Bantwala: ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿಯಾಗಿ ಚಾಲಕ ಮೃತ್ಯು
Team Udayavani, Aug 18, 2023, 2:11 PM IST
ಬಂಟ್ವಾಳ: ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಆ.18ರ ಶುಕ್ರವಾರ ನಡೆದಿದೆ.
ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟ ಚಾಲಕ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದ.
ಈತನ ಸಹಿತ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಗಿತ್ತು. ಆದರೆ ಚಾಲಕ ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟ ಬಗ್ಗೆ ಆಸ್ಪತ್ರೆಯ ಮೂಲಗಳು ಪೊಲೀಸರಿಗೆ ಮಾಹಿತಿ ನೀಡಿದೆ.
ವಾಹನ ಚಾಲಕ ಗಂಭೀರ ಗಾಯಗೊಂಡಿದ್ದು, ತುರ್ತು ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಲಾಗಿದೆ.
ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.