A message; 24 ಗಂಟೆಯೊಳಗೆ ಸ್ವಚ್ಛವಾಯ್ತು 32 ಗ್ರಾಮೀಣ ಬಸ್ ನಿಲ್ದಾಗಳು!

ಪ್ರೇರಣೆ ನೀಡಿದ ಪ್ರಭಾರಿ ಇಓ

Team Udayavani, Aug 17, 2023, 11:24 PM IST

1-ssad

ಶಿರಸಿ: ವಾಟ್ಸಪ್‌ಗಳಲ್ಲಿ ಒಂದು ಮೆಸೇಜ್ ನೀಡಿದ ಪರಿಣಾಮ ಕೇವಲ 24 ಗಂಟೆಯೊಳಗೆ ತಾಲೂಕಿನ 32ಕ್ಕೂ ಅಧಿಕ ಗ್ರಾಮೀಣ ಬಸ್ ನಿಲ್ದಾಣಗಳು ಸ್ವಚ್ಛಗೊಂಡು ನಳ ನಳಿಸುವಂತೆ ಆಗಿದೆ. ಈವರೆಗೆ ಒಂದೇ ಒಂದು ಕಸಬರಿಗೆಯನ್ನೂ ಕಾಣದ ಹಳ್ಳಿ ಭಾಗದ ಅನೇಕ ಬಸ್ ನಿಲ್ದಾಣಗಳಲ್ಲಿ ಈಗ ಕಸವಿಲ್ಲದ ಸ್ಥಿತಿಗೆ ತಲುಪಲು ಆರಂಭಿಸಿದೆ.

ಗಲೀಜಾಗಿ ಬಸ್‌ಗಾಗಿ ಕಾಯಲು ಬಂದ ಪ್ರಯಾಣಿಕರು ಕೂಡ ಕೂರಲೂ ಆಗದೇ ಇದ್ದ ಸ್ಥಿತಿಯಲ್ಲಿದ್ದ ಅನೇಕ ಬಸ್ ನಿಲ್ದಾಣಗಳನ್ನು ಆಯಾ ಗ್ರಾಮ ಪಂಚಾಯ್ತಿಗಳ ಸಿಬಂದಿಗಳ, ಅಧಿಕಾರಿಗಳ ನೇತೃತ್ವದಲ್ಲಿ, ಹೊಸ ಅಧ್ಯಕ್ಷರ, ಉಪಾಧ್ಯಕ್ಷರ ತಂಡಗಳ ಮೇಲುಸ್ತುವಾರಿಯಲ್ಲಿ ಸ್ವಚ್ಛಗೊಳ್ಳುತ್ತಿವೆ.

ಏನಿದು ಕಮಾಲ್?
ಕಳೆದ ಆಗಸ್ಟ್ 7 ರಂದು ತಾಲೂಕು ಪಂಚಾಯ್ತಿಯಲ್ಲಿ ಗ್ರಾಮ ಪಂಚಾಯತ್ ಪಿಡಿಓಗಳ ಸಭೆ ನಡೆಸಿದ್ದ ಶಾಸಕ ಭೀಮಣ್ಣ ನಾಯ್ಕ ಅವರು ಒಂದು ಸೂಚನೆ ನೀಡಿದ್ದರು. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಇರಬೇಕು. ಹಾಗೆ ಗ್ರಾಮ ಪಂಚಾಯತ್ ಕೆಲಸ ಮಾಡಬೇಕು ಎಂದು ಹೇಳಿದ್ದರು.
ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿದ ತಾಲೂಕು ಪಂಚಾಯ್ತಿಯ ನೂತನ ಪ್ರಭಾರಿ ಕಾರ್ಯನಿರ್ವಹಣಾ ಅಧಿಕಾರಿ ಸತೀಶ ಹೆಗಡೆ ಅವರು ಬುಧವಾರ ಸಂಜೆ ಒಂದು ಮೆಸೇಜ್‌ನ್ನು ತಾಲೂಕು ಗ್ರಾಮ ಪಂಚಾಯ್ತಿಗಳ ಪಿಡಿಓಗಳ ಗ್ರೂಪ್‌ನಲ್ಲಿ ಹಾಕಿದ್ದರು. ಆಗಸ್ಟ್ 23ರೊಳಗೆ ಆಯಾ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯಲ್ಲಿನ ಎಲ್ಲ ಬಸ್ ನಿಲ್ದಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿ ಇರುವ ಒಣ ಕಸ ವಿಲೇವಾರಿ ಸಿಬಂದಿ ಹಾಗೂ ಪಂಚಾಯ್ತಿಯ ನೌಕರರು ಸಹಿತ, ಜನಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ಒಂದು ಅಭಿಯಾನ ಮಾದರಿಯಲ್ಲಿ ನಡೆಸುವಂತೆ ಕೋರಿದ್ದರು.

24 ಗಂಟೆಗೆ 32 ನಿಲ್ದಾಣ!
ಮೆಸೇಜ್ ಇಟ್ಟ 24 ಗಂಟೆಯೊಳಗೆ ತಾಲೂಕಿನ 32 ಗ್ರಾಮೀಣ ಬಸ್ ನಿಲ್ದಾಣಗಳು ಸ್ವಚ್ಛವಾದವು. ಗುದ್ದಲಿ, ಪಿಕಾಸಿ, ಕೆಲವಡೆ ನೀರನ್ನೂ ಒಯ್ದು ಸ್ವಚ್ಛಗೊಳಿಸಿದರು. ಬರಲಿರುವ ಆ.23 ರೊಳಗೆ 32 ಪಂಚಾಯ್ತಿ ವ್ಯಾಪ್ತಿಯ ಎಲ್ಲ ಸಣ್ಣ ಪುಟ್ಟ ಬಸ್ ನಿಲ್ದಾಣಗಳು ಸ್ವಚ್ಛವಾಗಿಸಲು ಗ್ರಾ.ಪಂ. ತಂಡ ಕೂಡ ಮುಂದಾಗಿದೆ.

ಒಂದೇ ದಿನ 45-50 ಕ್ವಿಂಟಾಲ್ ತನಕ ಕೂಡ ಕಸಗಳು ಸಿಕ್ಕಿರಬಹುದು ಎಂದು ಅಂದಾಜಿಸಲಾಗಿದೆ. ಪ್ಲಾಸ್ಟಿಕ್ ಕಸಗಳು, ಉಳಿಕೆ ತ್ಯಾಜ್ಯಗಳನ್ನು ಸಂಗ್ರಹಿಸಿ ತ್ಯಾಜ್ಯ ವಿಲೇವಾರಿ ಘಟಕಗಳಿಗೂ ಒಯ್ಯಲಾಯಿತು. ಒಂದೇ ದಿನಕ್ಕೇ ಈ ಪ್ರತಿಕ್ರಿಯೆ ಸಿಕ್ಕಿರುವದು ಅಚ್ಚರಿಯಾಗಿದೆ ಎಂದೂ ಇಓ ಸತೀಶ ಹೆಗಡೆ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸ್ವಚ್ಛತಾ ಅಭಿಯಾನದಲ್ಲಿ ಗ್ರಾಮ ಪಂಚಾಯ್ತಿಗಳ ಎಲ್ಲ ಅಧಿಕಾರಿಗಳು, ಸಿಬಂದಿಗಳು, ಜನಪ್ರತಿನಿಧಿಗಳು ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ವೃದ್ಧಿಸಿದೆ. ಶಾಸಕರ ಸೂಚನೆಯಂತೆ ನಮ್ಮ ಬಸ್ ನಿಲ್ದಾಣ ನಮ್ಮ ಹೆಮ್ಮೆ ಎಂಬ ಮಾದರಿಯಲ್ಲಿ ನಿರ್ವಹಣೆ ಆಗಲಿ ಎಂಬ ಆಶಯ ನಮ್ಮದು ಎಂದು ಸತೀಶ ಹೆಗಡೆ ಹೇಳಿದ್ದಾರೆ.

ಶೂನ್ಯ ಖರ್ಚು!
ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಮಾಹಿತಿ ನೀಡುವಾಗ ಪಂಚಾಯ್ತಿಗೆ ಖರ್ಚು ಬಾರದಂತೆ ಕ್ರಮ ಜರುಗಿಸಬೇಕು ಎಂದು ಇಓ ಅವರು ಸೂಚಿಸಿದ್ದರು. ಸಣ್ಣ ಪುಟ್ಟ ದುರಸ್ತಿ ಇದ್ದರೆ ಮಾಡಿಸಬಹುದು. ಸ್ವಚ್ಛತೆಗೆ ಯಾವುದೇ ಖರ್ಚು ಹಾಕದೇ ಅಭಿಯಾನ ನಡೆಸಬೇಕು ಎಂಬುದಾಗಿ ಹೇಳಿದ್ದರು.

ಸ್ವತಃ ಜನಪ್ರತಿನಿಧಿಗಳು, ಪಂಚಾಯ್ತಿ ಸಿಬಂದಿಗಳು ತೊಡಗಿಕೊಂಡಿದ್ದನ್ನು ನೋಡಿದ ಹಳ್ಳಿ ಭಾಗದ ಜನರೂ ಸ್ವಚ್ಛತಾ ಅಭಿಯಾನದಲ್ಲಿ ಕೈ ಜೋಡಿಸಿದ್ದು ಇನ್ನೊಂದು ವಿಶೇಷವಾಗಿದೆ. ಇದೊಂದು ಮಾದರಿ ಅಭಿಯಾನವಾಗಿ ನಿರಂತರವಾಗಿರುವಂತೆ ತಾವೂ ಸಹಕಾರ ನೀಡುವದಾಗಿ ಕೆಲವು ಗ್ರಾಮಸ್ಥರೂ ವಾಗ್ದಾನ ಮಾಡಿದ್ದು ಉಲ್ಲೇಖನೀಯವಾಗಿದೆ. ಗುರುವಾರದಿಂದ ಆರಂಭವಾದ ಈ ಸ್ವಚ್ಛತಾ ಅಭಿಯಾನವನ್ನು ಪ್ರಥಮ ಹಂತದಲ್ಲಿ ಆಯಾ ಪಂಚಾಯ್ತಿಯಗಳು ಆ.23 ರ ತನಕ ನಡೆಸಲಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.