Heavy Rain: ಹಿಮಾಚಲ ಪ್ರದೇಶದಾದ್ಯಂತ ಭಾರಿ ಮಳೆಗೆ 74 ಮಂದಿ ಸಾವು, 10,000 ಕೋಟಿ ನಷ್ಟ
Team Udayavani, Aug 18, 2023, 9:06 AM IST
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಇದುವರೆಗೆ ಮಳೆ, ಭೂಕುಸಿತ, ಮೇಘಸ್ಪೋಟ ಘಟನೆಗಳಿಗೆ ಸಂಬಂಧಿಸಿ ಮೃತಪಟ್ಟವರ ಸಂಖ್ಯೆ ಗುರುವಾರದವರೆಗೆ 74 ಕ್ಕೆ ಏರಿದೆ
ರಕ್ಷಣಾ ಕಾರ್ಯಕರ್ತರು ಶಿಮ್ಲಾದ ಶಿವ ದೇವಾಲಯದ ಅವಶೇಷಗಳಿಂದ ಮತ್ತೊಂದು ದೇಹವನ್ನು ಹೊರತೆಗೆದರೆ, ಚಂಬಾದಲ್ಲಿ ಇನ್ನಿಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಿವ ದೇವಾಲಯದಲ್ಲಿ ಸಂಭವಿಸಿದ ಭೂಕುಸಿತ ಸೇರಿದಂತೆ ಶಿಮ್ಲಾದಲ್ಲಿ ಮೂರು ಪ್ರಮುಖ ಭೂಕುಸಿತಗಳಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಮುಂಗಾರು ಆರಂಭವಾದ 55 ದಿನಗಳಲ್ಲಿ ರಾಜ್ಯದಲ್ಲಿ 113 ಭೂಕುಸಿತಗಳು ಸಂಭವಿಸಿದ್ದು, ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) 2,491 ಕೋಟಿ ರೂ. ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) 1,000 ಕೋಟಿ ರೂ. ನಷ್ಟವಾಗಿದೆ.
ಶಿಮ್ಲಾದ ಸಮ್ಮರ್ ಹಿಲ್‌ನಲ್ಲಿ ರೈಲ್ವೇ ಹಳಿಗಳ ಒಂದು ಭಾಗ ಕೊಚ್ಚಿ ಹೋಗಿದ್ದು, ಹಳಿಗಳು ಗಾಳಿಯಲ್ಲಿ ನೇತಾಡುತ್ತಿವೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಂತಾಪ ಸೂಚಿಸಿದ್ದು ಭೂಕುಸಿತದಿಂದ ಹಾನಿಗೊಳಗಾದ ಮೂಲಸೌಕರ್ಯವನ್ನು ಮರುನಿರ್ಮಾಣ ಮಾಡುವುದು ದೊಡ್ಡ ಸವಾಲಿನ ಕೆಲಸವಾಗಿದೆ ಎಂದಿದ್ದಾರೆ.
ಪರಿಸರ ದುರ್ಬಲವಾದ ಹಿಮಾಲಯದಲ್ಲಿ ಅವೈಜ್ಞಾನಿಕ ನಿರ್ಮಾಣಗಳು, ಕ್ಷೀಣಿಸುತ್ತಿರುವ ಅರಣ್ಯ ಪ್ರದೇಶ ಮತ್ತು ನೀರಿನ ಹರಿವನ್ನು ತಡೆಯುವ ತೊರೆಗಳ ಬಳಿ ರಚನೆಗಳಿಂದ ಆಗಾಗ್ಗೆ ಭೂಕುಸಿತಗಳು ಉಂಟಾಗುತ್ತವೆ ಎಂದು ತಜ್ಞರು ಹೇಳುತ್ತಾರೆ.
ಜೂನ್ 24 ರಂದು ಮಾನ್ಸೂನ್ ಪ್ರಾರಂಭವಾದಾಗಿನಿಂದ ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 217 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Army Training School: ಕರಾವಳಿಯ ಸೇನಾ ತರಬೇತಿ ಶಾಲೆಗೆ ಬೀಗ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.