Hit And Run Case: ಬೈಕ್ ಗೆ ಡಿಕ್ಕಿ ಹೊಡೆದು 3 ಕಿಲೋ ಮೀ.ವರೆಗೆ ಎಳೆದೊಯ್ದ ಕಾರು!
ಅದೃಷ್ಟವಶಾತ್ ಬೈಕ್ ಸವಾರರಿಬ್ಬರು ಸಾವಿನಿಂದ ಪಾರಾಗಿದ್ದಾರೆ
Team Udayavani, Aug 18, 2023, 2:36 PM IST
ಮಹಾರಾಷ್ಟ್ರ: ಬೈಕ್ ಸವಾರರಿಬ್ಬರಿಗೆ ಡಿಕ್ಕಿ ಹೊಡೆದ ಕಾರೊಂದು ಮೂರು ಕಿಲೋ ಮೀಟರ್ ವರೆಗೆ ಎಳೆದೊಯ್ದ ಹಿಟ್ ಆಂಡ್ ರನ್ ಘಟನೆ ಮಹಾರಾಷ್ಟ್ರದ ನಾಗ್ಪುರದ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Bantwala: ರೋಗಿಯನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಲ್ಟಿಯಾಗಿ ಚಾಲಕ ಮೃತ್ಯು
ಬೈಕ್ ಸವಾರರನ್ನು ರಾಕೇಶ್ ಗಾಟೆ ಮತ್ತು ಆಕಾಶ್ ಟೇಕಂ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣ ರಸ್ತೆಯ ರಾಜೀವ್ ನಗರದ ಪ್ರೈಡ್ ಹೋಟೆಲ್ ಸಮೀಪ ಕಾರು ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಆದರೆ ಕಾರು ಚಾಲಕ ಅತೀ ವೇಗದಿಂದ ಚಲಾಯಿಸಿಕೊಂಡು ಹೋಗುತ್ತಿದ್ದ.
ಕಾರಿನ ಮುಂಭಾಗದಲ್ಲಿ ಇಬ್ಬರು ಸವಾರರು ಸಿಲುಕಿಕೊಂಡಿದ್ದರು ಕೂಡಾ ಕಾರನ್ನು ನಿಲ್ಲಿಸದೇ ಸುಮಾರು ಮೂರು ಕಿಲೋ ಮೀಟರ್ ವರೆಗೆ ಎಳೆದೊಯ್ದು ಪರಾರಿಯಾಗಿದ್ದಾನೆ. ಅದೃಷ್ಟವಶಾತ್ ಬೈಕ್ ಸವಾರರಿಬ್ಬರು ಸಾವಿನಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.
कार में फसी बाइक को कार चालक ने 3 किलोमीटर तक घसीटा वायरल वीडियो नागपुर का है.@NagpurPolice #nagpur pic.twitter.com/GaaEo2w1GX
— rajni singh (@imrajni_singh) August 18, 2023
ಪ್ರತ್ಯಕ್ಷದರ್ಶಿಗಳ ಹೇಳಿಕೆ ಪ್ರಕಾರ, ಕಾರು ಅತಿಯಾದ ವೇಗದಲ್ಲಿದ್ದು, ಬೈಕ್ ಗೆ ಡಿಕ್ಕಿ ಹೊಡೆದ ನಂತರವೂ ಚಾಲಕ , ಬೈಕ್ ಸವಾರರನ್ನು ವಿಚಾರಿಸುವ ಬದಲು ವೇಗವಾಗಿಯೇ ಕಾರನ್ನು ಚಲಾಯಿಸಿಕೊಂಡು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಈ ಜನನಿಬಿಢ ರಸ್ತೆಯಲ್ಲಿ ಪೊಲೀಸರೂ ಇಲ್ಲವಾಗಿತ್ತು. ಹೀಗಾಗಿ ವೈರಲ್ ವಿಡಿಯೋವನ್ನು ಆಧರಿಸಿ ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.