧಿಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ದ ಪಡಿಸಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ವಿಜಯನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಎಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ..ಎನ್.ಟಿ.ಶ್ರೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.