UG NEET/CET: ಇಂದಿನಿಂದ ಪ್ರವೇಶ
Team Udayavani, Aug 17, 2023, 11:29 PM IST
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸಹಿತ ಇತರ ವೃತ್ತಿಪರ ಕೋರ್ಸ್‌ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಮುಗಿದಿದ್ದು, ಶುಲ್ಕ ಪಾವತಿಸಿ ಪ್ರವೇಶ ಪಡೆಯುವ ಪ್ರಕ್ರಿಯೆ ಶುಕ್ರವಾರ (ಆ. 18) ಆರಂಭವಾಗಲಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಆ.20ರ ಮಧ್ಯರಾತ್ರಿ 11.59ರ ವರೆಗೆ ಅವಕಾಶ ಇರುತ್ತದೆ. ಆ.19ರಿಂದ 22ರ ವರೆಗೆ ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ಧಾರೆ.
ಕೇವಲ ಆಯ್ಕೆ-1 ಅನ್ನು ನಮೂದಿಸಿರುವವರು ಶುಲ್ಕ ಪಾವತಿ ಮಾಡಿ, ಬಳಿಕ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಒಂದು ವೇಳೆ ಸಿಕ್ಕಿರುವ ಕಾಲೇಜು ಇಷ್ಟ ವಿಲ್ಲದೆ, ಉತ್ತಮ ಕಾಲೇಜು ಬೇಕೆನ್ನುವವರು ಆಯ್ಕೆ-2 ನಮೂದಿಸಿ, ಶುಲ್ಕ ಪಾವತಿ ಮಾಡಬೇಕು. ಇಂಥವರು 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ನೋಡಿ ಕೊಂಡು ಇಚ್ಛೆ ಪ್ರಕಾರ ಪ್ರವೇಶ ಪಡೆಯಬಹುದಾಗಿರುತ್ತದೆ. ಆಯ್ಕೆ- 1 ಅನ್ನು ನಮೂದಿಸಿದವರು ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಆ.23 ಕೊನೇ ದಿನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.